Asianet Suvarna News Asianet Suvarna News

ವರುಣನ ಅಬ್ಬರ: ಮನೆ-ಮಠ ಕಳೆದುಕೊಂಡವರಿಗೆ ಸರ್ಕಾರ ಪರಿಹಾರ ಒದಗಿಸಬೇಕು, ದೇವೇಗೌಡ

ಅತಿವೃಷ್ಟಿಯಿಂದ ಬಳಲುತ್ತಿರುವ ರಾಜ್ಯದ ಜನತೆಗೆ ಕೂಡಲೇ ಆಸರೆ ಕೇಂದ್ರಗಳನ್ನು ಸ್ಥಾಪಿಸಬೇಕು| ಸತತ ನೆರೆಯಿಂದ ಸಂತ್ರಸ್ತರಾಗಿರುವ ರಾಜ್ಯದ ಜನತೆಗೆ ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ ವಿಶೇಷ ಅರ್ಥಿಕ ನೆರವು ನೀಡಬೇಕು| ರಾಜ್ಯ ಸರ್ಕಾರ ಕೂಡ  ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು:ಹೆಚ್.ಡಿ.ದೇವೇಗೌಡ|

Former PM H D Devegowda Urge to Government Should Provide Relief due to Rain
Author
Bengaluru, First Published Aug 7, 2020, 12:39 PM IST

ಬೆಂಗಳೂರು(ಆ.07):  ರಾಜ್ಯದಲ್ಲಿ ಮಹಾಮಾರಿ ಕೊರೋನಾ ಒಂದು ಕಡೆ ವ್ಯಾಪಕವಾಗಿ ಹರಡುತ್ತಿದೆ ಇದರ ಜೊತೆಗೆ ದುರದೃಷ್ಟವಷಾತ್ ರಾಜ್ಯದಲ್ಲಿ ಅತಿವೃಷ್ಟಿಯಿಂದ ಜನತೆ ಕಂಗಾಲಾಗಿದ್ದಾರೆ. ಅತಿವೃಷ್ಟಿಯಿಂದ ನಲುಗಿರುವ ರಾಜ್ಯದ ಜನತೆಯನ್ನು ಮತ್ತು ಜಾನುವಾರುಗಳನ್ನು ರಕ್ಷಿಸುವ ಕೆಲಸ ತತ್‌ಕ್ಷಣ ಆಗಬೇಕಾಗಿದೆ ಸರ್ಕಾರ ಕೈಗೊಳ್ಳುವ ಪರಿಹಾರ ಕಾರ್ಯಕ್ಕೆ ನಾವೆಲ್ಲ ಜೊತೆ ನಿಲ್ಲುತ್ತೇವೆ ಎಂದು ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಹೆಚ್. ಡಿ. ದೇವೇಗೌಡ ಹೇಳಿದ್ದಾರೆ. 

ಈ ಸಂಬಂಧ ಮಾಧ್ಯಮ ಪ್ರಕಟಣೆಯೊಂದನ್ನ ಹೊರಡಿಸಿರುವ ದೇವೇಗೌಡ ಅವರು, ಇದೆ ಸಮಯದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೊರೋನಾ ಸೋಂಕು ತಗುಲಿದೆ ಅವರು ಆಸ್ಪತ್ರೆಯಿಂದಲೇ ಕಾರ್ಯ ನಿರ್ವಹಿಸಬೇಕಾದ ಸಂದರ್ಭ ಬಂದಿದೆ. ಬಹುತೇಕ ರಾಜ್ಯದ ಎಲ್ಲ ಜಿಲ್ಲೆಗಳು ಮುಂಗಾರಿನ ಅಬ್ಬರದ ಭೀತಿಯಿಂದ ನಲುಗಿದೆ. ಆದ್ದರಿಂದ ಮುಖ್ಯಮಂತ್ರಿಗಳು ಮತ್ತು ಸಚಿವರುಗಳು ವಿಶೇಷ ಕಾರ್ಯಪಡೆ ರಚಿಸಿ ನೆರೆ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಬೇಕಿದೆ ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. 

'ಒಂದ್ಕಡೆ ಕೊರೋನಾ ಮತ್ತೊಂದ್ಕಡೆ ಭಾರೀ ಮಳೆ, ಬಿಎಸ್‌ವೈ ಸರ್ಕಾರಕ್ಕೆ ಅಗ್ನಿಪರೀಕ್ಷೆ'

ಅತಿವೃಷ್ಟಿಯಿಂದ ಬಳಲುತ್ತಿರುವ ರಾಜ್ಯದ ಜನತೆಗೆ ಕೂಡಲೇ ಆಸರೆ ಕೇಂದ್ರಗಳನ್ನು ಸ್ಥಾಪಿಸಬೇಕಾಗಿದೆ. ಬಹುತೇಕ ರಾಜ್ಯದೆಲ್ಲೆಡೆ ಬೆಳೆಗಳು ಹಾನಿಗೊಳಗಾಗಿದೆ ಜೊತೆಗೆ ಮನೆ-ಮಠ ಕಳೆದುಕೊಂಡವರಿಗೆ ತಡ ಮಾಡದೆ ಸರ್ಕಾರ ಕೂಡಲೇ ಪರಿಹಾರ ಒದಗಿಸುವ ಕೆಲಸ ಮಾಡಬೇಕಾಗಿದೆ ಎಂದು ಆಗ್ರಹಿಸಿದ್ದಾರೆ. 

ಸತತ ನೆರೆಯಿಂದ ಸಂತ್ರಸ್ತರಾಗಿರುವ ರಾಜ್ಯದ ಜನತೆಗೆ ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ ವಿಶೇಷ ಅರ್ಥಿಕ ನೆರವು ನೀಡಬೇಕೆಂದು ಮಾಧ್ಯಮಗಳ ಮುಖೇನ ಆಗ್ರಹಿಸುತ್ತೇನೆ. ಈ ಸಂಬಂಧ ರಾಜ್ಯ ಸರ್ಕಾರ ಕೂಡ  ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕೆಂದು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ. 

ಅತಿವೃಷ್ಟಿಯಿಂದ ಹಾನಿಗೊಳಗಾಗಿರುವ ಸ್ಥಳಗಳಲ್ಲಿ ಪರಿಹಾರ ಕಾಮಗಾರಿಗಳಿಗೆ ತಕ್ಷಣ ಹಣಕಾಸಿನ ವ್ಯವಸ್ಥೆಯನ್ನು ಮಾಡಬೇಕೆಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸುತ್ತೇನೆ ಎಂದು ಹೆಚ್.ಡಿ.ದೇವೇಗೌಡ ಹೇಳಿದ್ದಾರೆ.
 

Follow Us:
Download App:
  • android
  • ios