ಕಾಂಗ್ರೆಸ್ ಅಭ್ಯರ್ಥಿ ಪರ ಸರ್ಕಾರಿ ನೌಕರ ಪ್ರಚಾರ ಆರೋಪ; ಹಿಗ್ಗಾಮುಗ್ಗಾ ತರಾಟೆ ತೆಗೆದುಕೊಂಡ ಬಿಜೆಪಿ ಮುಖಂಡ

ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಪರವಾಗಿ ಪ್ರಚಾರ ಮಾಡುತ್ತಿದ್ದ ಸರ್ಕಾರಿ ನೌಕರನಿಗೆ ಬಿಜೆಪಿ ಮುಖಂಡ ಅನಿಲ್ ಮೆಣಸಿನಕಾಯಿ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಘಟನೆ ಗದಗ ನಗರದ ಕೆವಿಎಸ್‌ಆರ್ ಕಾಲೇಜಿನಲ್ಲಿ ನಡೆದಿದೆ.

Gadag Lok sabha election 2024 karnataka BJP leader anil menasinakayi outraged against govt employee who campaigned for congress rav

ಗದಗ (ಮೇ.7): ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಪರವಾಗಿ ಪ್ರಚಾರ ಮಾಡುತ್ತಿದ್ದ ಸರ್ಕಾರಿ ನೌಕರನಿಗೆ ಬಿಜೆಪಿ ಮುಖಂಡ ಅನಿಲ್ ಮೆಣಸಿನಕಾಯಿ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಘಟನೆ ಗದಗ ನಗರದ ಕೆವಿಎಸ್‌ಆರ್ ಕಾಲೇಜಿನಲ್ಲಿ ನಡೆದಿದೆ.

ನಗರಸಭೆ ಬಿಎಲ್‌ಓ ನೌಕರನಾಗಿರುವ ಮುತ್ತಪ್ಪ ಹೂಗಾರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದಾರೆಂದು ಆರೋಪಿಸಲಾಗಿದೆ. ಪಕ್ಕದಲ್ಲಿ ಕಾಂಗ್ರೆಸ್ ಏಜೆಂಟ್ ಕೂರಿಸಿಕೊಂಡು ಕಾಂಗ್ರೆಸ್‌ಗೆ ಮತ ಹಾಕುವಂತೆ ಮತದಾರರಿಗೆ ಹೇಳುತ್ತಿದ್ದ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ನೌಕರನ ವಿರುದ್ಧ ಕೆಂಡಾಮಂಡಲಾರದ ಬಿಜೆಪಿ ಮುಖಂಡ. ಸ್ಥಳಕ್ಕೆ ಪೊಲೀಸರನ್ನು ಕರೆಯಿಸಿ 'ನಿಮ್ಮ ಕರ್ತವ್ಯವನ್ನು ಯಾಕೆ ಸರಿಯಾಗಿ ನಿರ್ವಹಿಸುತ್ತಿಲ್ಲ? ಎಂದು ಪೊಲೀಸರ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರಿ ನೌಕರನನ್ನ ಕೂಡಲೇ ವಜಾಗೊಳಿಸಬೇಕು ಅಂತ ಅಗ್ರಹಿಸಿದರು.

ರಾಜಕೀಯ ದ್ವೇಷ ಆರೋಪ; ಬಿಜೆಪಿ ಕಾರ್ಯಕರ್ತನಿಗೆ ಥಳಿಸಿದ ಕಾಂಗ್ರೆಸ್ ಬೆಂಬಲಿಗರು

ಸರ್ಕಾರಿ ನೌಕರರು ಯಾವುದೇ ರಾಜಕೀಯ ಪಕ್ಷ, ಪಕ್ಷಗಳು ನಡೆಸುವ ಸಭೆ, ಸಮಾರಂಭಗಳಲ್ಲಿ ಭಾಗವಹಿಸುವಂತಿಲ್ಲ. ಚುನಾವಣೆ ವೇಳೆ ಯಾವುದೇ ಅಭ್ಯರ್ಥಿಯ ಪರ ಪ್ರತ್ಯಕ್ಷ, ಪರೋಕ್ಷವಾಗಿ ಪ್ರಚಾರ ನಡೆಸುವಂತಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವುದಾಗಲಿ, ಶೇರ್ ಮಾಡುವುದಾಗಲಿ ಮಾಡುವಂತಿಲ್ಲ. ಈಗಿರುವಾಗ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಕಾಂಗ್ರೆಸ್ ಪಕ್ಷದ ಪರವಾಗಿ ಬಹಿರಂಗವಾಗಿ ಪ್ರಚಾರ ಮಾಡುತ್ತಿರುವುದು ಎಷ್ಟು ಸರಿ? ಕೂಡಲೇ ವಜಾಗೊಳಿಸಬೇಕು ಎಂದು ಆಗ್ರಹಿಸಿದ ಬಿಜೆಪಿ ಕಾರ್ಯಕರ್ತರು. 

Latest Videos
Follow Us:
Download App:
  • android
  • ios