Asianet Suvarna News Asianet Suvarna News

ರಾಷ್ಟ್ರಪತಿ ಅಭ್ಯರ್ಥಿಯಾಗಿ ಎಚ್. ಡಿ ದೇವೇಗೌಡ?: ದೀದೀ ಸಭೆಯಲ್ಲಿ ಭಾಗಿ!

* ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆಗೆ ಇಂದು ಮಮತಾ ಸಭೆ

* ವಿಪಕ್ಷಗಳಿಂದ ಒಮ್ಮತದ ಅಭ್ಯರ್ಥಿ ಕಣಕ್ಕಿಳಿಸುವ ಯತ್ನ

* ರಾಷ್ಟ್ರಪತಿ ಅಭ್ಯರ್ಥಿಯಾಗಿ ಎಚ್ ಡಿ ದೇವೇಗೌಡ.?

* ತೃತೀಯ ರಂಗದ ಒಮ್ಮತದ ಅಭ್ಯರ್ಥಿ ಯಾಗಿ ಆಯ್ಕೆ ಆಗಲಿದ್ದಾರಾ ಎಚ್‌ಡಿ ದೇವೇಗೌಡ

Former PM Devegowda and HD Kumaraswamy to participate in Mamata Banerjee meet on opposition President candidate pod
Author
Bangalore, First Published Jun 15, 2022, 11:37 AM IST

ನವದೆಹಲಿ(ಜೂ.15): ರಾಷ್ಟ್ರಪತಿ ಚುನಾವಣೆಯಲ್ಲಿ ವಿಪಕ್ಷಗಳ ವತಿಯಿಂದ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂಬ ಉದ್ದೇಶದಿಂದ ತೃಣಮೂಲ ಕಾಂಗ್ರೆಸ್‌ ನಾಯಕಿ ಮಮತಾ ಬ್ಯಾನರ್ಜಿ ಅವರು ಬುಧವಾರ ದಿಲ್ಲಿ ಕಾನ್‌ಸ್ಟಿಟ್ಯೂಷನ್‌ ಕ್ಲಬ್‌ನಲ್ಲಿ ಪ್ರತಿಪಕ್ಷಗಳ ಸಭೆ ಆಯೋಜಿಸಿದ್ದಾರೆ. ಇನ್ನು ಈ ಸಭೆಯಲ್ಲಿ ಪಾಲ್ಗೊಳ್ಳಲು ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌. ಡಿ. ದೇವೇಗೌಡ ಹಾಘೂ ಮಾಜಿ ಸಿಎಂ ಕುಮಾರಸ್ವಾಮಿ ಕೂಡಾ ದೆಹಲಿಗೆ ತೆರಳಿದ್ದಾರೆ. 

 

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಎಚ್‌ಡಿ ಕುಮಾರಸ್ವಾಮಿ, ರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳ ಒಕ್ಕೂಟದಿಂದ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆ ಚರ್ಚೆ ನಡೆಸಲು ಮಮತಾ ಬ್ಯಾನರ್ಜಿ ದೆಹಲಿಯಲ್ಲಿ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಪಾಲ್ಗೊಳ್ಳಬೇಕು ಎಂದು ಅವರು ಜೆಡಿಎಸ್‌ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಎಚ್‌ಡಿ ದೇವೇಗೌಡರಿಗೆ ಹಾಗೂ ನನಗೆ ವೈಯಕ್ತಿಕವಾಗಿ ಕರೆ ಮಾಡಿ ಆಹ್ವಾನಿಸಿದ್ದಾರೆ. ಹೀಗಾಗಿ ನಾವಿಬ್ಬರೂ ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದೇವೆ ಎಂದಿದ್ದಾರೆ.

ಕಾಂಗ್ರೆಸ್‌ ಸೇರಿದಂತೆ 22 ಪಕ್ಷಗಳಿಗೆ ಸಭೆಗೆ ಆಹ್ವಾನ ನೀಡಲಾಗಿದೆ. ಮಮತಾ ವಿರೋಧಿ ಪಕ್ಷವಾದರೂ ಕಾಂಗ್ರೆಸ್‌ ವತಿಯಿಂದ ಮಲ್ಲಿಕಾರ್ಜುನ ಖರ್ಗೆ, ರಣದೀಪ್‌ ಸುರ್ಜೇವಾಲಾ ಹಾಗೂ ಜೈರಾಂ ರಮೇಶ್‌ ಅವರು ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ಹೀಗಿರುವಾಗ ಈ ಮಹತ್ವದ ಸಭೆಯಲ್ಲಿ ಸಭೆಯಲ್ಲಿ ತೃತೀಯ ರಂಗದ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಸಾದ್ಯತೆ ಇದೆ ಎನ್ನಲಾಗಿದೆ. ಶರತ್ ಪವಾರ್ ಅಥವಾ ದೇವೇಗೌಡ ಇಬ್ಬರಲ್ಲಿ ಒಬ್ಬರನ್ನು ಅಭ್ಯರ್ಥಿ ಮಾಡಲು ತೃತೀಯ ರಂಗದ ಆಸಕ್ತಿ ತೋರಿದ್ದಾರೆನ್ನಲಾಗಿದೆ. 

ಈ ನಡುವೆ, ಕಾಂಗ್ರೆಸ್‌ ವಿರುದ್ಧ ತೊಡೆ ತಟ್ಟಿರುವ ಟಿಆರ್‌ಎಸ್‌ ನಾಯಕ ಕೆ. ಚಂದ್ರಶೇಖರರಾವ್‌ ಅವರು, ಕಾಂಗ್ರೆಸ್ಸಿಗರು ಬರುತ್ತಾರೆ ಎಂಬ ಕಾರಣಕ್ಕೆ ಸಭೆ ಬಹಿಷ್ಕರಿಸುವ ಸಾಧ್ಯತೆ ಇದೆ. ಇದರ ಬದಲು ಪುತ್ರ ಕೆ.ಟಿ. ರಾಮರಾವ್‌ರನ್ನು ಸಭೆಗೆ ಕಳಿಸಿಕೊಡುವ ನಿರೀಕ್ಷೆ ಇದೆ. ಎನ್‌ಡಿಎ ಅಭ್ಯರ್ಥಿಗೆ ಬೆಂಬಲ ನೀಡುವ ಒಲವು ಹೊಂದಿರುವ ಜಗನ್ಮೋಹನ ರೆಡ್ಡಿ ಅವರ ವೈಎಸ್ಸಾರ್‌ ಕಾಂಗ್ರೆಸ್‌ ಕೂಡ ಸಭೆಗೆ ಬರುವ ಸಾಧ್ಯತೆ ಇಲ್ಲ. ಇನ್ನು ಏಕಪಕ್ಷೀಯವಾಗಿ ಸಭೆ ಕರೆದಿದ್ದಕ್ಕೆ ಅಪಸ್ವರ ಎತ್ತಿರುವ ಎಡಪಕ್ಷಗಳ ನಾಯಕರು, ತಮ್ಮ ಬದಲಿಗೆ ತಮ್ಮ ಪಕ್ಷದ ಸಂಸದರನ್ನು ಸಭೆಗೆ ಕಳುಹಿಸಲು ನಿರ್ಧರಿಸಿದ್ದಾರೆ.

ರಾಷ್ಟ್ರಪತಿ ಅಭ್ಯರ್ಥಿಯಾಲು ಪವಾರ್‌ ನಿರಾಸಕ್ತಿ

ರಾಷ್ಟ್ರಪತಿ ಚುನಾವಣೆಗೆ ವಿಪಕ್ಷಗಳಿಂದ ಒಮ್ಮತದ ಅಭ್ಯರ್ಥಿ ಕಣಕ್ಕಿಳಿಸುವ ಯತ್ನ ನಡೆದಿರುವಾಗಲೇ ಈ ಹುದ್ದೆಗೆ ಎನ್‌ಸಿಪಿ ನಾಯಕ ಶರದ್‌ ಪವಾರ್‌ ಹೆಸರು ಕೇಳಿ ಬರುತ್ತಿದೆ. ಆದರೆ ‘ಪವಾರ್‌ ಅವರು ಕಣಕ್ಕಿಳಿಯಲು ನಿರಾಕರಿಸಿದ್ದಾರೆ’ ಎಂದು ಎನ್‌ಸಿಪಿ ಮುಖಂಡರು ಹಾಗೂ ಸಿಪಿಎಂ ಮೂಖಂಡರು ಹೇಳಿದ್ದಾರೆ.

ಮಂಗಳವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಸಿಪಿಎಂ ನಾಯಕ ಸೀತಾರಾಂ ಯೆಚೂರಿ ಅವರು ಪ್ರತ್ಯೇಕವಾಗಿ ದಿಲ್ಲಿಯಲ್ಲಿ ಪವಾರ್‌ರನ್ನು ಭೇಟಿ ಮಾಡಿದರು. ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಯೆಚೂರಿ, ‘ಸ್ಪರ್ಧೆಗೆ ಪವಾರ್‌ ನಿರಾಕರಿಸಿದರು’ ಎಂದರು.

ಈ ನಡುವೆ, ಎನ್‌ಸಿಪಿ ನಾಯಕರೊಬ್ಬರು ಮುಂಬೈನಲ್ಲಿ ಪ್ರತಿಕ್ರಿಯಿಸಿ, ‘ಕೆಲವು ವಿಪಕ್ಷ ನಾಯಕರು ಪವಾರ್‌ ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂದು ಬಯಸಿದ್ದಾರೆ. ಆದರೆ ಪವಾರ್‌ ಉತ್ಸುಕರಾಗಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

Follow Us:
Download App:
  • android
  • ios