ಈ ಚುನಾವಣೆಯಲ್ಲಿ ಜೋಡೆತ್ತುಗಳಾದ ದರ್ಶನ್ ಹಾಗೂ ಯಶ್ ಜೊತೆಗೆ ಕನ್ನಡ ಚಿತ್ರರಂಗದ ಇನ್ನೂ ನಾಲ್ವರು, ಸ್ಟಾರ್ ನಟರುಗಳು ಪ್ರಚಾರ ನಡೆಸಲಿದ್ದಾರೆ ಎಂದು ಅಭಿಷೇಕ್ ಸುಳಿವು ನೀಡಿದ ಅಭಿಷೇಕ್ ಅಂಬರೀಶ್

ಮದ್ದೂರು(ಮಾ.12): ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಲಿರುವ ಅಮ್ಮ ಸುಮಲತಾ ಪರ ಜೋಡೆತ್ತುಗಳ ಜೊತೆಗೆ ಇನ್ನೂ ನಾಲ್ವರು ಸ್ಟಾರ್ ನಟರು ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪುತ್ರ ನಟ ಅಭಿಷೇಕ್ ಅಂಬರೀಶ್ ಹೇಳಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಅಂಬರೀಶ್ ಅಭಿಮಾನಿಗಳಿಂದ ಅಭಿನಂದನೆ ಸ್ವೀಕರಿಸಿದ ಮಾತನಾಡಿ, ಚುನಾವಣೆಯಲ್ಲಿ ಅಂಬರೀಶ್ ಅಭಿಮಾನಿಗಳು ಒಗ್ಗಟ್ಟಾಗಿ ಅಮ್ಮ ಅವರನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.
ಕಳೆದ ಲೋಕಸಭಾ ಚುನಾವಣೆಯಲ್ಲಿ ಅಮ್ಮನ ಪರ ನಟರಾದ ದರ್ಶನ್ ಹಾಗೂ ಯಶ್ ನನ್ನೊಂದಿಗೆ ಪ್ರಚಾರದಲ್ಲಿ ಪಾಲ್ಗೊಂಡು ಗೆಲುವಿಗೆ ಸಹಕಾರ ನೀಡಿದ್ದರು ಎಂದು ಸ್ಮರಿಸಿದರು.

ನನ್ನ ಗೆಲುವಿಗೆ ಅಂಬರೀಶ್ ಮತಗಳು ಕಾರಣ: ಸಂಸದೆ ಸುಮಲತಾ

ಈ ಚುನಾವಣೆಯಲ್ಲಿ ಜೋಡೆತ್ತುಗಳಾದ ದರ್ಶನ್ ಹಾಗೂ ಯಶ್ ಜೊತೆಗೆ ಕನ್ನಡ ಚಿತ್ರರಂಗದ ಇನ್ನೂ ನಾಲ್ವರು, ಸ್ಟಾರ್ ನಟರುಗಳು ಪ್ರಚಾರ ನಡೆಸಲಿದ್ದಾರೆ ಎಂದು ಅಭಿಷೇಕ್ ಸುಳಿವು ನೀಡಿದರು. ಚುನಾವಣಾ ಪ್ರಚಾರದಲ್ಲಿ ಭಾಗವಹಿಸುವ ನಾಲ್ವರು ನಟರ ಹೆಸರನ್ನು ಬಹಿರಂಗ ಪಡಿಸಲು ನಿರಾಕರಿಸಿದ ಅಭಿಷೇಕ ಮುಂದೆ ಗೊತ್ತಾಗುತ್ತದೆ. ಅಲ್ಲಿಯವರೆಗೆ ತಾಳ್ಮೆಯಿಂದ ಇರಿ ಎಂದರು.