ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕುರಿತ ಎಫ್‌ಎಸ್‌ಎಲ್ ವರದಿ ಬಂದಿಲ್ಲ: ಪರಮೇಶ್ವರ್
‘ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆ ಎಂಬುದರ ಬಗೆಗಿನ ಎಫ್‌ಎಸ್ಎಲ್ ವರದಿ ಇನ್ನೂ ಬಂದಿಲ್ಲ. ಈ ಬಗ್ಗೆ ಸಾಕಷ್ಟು ಕ್ಲಿಪಿಂಗ್‌ಗಳನ್ನು ಕಳಹಿಸಲಾಗಿದೆ. ವರದಿ ಬಂದ ನಂತರ ವರದಿ ಆಧರಿಸಿ ಅಗತ್ಯ ಕ್ರಮ ಕೈಗೊಳ್ಳುತ್ತೇವೆ’ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರು (ಮಾ.02): ‘ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆ ಎಂಬುದರ ಬಗೆಗಿನ ಎಫ್‌ಎಸ್ಎಲ್ ವರದಿ ಇನ್ನೂ ಬಂದಿಲ್ಲ. ಈ ಬಗ್ಗೆ ಸಾಕಷ್ಟು ಕ್ಲಿಪಿಂಗ್‌ಗಳನ್ನು ಕಳಹಿಸಲಾಗಿದೆ. ವರದಿ ಬಂದ ನಂತರ ವರದಿ ಆಧರಿಸಿ ಅಗತ್ಯ ಕ್ರಮ ಕೈಗೊಳ್ಳುತ್ತೇವೆ’ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಅಲ್ಲದೆ, ಈಗಾಗಲೇ ಏಳು ಮಂದಿಯನ್ನು ಕರೆಸಿ ಧ್ವನಿ ಮುದ್ರಣ ಮಾಡಿಕೊಳ್ಳಲಾಗಿದೆ.
ಇಲಾಖೆ ತನ್ನ ಕೆಲಸವನ್ನು ಸಮರ್ಪಕವಾಗಿ ಮಾಡುತ್ತಿದೆ ಎಂದು ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಎಫ್‌ಎಸ್‌ಎಲ್ ವರದಿ ಕುರಿತ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಒಂದು ಕ್ಲಿಪಿಂಗ್ ಮಾತ್ರವಲ್ಲ. ಸಾಕಷ್ಟು ಕ್ಲಿಪಿಂಗ್‌ಗಳನ್ನು ಎಫ್‌ಎಸ್‌ಎಲ್ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ಬಳಿಕ ಘೋಷಣೆ ಬಗ್ಗೆ ಸ್ಪಷ್ಟತೆ ಬರಲಿದೆ. ಅದಕ್ಕೂ ಮೊದಲು ಏನನ್ನೂ ಹೇಳಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಅನುಭವಿ ಶಾಸಕರ ಕ್ಷೇತ್ರದಲ್ಲಿ ಬಂದು ನಾನೇನು ಮಾಡಲಿ?: ಸಚಿವ ಮಂಕಾಳ ವೈದ್ಯ
ಮುದ್ದಹನುಮೇಗೌಡ ಬಗ್ಗೆ ಜಯಚಂದ್ರ, ಷಡಕ್ಷರಿಗೆ ಅಪಸ್ವರ ಇಲ್ಲ: ‘ಶಾಸಕರಾದ ಟಿ.ಬಿ. ಜಯಚಂದ್ರ ಹಾಗೂ ಷಡಕ್ಷರಿ ಅವರು ಮುದ್ದ ಹನುಮೇಗೌಡ ಅವರ ವಿರುದ್ಧ ಇಲ್ಲ. ಪಕ್ಷ ತೀರ್ಮಾನ ಮಾಡಿದವರ ಪರ ಕೆಲಸ ಮಾಡಿ ಗೆಲ್ಲಿಸಲು ಎಲ್ಲಾ ಶಾಸಕರೂ ಸಿದ್ಧವಿದ್ದು, ಅಗತ್ಯ ತಯಾರಿ ಮಾಡಿಕೊಂಡಿದ್ದೇವೆ’ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದರು. ಮಾಜಿ ಸಂಸದ ಮುದ್ದ ಹನುಮೇಗೌಡರ ಪಕ್ಷ ಸೇರ್ಪಡೆ ವೇಳೆ ಷಡಕ್ಷರಿ ಹಾಗೂ ಜಯಚಂದ್ರ ಗೈರು ಹಾಜರಿ ಬಗ್ಗೆ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ.
ಜಯಚಂದ್ರ ಹಾಗೂ ಷಡಕ್ಷರಿ ಅವರಿಗೆ ಅನ್ಯ ಕೆಲಸ ಇದ್ದ ಕಾರಣ ಅವರು ಬಂದಿಲ್ಲ. ಜೆಡಿಎಸ್ - ಬಿಜೆಪಿ ಮೈತ್ರಿ ಅಭ್ಯರ್ಥಿ ಯಾರಾದರೂ ಒಟ್ಟಾಗಿ ಎದುರಿಸಿ ಗೆಲ್ಲುತ್ತೇವೆ’ ಎಂದರು. ಅಭ್ಯರ್ಥಿಗಳ ಆಯ್ಕೆ ವಿಚಾರ ಮಾತನಾಡಿ, ಈಗಾಗಲೇ ಸ್ಕ್ರೀನಿಂಗ್ ಸಮಿತಿ ಮುಂದೆ ಅಭ್ಯರ್ಥಿಗಳ ಪಟ್ಟಿ ಇಡಲಾಗಿದೆ. ಒಂದು ಸುತ್ತಿನ ಸಭೆ ನಡೆದಿದ್ದು ಮತ್ತೊಂದು ಸುತ್ತಿನ ಸಭೆ ನಡೆಯಬೇಕಿದೆ. ಇನ್ನು ಸಚಿವರ ಸ್ಪರ್ಧೆ ವಿಚಾರವಾಗಿ ನಮಗೇನೂ ಗೊತ್ತಿಲ್ಲ. ಅವೆಲ್ಲವೂ ಹೈಕಮಾಂಡ್ ಹಂತದಲ್ಲೇ ತೀರ್ಮಾನ ಆಗಬೇಕು ಎಂದು ಹೇಳಿದರು.
ಹಣದ ಆಮಿಷ ತೋರಿಸಿ ಶಾಸಕರ ಸೆಳೆಯಲು ಷಡ್ಯಂತ್ರ: ನಮ್ಮ ಶಾಸಕರಿಗೆ ಹಣದ ಆಮಿಷ ತೋರಿಸಿ ಕರೆದುಕೊಂಡು ಹೋಗಬೇಕು ಎಂಬ ಷಡ್ಯಂತ್ರ ನಡೆಯುತ್ತಿದೆ. ಹೀಗಾಗಿ ನಮ್ಮ ಪಕ್ಷ ಏನೇನು ಎಚ್ಚರಿಕೆ ವಹಿಸಬೇಕೋ ಅದನ್ನು ವಹಿಸುತ್ತಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ತನ್ಮೂಲಕ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನದ ಆತಂಕದ ಹಿನ್ನೆಲೆಯಲ್ಲಿ ಶಾಸಕರನ್ನು ರೆಸಾರ್ಟ್‌ಗೆ ಸ್ಥಳಾಂತರಗೊಳ್ಳುವುದನ್ನು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೆಸಾರ್ಟ್ ರಾಜಕೀಯ ಹಾಗೂ ಅಡ್ಡಮತದಾನದ ಕುರಿತ ಪ್ರಶ್ನೆಗೆ ಉತ್ತರಿಸಿದರು.
ಕೇಂದ್ರ ಸರ್ಕಾರದ ಯೋಜನೆ ಜನರಿಗೆ ತಿಳಿಸಿ: ಮಾಜಿ ಸಚಿವ ಬಿ.ಸಿ.ಪಾಟೀಲ್
ಯಾವ್ಯಾವ ಶಾಸಕರು ಯಾವ ಅಭ್ಯರ್ಥಿಗೆ ಮತ ಹಾಕಬೇಕು ಎಂಬುದರ ಬಗ್ಗೆ ಪಟ್ಟಿ ಮಾಡಿಕೊಂಡಿದ್ದೇವೆ. ಮೂರು ಮಂದಿ ಅಭ್ಯರ್ಥಿಗಳಿಗೆ ಯಾರು ಯಾರಿಗೆ ಮತ ಹಾಕಬೇಕು ಎಂಬುದು ಚರ್ಚೆಯಾಗಿದೆ. ಅದರ ಪ್ರಕಾರವೇ ಮತ ಹಾಕುತ್ತೇವೆ. ಇನ್ನು ನಮ್ಮ ಶಾಸಕರನ್ನು ಹಣದ ಆಮಿಷ ತೋರಿ ಕರೆದುಕೊಂಡು ಹೋಗಲು ಈಗಾಗಲೇ ಯತ್ನ ನಡೆದಿದೆ. ಈ ಬಗ್ಗೆ ಪಕ್ಷದಿಂದ ದೂರನ್ನೂ ಕೊಟ್ಟಿದ್ದೇವೆ. ಪೊಲೀಸರು ಹಾಗೂ ಗುಪ್ತಚರದಳ ಇದನ್ನು ಸೂಕ್ಷ್ಮವಾಗಿ ನೋಡುತ್ತಿದೆ. ಕುಪೇಂದ್ರ ರೆಡ್ಡಿ ಹೆಸರು ಬಂದರೆ ಪೊಲೀಸರು ವಿಚಾರಣೆ ನಡೆಸುತ್ತಾರೆ. ಆ ರೀತಿಯ ಪ್ರಯತ್ನಗಳು ನಡೆದರೆ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.