ಬೆಂಗಳೂರು, (ಮಾ.01): ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಮ್ಮುಖದಲ್ಲಿ ಮಾಜಿ ಶಾಸಕ ತಿಪ್ಪೇಸ್ವಾಮಿ ಅವರು ಕಾಂಗ್ರೆಸ್ ಸೇರ್ಪಡೆಯಾದರು. 

 ಇಂದು (ಶುಕ್ರವಾರ)  ಕೆಪಿಸಿಸಿ ಕಚೇರಿಯಲ್ಲಿ ಸಂಸದ ಚಂದ್ರಪ್ಪ, ಮಾಜಿ ಸಚಿವ ಆಂಜನೇಯ, ಶಾಸಕ ರಘುಮೂರ್ತಿ, ಮಾಜಿ ಶಾಸಕ ಡಿ.ಸುಧಾಕರ್ ಉಪಸ್ಥಿತಿಯಲ್ಲಿ ಸೇರ್ಪಡೆಯಾದರು.

ಕಾಂಗ್ರೆಸ್ ಅತೃಪ್ತ ಶಾಸಕ ಬಿಜೆಪಿ ಸೇರ್ಪಡೆ ಖಚಿತಪಡಿಸಿದ ಈಶ್ವರಪ್ಪ

ಕಳೆದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ಟಿಕೆಟ್ ಸಿಗದ ಕಾರಣದಿಂದ ತಿಪ್ಪೇಸ್ವಾಮಿ, ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. 

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಬಿ. ಶ್ರೀರಾಮುಲು ವಿರುದ್ಧ ತಿಪ್ಪೇಸ್ವಾಮಿ ಪರಭಾವಗೊಂಡಿದ್ದರು.

ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಬಂಡಾಯ ಸ್ಪರ್ಧಿಸಿದ್ದ ತಿಪ್ಪೇಸ್ವಾಮಿ ಅವರು ಕಾಂಗ್ರೆಸ್ ಟಿಕೇಟ್ ಬಯಸಿದ್ದರು. ಆದ್ರೆ, ಕಾಂಗ್ರೆಸ್ ಟಿಕೇಟ್ ನೀಡಲು ನಿರಾಕರಿಸಿತ್ತು.

ಇದೀಗ ಮುಂಬರುವ ಲೋಕಸಭಾ ಚುನಾವಣೆ ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್, ತಿಪ್ಪೇಸ್ವಾಮಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡಿದೆ.