ನೂತನ ಕೇಂದ್ರ ಸಚಿವ ಕುಮಾರಸ್ವಾಮಿಗೆ ಅಭಿನಂದಿಸಿದ ಸುಮಲತಾ ಅಂಬರೀಶ್
ನೂತನ ಮಂಡ್ಯದ ಸಂಸದ ಹಾಗೂ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಎಚ್.ಡಿ. ಕುಮಾರಸ್ವಾಮಿ ಅವರನ್ನ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ್ದೇನೆ. ಮಂಡ್ಯ, ಕರ್ನಾಟಕ ಹಾಗೂ ವಿಕಸಿಕ ಭಾರತದ ಅಭಿವೃದ್ಧಿಯ ಪ್ರಯತ್ನಕ್ಕೆ ಶುಭವಾಗಲಿ ಎಂದು ಹಾರೈಸಿದ ಸುಮಲತಾ ಅಂಬರೀಶ್
ಬೆಂಗಳೂರು(ಜೂ.11): ನೂತನ ಮಂಡ್ಯದ ಸಂಸದ ಹಾಗೂ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಎಚ್.ಡಿ. ಕುಮಾರಸ್ವಾಮಿ ಅವರನ್ನ ಮಂಡ್ಯದ ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರು ಅಭಿನಂದಿಸಿದ್ದಾರೆ.
ಈ ಕುರಿತು ಎಕ್ಸ್ ಬರೆದುಕೊಂಡಿರುವ ಸುಮಲತಾ ಅಂಬರೀಶ್ ಅವರು, ನೂತನ ಮಂಡ್ಯದ ಸಂಸದ ಹಾಗೂ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಎಚ್.ಡಿ. ಕುಮಾರಸ್ವಾಮಿ ಅವರನ್ನ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ್ದೇನೆ ಎಂದಿದ್ದಾರೆ.
ಮಂಡ್ಯ, ಕರ್ನಾಟಕ ಹಾಗೂ ವಿಕಸಿಕ ಭಾರತದ ಅಭಿವೃದ್ಧಿಯ ಪ್ರಯತ್ನಕ್ಕೆ ಶುಭವಾಗಲಿ ಎಂದು ಹಾರೈಸಿದ್ದಾರೆ.ಇದೇ ವೇಳೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ನೂತನ ಬಿಜೆಪಿ ಸಂಸದ ಡಾ. ಸಿ.ಎನ್.ಮಂಜುನಾಥ್ ಅವರೂ ಸಹ ಇದೇ ವೇಳೆ ಉಪಸ್ಥಿತರಿದ್ದರು.