ಕರ್ನಾಟಕದ ಮಾಜಿ MLCಗೆ ಕೊರೋನಾ ಅಟ್ಯಾಕ್, ಆಸ್ಪತ್ರೆಗೆ ದಾಖಲು

ಕರ್ನಾಟಕ ಮಾಜಿ ವಿಧಾನಪರಿಷತ್ ಸದಸ್ಯರೊಬ್ಬರಿಗೆ ಕೊರೋನಾ ವೈರಸ್ ಅಟ್ಯಾಕ್‌ ಆಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

Former MLC puttanna Tests positive for coronavirus

ಬೆಂಗಳೂರು, (ಜುಲೈ.04): ಮಾಜಿ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಅವರಿಗೂ ಕೊರೋನಾ ಸೋಂಕು ದೃಢಪಟ್ಟಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ವಿಷಯವನ್ನು ಸ್ವತಃ ಅವರೇ ತಮ್ಮ ಫೇಸ್​ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದು, ಚಿಕಿತ್ಸೆ ಪಡೆಯುತ್ತಿರುವುದಾಗಿ ಹೇಳಿದ್ದಾರೆ. ಎಲ್ಲರೂ ಮಾಸ್ಕ್ ಧರಿಸಿ ಆರೋಗ್ಯ ಕಾಪಾಡಿಕೊಳ್ಳಿ ಎನ್ನುವ ಸಲಹೆ ನೀಡಿದ್ದಾರೆ.

ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್‌ಗೆ ಕೊರೋನಾ ಭೀತಿ...!

'ಕಳೆದ ನಾಲ್ಕು ದಿನಗಳಿಂದ ಜ್ವರ ಇತ್ತು. ಹಾಗಾಗಿ ಕ್ವಾರಂಟೈನ್​ನಲ್ಲಿ ಇದ್ದೆ. ಗುರುವಾರ ಕೊರೋನಾ ಪರೀಕ್ಷೆ ಮಾಡಿಸಿಕೊಂಡಿದ್ದೆ. ತಪಾಸಣೆಯ ವರದಿ ಪಾಸಿಟಿವ್ ಬಂದಿರುವುದರಿಂದ ನಿನ್ನೆಯೇ(ಶುಕ್ರವಾರ) ಕೋವಿಡ್​ ಆಸ್ಪತ್ರೆಗೆ ದಾಖಲಾಗಿದ್ದೇನೆ. ದೇವರ ದಯೆ ಹಾಗೂ ನಿಮ್ಮ ಆಶೀರ್ವಾದದಿಂದ ಬೇಗ ಗುಣಮುಖನಾಗಿ ಬರುತ್ತೇನೆ' ಎಂದು ಪುಟ್ಟಣ್ಣ ಅವರು ಪೇಸ್​ಬುಕ್​ನಲ್ಲಿ ಬರೆದುಕೊಂಡಿದ್ದಾರೆ.
Former MLC puttanna Tests positive for coronavirus

ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಭರತ್ ಶೆಟ್ಟಿ ಅವರಿಗೂ ಕೊರೊನಾ ಸೋಂಕು ತಗುಲಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಇನ್ನು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಭದ್ರತಾ ಸಿಬ್ಬಂದಿಗೆ ಕೊರೋನಾ ಸೋಂಕು ತಗುಲಿದ್ದು, ಅವರೂ ಸಹ ಹೋಂ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.

Latest Videos
Follow Us:
Download App:
  • android
  • ios