Karnataka Politics ಯಡಿಯೂರಪ್ಪ ಬೆನ್ನಲ್ಲೇ ಕಾಂಗ್ರೆಸ್ ನಾಯಕನಿಂದ ಪುತ್ರನಿಗೆ ಕ್ಷೇತ್ರ ತ್ಯಾಗ
ಬಿಎಸ್ ಯಡಿಯೂರಪ್ಪ ಅವರು ಚುನಾವಣೆ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಇದೀಗ ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಇದೀಗ ಮತ್ತಿಬ್ಬರು ಮುಂದಿನ ಚನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಘೋಷಣೆ ಮಾಡಿದ್ದಾರೆ.
ಹಾವೇರಿ, (ಜುಲೈ.24): ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ತಾವು ಸ್ಪರ್ಧಿಸುತ್ತಿದ್ದ ಶಿಕಾರಿಪುರ ಕ್ಷೇತ್ರವನ್ನು ಪುತ್ರ ವಿಜಯೇಂದ್ರಗೆ ಬಿಟ್ಟುಕೊಟ್ಟಿದ್ದಾರೆ. ಈ ಮೂಲಕ ಬಿಎಸ್‌ವೈ ಚುನಾವಣೆ ನಿವೃತ್ತಿ ಘೋಷಿಸಿದ್ದಾರೆ. ಇದರ ಬೆನಲ್ಲೇ ಇದೀಗ ಕಾಂಗ್ರೆಸ್ ಹಿರಿಯ ನಾಯಕ ಸಹ ರಾಜ್ಯ ರಾಜಕಾರಣದ ಚುನಾವಣೆ ನಿವೃತ್ತಿ ತೆಗೆದುಕೊಂಡಿದ್ದಾರೆ.
ಹೌದು....ಮಾಜಿ ಸ್ಪೀಕರ್ ಕೆ.ಬಿ. ಕೋಳಿವಾಡ ಅವರು ತಾವು ಸ್ಪರ್ಧೆ ಮಾಡುತ್ತಿದ್ದ ಹಾವೇರಿಯ ರಾಣೇಬೆನ್ನೂರು ಕ್ಷೇತ್ರವನ್ನು ತಮ್ಮ ಪುತ್ರ ಪ್ರಕಾಶ್ ಕೋಳಿವಾಡ ಅವರಿಗೆ ಬಿಟ್ಟುಕೊಟ್ಟಿದ್ದಾರೆ. ಇದರೊಂದಿಗೆ ಕೆ.ಬಿ.ಕೋಳಿವಾಡ ಸಹ ಚುನಾವಣೆ ನಿವೃತ್ತಿ ಘೋಷಿಸಿದ್ದಾರೆ.
ಯಡಿಯೂರಪ್ಪ ಬೆನ್ನಲ್ಲೇ ಮತ್ತೋರ್ವ ಹಿರಿಯ ನಾಯಕ ಚುನಾವಣೆ ನಿವೃತ್ತಿ ಘೋಷಣೆ
ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಕೆ.ಬಿ.ಕೋಳಿವಾಡ, ರಾಣೆಬೆನ್ನೂರು ಕ್ಷೇತ್ರದಿಂದ ಪುತ್ರ ಪ್ರಕಾಶ ಕೋಳಿವಾಡ ಸ್ಪರ್ಧಿಸಲಿದ್ದಾರೆ. ಈ ಕುರಿತು ಈಗಾಗಲೇ ಹೈಕಮಾಂಡ್ ಗೆ ಹೇಳಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ಕಳೆದ ಐದು ದಶಕಗಳಿಂದಲೂ ರಾಜಕೀಯದಲ್ಲಿ ಸಕ್ರಿಯವಾಗಿದ್ದೇನೆ. ನಾನು ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಸಮಕಾಲೀನರು. ನನಗಿಂತಲೂ ಸಿದ್ದರಾಮಯ್ಯ ಹನ್ನೊಂದು ವರ್ಷ ಹಾಗೂ ಅವರಿಗಿಂತಲೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಿರಿಯರು. ಪಕ್ಷದ ಹೈಕಮಾಂಡ ಬಯಸಿದರೆ ಕರ್ನಾಟಕದಿಂದ ಲೋಕಸಭೆ ಹಾಗೂ ರಾಜ್ಯಸಭೆಗೆ ಸ್ಪರ್ಧಿಸಲು ಸಿದ್ಧನಿದ್ದೇನೆ ಎಂದು ಹೇಳಿದರು.
ಬಿಜೆಪಿ ಬಿ.ವೈ. ವಿಜಯೇಂದ್ರ ಅವರು ಪರಿಷತ್‌ಗೆ ಪ್ರಯತ್ನಿಸಿದ್ದರು. ಆದರೆ ಆಗಿರಲಿಲ್ಲ. ಇದೀಗ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಹ ಮಗ ಬಿ.ವೈ .ವಿಜಯೇಂದ್ರನಿಗಾಗಿ ಶಿಕಾರಿಪುರ ವಿಧಾನಸಭಾ ಕ್ಷೇತ್ರ ಬಿಟ್ಟುಕೊಟ್ಟಿದ್ದಾರೆ. ಈ ಬಗ್ಗೆ ಬಿಜೆಪಿ ಹೈಕಮಾಂಡ್ ಹೇಗೆ ಪ್ರತಿಕ್ರಿಯಿಸುತ್ತದೆ ಎಂಬುದರ ಬಗ್ಗೆ ಏನು ಹೇಳುವುದಿಲ್ಲ ಎಂದರು
ಬಿಜೆಪಿ ಸಂಸದ ಚುನಾವಣೆ ನಿವೃತ್ತಿ
ತುಮಕೂರು ಬಿಜೆಪಿ ಸಂಸದ ಜಿ.ಎಸ್, ಬಸವರಾಜ್ ಅವರು ಸಹ ವಯಸ್ಸಿನ ಆಧಾರ ಮೇಲೆ ಮುಂದಿನ ಲೋಕಸಭೆ ಚುನಾವಣೆಗೆ ನಿಲ್ಲುವುದಿಲ್ಲ ಎಂದು ಹೇಳಿದ್ದಾರೆ.
ನನಗೆ 84 ವರ್ಷ ವಯಸ್ಸಾಗಿದ್ದು, ವಯಸ್ಸಿನ ಲೆಕ್ಕಾಚಾರದಲ್ಲಿಯೂ ಟಿಕೆಟ್ ನೀಡಲ್ಲ. ಹಾಗಾಗಿ ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ ತಿಳಿಸಿದ್ದಾರೆ.
ತುಮಕೂರು ಕ್ಷೇತ್ರದಿಂದ ಜೆಡಿಎಸ್ ವರಿಷ್ಠ ದೇವೇಗೌಡರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದು, ಒಂದು ವೇಳೆ ಅವರು ಸ್ಪರ್ಧಿಸಿದರೆ ನಾನು ಮತ್ತೆ ಸ್ಪರ್ಧಿಸುತ್ತೇನೆ. ಪಕ್ಷದಿಂದ ಟಿಕೆಟ್ ಕೊಡದಿದ್ದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಅವರು ಮೈತ್ರಿ ಅಭ್ಯರ್ಥಿಯಾಗಿ ತುಮಕೂರಿನಿಂದ ಸ್ಪರ್ಧೆ ಮಾಡಿದ್ದರು. ಆದ್ರೆ, ಅವರನ್ನ ಬಿಜೆಪಿಯ ಜಿ.ಎಸ್.ಬಸವರಾಜ್ ಮಣಿಸಿ ಲೋಕಸಭೆಗೆ ಪ್ರವೇಶಿಸಿದ್ದರು.
ಯಡಿಯೂರಪ್ಪ ಚುನಾವಣೆ ನಿವೃತ್ತಿ
ಇನ್ನು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸಹ ಮುಂದಿನ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದಿದ್ದಾರೆ. ಅಲ್ಲದೇ ತಾವು ಸ್ಪರ್ಧೆ ಮಾಡುತ್ತಿದ್ದ ಶಿವಮೊಗ್ಗದ ಶಿಕಾರಿಪುರವನ್ನು ತಮ್ಮ ಪುತ್ರ ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಅವರಿಗೆ ಬಿಟ್ಟುಕೊಟ್ಟುದ್ದಾರೆ. ಈ ಮೂಲಕ ಅವರು ಯಡಿಯೂರಪ್ಪ ಅವರು ಚುನಾವಣೆ ನಿವೃತ್ತಿ ತೆಗೆದುಕೊಂಡಿದ್ದಾರೆ.
ಯಡಿಯೂರಪ್ಪ ಅವರ ಈ ದಿಢೀರ್ ನಿರ್ಧಾರ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿತ್ತಲ್ಲದೆ ಹಲವು ಊಹಾಪೋಹಗಳಿಗೆ ಕಾರಣವಾಗಿತ್ತು. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ ಎಂಬ ಕಾರಣಕ್ಕೆ ಯಡಿಯೂರಪ್ಪ ಇಂಥದೊಂದು ತೀರ್ಮಾನಕ್ಕೆ ಬಂದಿದ್ದಾರೆ ಎನ್ನುವ ಚರ್ಚೆಗಳು ನಡೆದಿವೆ,
ರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೇನು ಏಳೆಂಟು ತಿಂಗಳು ಬಾಕಿ ಇದ್ದು, ಆಗಲೇ ಚುನಾವಣೆಗೆ ಅಖಾಡಕ್ಕಿಳಿಯಲು ಬಯಸಿವರು ನಾಯಕರು ತಮ್ಮ-ತಮ್ಮ ಕ್ಷೇತ್ರದಲ್ಲಿ ಓಡಾಡ ಶುರುಮಾಡಿಕೊಂಡಿದ್ದಾರೆ. ಮತ್ತೊಂದೆಡೆ ಟಿಕೆಟ್ ಲೆಕ್ಕಾಚಾರಗಳು ಸಹ ಶುರುವಾಗಿದೆ.