Asianet Suvarna News Asianet Suvarna News

ಗ್ಯಾರಂಟಿಯಲ್ಲಿ ಹುಟ್ಟಿದ ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿಯಲ್ಲಿಯೇ ಮುಳುಗಿ ಹೋಗಲಿದೆ: ರಮೇಶ ಭೂಸನೂರ

ಗ್ಯಾರಂಟಿ ಯೋಜನೆಗಳಿಗೆ ಇಲ್ಲಸಲ್ಲದ ಮಾನದಂಡಗಳನ್ನು ಹೇರುವ ಮೂಲಕ ರಾಜ್ಯದ ಜನರನ್ನು ಸಂಕಷ್ಟಕ್ಕೆ ಸಿಲುಕಿಸಿದ್ದಾರೆ. ರಾಜ್ಯದಲ್ಲಿ ಬರಗಾಲದ ಛಾಯೆ ಮೂಡಿದ್ದು ಶೀಘ್ರದಲ್ಲಿ ಬರಗಾಲ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಿ ಅನುದಾನ ಬಿಡುಗಡೆ ಮಾಡಬೇಕು ಎಂದ ಮಾಜಿ ಶಾಸಕ ರಮೇಶ ಭೂಸನೂರ 

Former MLA Ramesh Bhusanur Slams Karnataka Congress Government grg
Author
First Published Sep 9, 2023, 9:30 PM IST

ಸಿಂದಗಿ(ಸೆ.09): ಗ್ಯಾರಂಟಿಯಲ್ಲಿ ಹುಟ್ಟಿದ ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿಯಲ್ಲಿಯೇ ಮುಳುಗಿ ಹೋಗಲಿದೆ ಎಂದು ಮಾಜಿ ಶಾಸಕ ರಮೇಶ ಭೂಸನೂರ ವ್ಯಂಗ್ಯವಾಡಿದರು. ಶುಕ್ರವಾರ ಪಟ್ಟಣದಲ್ಲಿ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನಡೆ ಖಂಡಿಸಿ ಬಿಜೆಪಿ ರೈತ ಮೋರ್ಚಾ ವತಿಯಿಂದ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಮಳೆಗಾಲದ ಸಮಯದಲ್ಲಿ ವಿದ್ಯುತ್ ಪೂರೈಕೆ ಮಾಡಲಾಗದ ಸ್ಥಿತಿಗೆ ರಾಜ್ಯ ಸರ್ಕಾರ ಬಂದು ನಿಂತಿದೆ. ಮಳೆಯಾಗದ ಹಿನ್ನೆಲೆಯಲ್ಲಿ ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಈ ಕುರಿತು ಜವಾಬ್ದಾರಿಯುತ ಸ್ಥಾನದಲ್ಲಿ ಇರುವ ಸಚಿವರು ಉಡಾಫೆ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಇಲ್ಲಸಲ್ಲದ ಮಾನದಂಡಗಳನ್ನು ಹೇರುವ ಮೂಲಕ ರಾಜ್ಯದ ಜನರನ್ನು ಸಂಕಷ್ಟಕ್ಕೆ ಸಿಲುಕಿಸಿದ್ದಾರೆ. ರಾಜ್ಯದಲ್ಲಿ ಬರಗಾಲದ ಛಾಯೆ ಮೂಡಿದ್ದು ಶೀಘ್ರದಲ್ಲಿ ಬರಗಾಲ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಿ ಅನುದಾನ ಬಿಡುಗಡೆ ಮಾಡಬೇಕು ಎಂದರು.

ಸಚಿವರೇ ನಿಮಗೆ 10 ಕೋಟಿ ರೂ. ಕೋಡ್ತೀವಿ, ನೇಣು ಹಾಕಿಕೊಳ್ಳಿ: ಮಾಜಿ ಸಚಿವ ಬೆಳ್ಳುಬ್ಬಿ ಸವಾಲು

ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಜೋಗೂರ, ಯಶವಂತರಾಯಗೌಡ ರೂಗಿ, ರೈತಮೋರ್ಚಾ ಮಾಜಿ ತಾಲೂಕು ಅಧ್ಯಕ್ಷ ಗೌಡಣ್ಣ ಪಾಟೀಲ, ಮಂಡಲ ಅಧ್ಯಕ್ಷ ಈರಣ್ಣ ರಾವೂರ, ಪ್ರಧಾನ ಕಾರ್ಯದರ್ಶಿ ಗುರು ತಳವಾರ ಮಾತನಾಡಿದರು.

ಈ ವೇಳೆ ಶಿವಕುಮಾರ ಬಿರಾದಾರ, ಶ್ರೀಶೈಲಗೌಡ ಬಿರಾದಾರ, ಅನುಸೂಯಾ ಪಾರಗೊಂಡ, ಶಾಮಲಾ ಮಂದೇವಾಲಿ, ಪ್ರಧಾನ ಕಾರ್ಯದರ್ಶಿ ಗುರು ತಳವಾರ, ಮಹಾಂತೇಶ ಹಿರೇಮಠ, ಶ್ರೀಮಂತ ಜೋಗೂರ, ಎಸ್.ಸಿ. ಮೋರ್ಚಾ ಅಧ್ಯಕ್ಷ ಸಿದ್ದು ಪೂಜಾರಿ, ಅರವಿಂದ ಹಡಗಲಿ, ವಿನಾಯಕ ಬಿರಾದಾರ, ಪ್ರಶಾಂತ ಕದ್ದರಗಿ ಮತ್ತಿತರು ಇದ್ದರು.

Follow Us:
Download App:
  • android
  • ios