ಪ್ರಜ್ವಲ್ ಎಲ್ಲಿದ್ದರೂ ಬಂದು ಪೊಲೀಸರಿಗೆ ಶರಣಾಗು; ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರಿಂದ ಖಡಕ್ ಎಚ್ಚರಿಕೆ

ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಮೇಲೆ ಅತ್ಯಾಚಾರ ಆರೋಪ ಕೇಳಿಬಂದ ಬೆನ್ನಲ್ಲಿಯೇ ವಿದೇಶಕ್ಕೆ ಹೋಗಿ ಸುಮಾರು 25 ದಿನಗಳು ಕಳೆದ ನಂತರ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಎಚ್ಚರಿಕೆ ರವಾನಿಸಿದ್ದಾರೆ.

Former Prime Minister HD Deve Gowda warned Prajwal Revanna to return to India sat

ಬೆಂಗಳೂರು (ಮೇ 23): ಹಾಸನ ಸಂಸದ ಪ್ರಜ್ವಲ್ ರೇವಣ್ಣನಿಗೆ ಮಾಜಿ ಪ್ರಧಾನಿಗಳೂ ಆಗಿರುವ ಅವರ ತಾತ ಹೆಚ್.ಡಿ. ದೇವೇಗೌಡ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಪ್ರಜ್ವಲ್‌ ನೀನು ಎಲ್ಲಿದ್ದರೂ ಬಂದು, ಪೋಲಿಸರ ಮುಂದೆ ಶರಣಾಗಿ, ವಿಚಾರಣೆಯನ್ನು ಎದುರಿಸಬೇಕು. ಇದು ನಾನು ನಿನಗೆ ಕೊಡುತ್ತಿರುವ ಎಚ್ಚರಿಕೆಯಾಗಿದೆ. ಈ ಎಚ್ಚರಿಕೆಗೆ ಮನ್ನಣೆ ಕೊಡದಿದ್ದಲ್ಲಿ ಅವನು ನನ್ನ ಮತ್ತು ಕುಟುಂಬದವರೆಲ್ಲರ ಕೋಪವನ್ನೂ ಎದುರಿಸಬೇಕಾಗುತ್ತದೆ ಎಂದು ಖಡಕ್ ಸೂಚನೆಯನ್ನೂ ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪತ್ರವನ್ನು ಬರೆದು ಹಂಚಿಕೊಂಡಿರುವ ದೇವೇಗೌಡರು ಪತ್ರದಲ್ಲಿ ಈ ರೀತಿ ಉಲ್ಲೇಖ ಮಾಡಿದ್ದಾರೆ. 'ನಾನು ಮೇ 18ನೇ ತಾರೀಖಿನಂದು ದೇವಸ್ಥಾನಕ್ಕೆ ಹೊರಟಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣನ ಕುರಿತಾಗಿ ಮಾತನಾಡಿದ್ದೆ. ಆತ ನನಗೆ, ನನ್ನ ಕುಟುಂಬಕ್ಕೆ, ನನ್ನ ಸಹೋದ್ಯೋಗಿಗಳಿಗೆ, ಸ್ನೇಹಿತರಿಗೆ ಮತ್ತು ನನ್ನ ಪಕ್ಷದ ಕಾರ್ಯಕರ್ತರಿಗೆ ತಂದೊಡ್ಡಿರುವ ಆಘಾತ ಮತ್ತು ನೋವಿನಿಂದ ಹೊರಬಂದು ಮಾತನಾಡಲು ಕೊಂಚ ಸಮಯ ಹಿಡಿಯಿತು. ನಾನು ಈಗಾಗಲೇ ಸ್ಪಷ್ಟಪಡಿಸಿರುವ ಹಾಗೆ ಕಾನೂನಿನ ಪ್ರಕಾರ ಅವನು ತಪ್ಪಿತಸ್ಥನೆಂದಾದರೆ, ಅವನಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು. ನನ್ನ ಈ ನಿಲುವನ್ನು ನನ್ನ ಮಗ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಶ್ರೀ ಹೆಚ್.ಡಿ. ಕುಮಾರಸ್ವಾಮಿಯವರು ಹಗರಣ ಹೊರಬಿದ್ದ ಮೊದಲ ದಿನದಿಂದಲೇ ಪ್ರತಿಪಾದಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣ: ಪ್ರಧಾನಿಗೆ ಸಿದ್ದರಾಮಯ್ಯ 2ನೇ ಪತ್ರ..ಪಾಸ್‌ಪೋರ್ಟ್‌ ರದ್ದತಿಗೆ ಮತ್ತೆ ಮನವಿ

ಈ ಕೆಲವು ವಾರಗಳಿಂದ ಜನರು ನನ್ನ ಮತ್ತು ನನ್ನ ಕುಟುಂಬದವರ ಕುರಿತಾಗಿ ಅತ್ಯಂತ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದೆಲ್ಲವೂ ನನಗೆ ತಿಳಿದಿದೆ. ನಾನು ಅವರು ಮಾತನಾಡುವುದನ್ನು ನಿಲ್ಲಿಸುವ ಪ್ರಯತ್ನ ಮಾಡುವುದಿಲ್ಲ. ನಾನು ಅವರನ್ನು ಟೀಕೆ ಮಾಡಲೂ ಹೋಗುವುದಿಲ್ಲ. ಈ ಹಗರಣದ ಎಲ್ಲಾ ಸತ್ಯಾಂಶಗಳು ಹೊರಬರುವವರೆಗೂ ಅವರು ತಾಳ್ಮೆಯಿಂದ ಕಾಯಬೇಕಿತ್ತು ಎಂದು ಅವರೊಂದಿಗೆ ವಾದಕ್ಕೆ ಇಳಿಯುವುದಿಲ್ಲ. ಪ್ರಜ್ವಲ್‌ನ ಚಟುವಟಿಕೆಗಳ ಬಗ್ಗೆ ನನಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ನಾನು ಅವರಿಗೆ ಮನವರಿಕೆ ಮಾಡಿಕೊಡಲು ಸಾಧ್ಯವಿಲ್ಲ. ಅವನನ್ನು ರಕ್ಷಿಸುವ ಯಾವುದೇ ಇರಾದೆಯೂ ನನಗಿಲ್ಲ. ಅವನ ಈಗಿನ ಚಲನವಲನ ಮತ್ತು ಅವನ ವಿದೇಶಿ ಯಾತ್ರೆಯ ಬಗ್ಗೆ ನನಗೆ ಏನೂ ತಿಳಿದಿಲ್ಲ, ತಿಳಿದಿರಲಿಲ್ಲ ಎಂದು ನಾನು ಜನರಿಗೆ ಅರ್ಥ ಮಾಡಿಸಲು ಸಾಧ್ಯವಿಲ್ಲ. ನಾನು ನನ್ನ ಆತ್ಮಸಾಕ್ಷಿಗೆ ಮಾತ್ರ ಉತ್ತರಿಸಬಲ್ಲೆ. ನನಗೆ ದೇವರಲ್ಲಿ ನಂಬಿಕೆ ಇದೆ ಮತ್ತು ಆ ದೇವರಿಗೆ ಎಲ್ಲಾ ಸತ್ಯ ತಿಳಿದಿದೆ ಎಂದು ನಾನು ನಂಬಿದ್ದೇನೆ.

ನಾನು ಈಚಿನ ದಿನಗಳಲ್ಲಿ ನಡೆದಿರುವ ರಾಜಕೀಯ ಪಿತೂರಿಗಳು, ಚಿತಾವಣೆಗಳು, ಉಪ್ಪೇಕ್ಷೆಗಳು ಮತ್ತು ಮಿಥ್ಯಾರೋಪಗಳ ಬಗ್ಗೆ ಈಗ ವಿಶ್ಲೇಷಣೆ ಮಾಡಲು ಹೋಗುವುದಿಲ್ಲ. ಅವುಗಳನ್ನು ಮಾಡಿದವರು ದೇವರಿಗೆ ಉತ್ತರಿಸಬೇಕಾಗುತ್ತದೆ ಮತ್ತು ತಾವು ಎಸಗಿದ ಕೃತ್ಯಗಳಿಗೆ ಸೂಕ್ತ ಬೆಲೆ ತೆರಬೇಕಾಗುತ್ತದೆ ಎಂದು ನಂಬಿದ್ದೇನೆ. ನನ್ನ ಸತ್ಯ ಮತ್ತು ನೋವಿನ ಹೊರೆಯನ್ನು ಭಗವಂತನ ಪದತಳದಲ್ಲಿ ಇರಿಸಿದ್ದೇನೆ.

ಜೈಲಿನಲ್ಲಿದ್ದರೂ ಹಪ್ತಾ ವಸೂಲಿ ಕೈಬಿಡದ ವಿಲ್ಸನ್ ಗಾರ್ಡನ್ ನಾಗ; ಬಿಲ್ಡರ್‌ಗಳಿಗೆ ಜೀವ ಬೆದರಿಕೆ

ಈ ಸಂದರ್ಭದಲ್ಲಿ ನಾನು ಈಗ ಒಂದು ಕೆಲಸವನ್ನಷ್ಟೆ ಮಾಡಬಲ್ಲೆ. ಅದೇನೆಂದರೆ, ಪ್ರಜ್ವಲ್‌ನು ಎಲ್ಲಿದ್ದರೂ ಬಂದು, ಪೋಲಿಸರ ಮುಂದೆ ಶರಣಾಗಿ, ವಿಚಾರಣೆಯನ್ನು ಎದುರಿಸಬೇಕು ಎಂದು ಯಾವುದೇ ಮುಲಾಜು, ಮರ್ಜಿಯಿಲ್ಲದೆ ಹೇಳಬಲ್ಲೆ ಮತ್ತು ಹೇಳುತ್ತಿದ್ದೇನೆ. ಇದು ನಾನು ಅವನಿಗೆ ಕೊಡುತ್ತಿರುವ ಎಚ್ಚರಿಕೆ ಎಂದು ಕೂಡ ತಿಳಿಯಬೇಕು. ಅವನು ಈ ಎಚ್ಚರಿಕೆಗೆ ಮನ್ನಣೆ ಕೊಡದಿದ್ದಲ್ಲಿ ಅವನು ನನ್ನ ಮತ್ತು ಕುಟುಂಬದವರೆಲ್ಲರ ಕೋಪವನ್ನೂ ಎದುರಿಸಬೇಕಾಗುತ್ತದೆ. ಅವನು ಎಸಗಿದ್ದಾನೆ ಎನ್ನಲಾದ ತಪ್ಪುಗಳನ್ನು ತೀರ್ಮಾನಿಸಲು ಕಾನೂನು ಇದೆ. ಆದರೆ ಈ ಎಚ್ಚರಿಕೆಗೆ ಅವನು ತಲೆಬಾಗದಿದ್ದಲ್ಲಿ, ಅವನು ಮನೆಯವರ ಕಣ್ಣಲ್ಲಿ ಏಕಾಂಗಿಯಾಗುವುದರಲ್ಲಿ ಸಂದೇಹವಿಲ್ಲ. ನನ್ನ ಬಗ್ಗೆ ಅವನಿಗೆ ಏನಾದರೂ ಗೌರವವಿದ್ದಲ್ಲಿ ಅವನು ಕೂಡಲೆ ಹಿಂದಿರುಗಿ ಬರಬೇಕು.

ನಾನಾಗಲಿ, ನನ್ನ ಕುಟುಂಬದವರಾಗಲಿ ಈ ವಿಚಾರಣೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಭರವಸೆ ಕೊಡುತ್ತೇನೆ. ಇದರಲ್ಲಿ ಯಾವುದೇ ಭಾವನೆಗೆ ಸಿಲುಕದೆ, ಅವನು ಎಸಗಿದ್ದಾನೆ ಎನ್ನಲಾದ ಕೃತ್ಯಗಳು ಮತ್ತು ತಪ್ಪುಗಳಿಂದ ನೊಂದಿರುವ, ಅನ್ಯಾಯಕ್ಕೆ ಒಳಗಾಗಿರುವ ಎಲ್ಲರಿಗೂ ನ್ಯಾಯ ಸಿಗುವುದಷ್ಟೆ ನನಗೆ ಮುಖ್ಯ. ಜನರ ವಿಶ್ವಾಸವನ್ನು ಮರಳಿ ಪಡೆಯುವುದಷ್ಟೆ ನನ್ನ ಗುರಿ. ಜನರು ಆರು ದಶಕಗಳ ಕಾಲದ ನನ್ನ ರಾಜಕೀಯ ಜೀವನದುದ್ದಕ್ಕೂ ನನ್ನ ಜೊತೆಗೆ ನಿಂತಿದ್ದಾರೆ. ಅವರಿಗೆ ನಾನು ಸದಾ ಋಣಿ ಮತ್ತು ನಾನು ಬದುಕಿರುವವರೆಗೂ ಅವರ ಹಿತದ ವಿರುದ್ಧ ನಡೆದುಕೊಳ್ಳುವುದಿಲ್ಲ.

Latest Videos
Follow Us:
Download App:
  • android
  • ios