ಗಂಗೊಳ್ಳಿ ಬಂದರಿನಲ್ಲಿ ನಿರ್ಮಾಣ ಹಂತದ ಜಟ್ಟಿ ಕುಸಿತ; ಟ್ವೀಟ್ ಮಾಡಿ ಸರ್ಕಾರದ ಕಿವಿ ಹಿಂಡಿದ ಸಿದ್ದರಾಮಯ್ಯ
ಅವೈಜ್ಞಾನಿಕ ಕಾಮಗಾರಿಯಿಂದಾಗಿ ಒಂದಿಲ್ಲೊಂದು ಸಮಸ್ಯೆಗೆ ತುತ್ತಾಗುತ್ತಲೇ ಇರುವ ಗಂಗೊಳ್ಳಿ ಬಂದರು ಪ್ರದೇಶ ಇದೀಗ ಮತ್ತೆ ಅವೈಜ್ಞಾನಿಕ ಕಾಮಗಾರಿಯಿಂದ ಇದೀಗ ನಿರ್ಮಾಣ ಹಂತದ ಜೆಟ್ಟಿ ಕುಸಿದಿದೆ. ಈ ಬಗ್ಗೆ ಸಿದದ್ದರಾಮಯ್ಯ ಟ್ವೀಟ್ ಮಾಡಿ ಸರ್ಕಾರದ ಕಿವಿ ಹಿಂಡಿದ್ದಾರೆ
ವರದಿ-ಶಶಿಧರ ಮಾಸ್ತಿಬೈಲು, ಏಷ್ಯಾನೆಟ್ ಸುವರ್ಣ ನ್ಯೂಸ್
ಉಡುಪಿ (ಸೆ.29) : ಅವೈಜ್ಞಾನಿಕ ಕಾಮಗಾರಿಯಿಂದಾಗಿ ಒಂದಿಲ್ಲೊಂದು ಸಮಸ್ಯೆಗೆ ತುತ್ತಾಗುತ್ತಲೇ ಇರುವ ಗಂಗೊಳ್ಳಿ ಬಂದರು ಪ್ರದೇಶ ಇದೀಗ ಮತ್ತೆ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಸುದ್ದಿಯಲ್ಲಿದೆ. ಕಾಮಗಾರಿ ನಡೆಯುತ್ತಿರುವಾಗಲೇ ಸಂಭವಿಸಿರುವ ಈ ಅವಘಡದಿಂದ, ಗುಣಮಟ್ಟದ ಬಗ್ಗೆ ಜನರು ಸಂಶಯಪಡುವಂತಾಗಿದೆ.
ಉಡುಪಿ: ಗೋಹತ್ಯೆ ವಿರೋಧಿಸಿದ್ದಕ್ಕೆ ಮೀನು ಖರೀದಿಗೆ ಬಹಿಷ್ಕಾರ
ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ(Siddaramaiah)ಕೂಡ ಟ್ವೀಟ್(Tweet) ಮಾಡಿ ಚಾಟಿ ಬೀಸಿದ್ದಾರೆ. ರಾಜ್ಯದ 40% ಕಮಿಷನ್ ಸರ್ಕಾರ ಇಂದು ಕುಂದಾಪುರ(Kundapur) ತಾಲೂಕಿನ ಗಂಗೊಳ್ಳಿ(Gangolli) ಬಂದರಿನಲ್ಲಿ ಮುಳುಗಿದೆ. 12 ಕೋಟಿ ರೂಪಾಯಿ ವೆಚ್ಚದ ಜಟ್ಟಿ ನಿರ್ಮಾಣ ಹಂತದಲ್ಲೇ ನದಿ ನೀರಿನ ಪಾಲಾಗಿದೆ.
ಈ ಕಾಮಗಾರಿಯಲ್ಲಿ ಗುತ್ತಿಗೆದಾರ ಬಿಜೆಪಿ ಸರ್ಕಾರಕ್ಕೆ ನೀಡಿದ್ದ ಕಮಿಷನ್ ಎಷ್ಟು? ಎನ್ನುವ ಬಗ್ಗೆ ತನಿಖೆಯಾಗಲಿ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಟ್ವೀಟ್‌ನಲ್ಲಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ(Kota Shrinivas Poojari) ಮತ್ತು ಬಂದರು ಮತ್ತು ಮೀನುಗಾರಿಕಾ ಸಚಿವ ಅಂಗಾರ(Angara)ಗೆ ಟ್ಯಾಗ್ ಮಾಡಿದ್ದಾರೆ.
ಗಂಗೊಳ್ಳಿಯ ಮೀನುಗಾರಿಕಾ ಬಂದರು(A fishing port) ಪ್ರದೇಶದಲ್ಲಿ ನಡೆಯುತ್ತಿರುವ ಜೆಟ್ಟಿ ನಿರ್ಮಾಣ ಕಾರ್ಯದ ವೇಳೆ ಜೆಟ್ಟಿ ಭಾಗ ಕುಸಿತಕ್ಕೊಳಗಾಗಿದೆ. 150 ಮೀಟರಿಗೂ ಅಧಿಕ ಜೆಟ್ಟಿ ಕುಸಿದಿದ್ದು, ಸ್ಥಳೀಯ ಮೀನುಗಾರರು ಆತಂಕಕ್ಕೀಡಾಗಿದ್ದಾರೆ.
ಬುಧವಾರ ಸಂಜೆ 5.30 ರ ಹೊತ್ತಿಗೆ ಘಟನೆ ನಡೆದು ನಿರಂತರವಾಗಿ ಕುಸಿತವಾಗುತ್ತಿದ್ದರೂ ಕೂಡ ಕಾಮಗಾರಿ ಗುತ್ತಿಗೆ ವಹಿಸಿಕೊಂಡವರು ಇತ್ತ ಕಡೆ ತಲೆ ಹಾಕಿಲ್ಲ ಎಂಬ ಆರೋಪ ಕೇಳಿಬಂದಿದೆ. ಕಳೆದ 13 ವರ್ಷದ ಹಿಂದೆ ಗಂಗೊಳ್ಳಿ ಜೆಟ್ಟಿ ನಿರ್ಮಾಣವಾಗಿದ್ದು ಇದು ಕೂಡ ಕುಸಿತಕ್ಕೊಳಗಾಗಿತ್ತು.
ಬಳಿಕ ಶಿವಮೊಗ್ಗ(Shivamogga) ಸಂಸದ ಹಾಗೂ ಬೈಂದೂರು(Byndooru) ಶಾಸಕರ ಮುತುವರ್ಜಿಯಲ್ಲಿ 12 ಕೋಟಿ ಅನುದಾನದಲ್ಲಿ ನೂತನ ಜೆಟ್ಟಿ ಕಾಮಗಾರಿಗೆ ಮಂಜೂರಾಗಿ 180 ಮೀಟರ್ ಕೆಲಸವೂ ನಡೆದಿತ್ತು. ಮುಂದಿನ ಕಾಮಗಾರಿಗಾಗಿ ಹಳೆ ಜೆಟ್ಟಿಯ ಡಯಪ್ರಮ್ ಹಾಲ್ ನಡುವೆಯಿದ್ದ ರಾಡ್ ತುಂಡರಿಸಿ ಹೊಸ ಪಿಲ್ಲರ್ ಹಾಕಿದ್ದು ಎರಡಕ್ಕೂ ಕೊಂಡಿಯಾಗಿದ್ದ ರಾಡು ತುಂಡರಿಸಿ ಅವೈಜ್ಞಾನಿಕ ಕಾಮಗಾರಿ ಮಾಡಿದ್ದರಿಂದ ಹಳೆ ಜೆಟ್ಟಿ ಕುಸಿತಕ್ಕೊಳಗಾಗಿ ಈಗ ನಡೆಯುತ್ತಿರುವ ಕಾಮಗಾರಿಗಾಗಿ ಮಾಡಿದ ಪಿಲ್ಲರ್ ಮೇಲೆ ಬಿದ್ದು ಹಲವು ಪಿಲ್ಲರ್ ಕುಸಿದಿದೆ.
ಇದು ಅಧಿಕಾರಿಗಳ ಬೇಜವಾಬ್ದಾರಿತನ ಹಾಗೂ ಗುತ್ತಿಗೆದಾರರ ನಿರ್ಲಕ್ಷ್ಯ ಎಂದು ಮೀನುಗಾರರು ಆಕ್ರೋಷ ವ್ಯಕ್ತಪಡಿಸಿದ್ದಾರೆ. ಈ ಭಾಗದಲ್ಲಿ 40 ದೊಡ್ಡ ಬೋಟುಗಳು, 100ಕ್ಕೂ ಅಧಿಕ ಟ್ರಾಲ್ ಬೋಟುಗಳು, ಸಿಂಗಲ್ ಬೋಟುಗಳು, ನೂರಾರು 370 ಬೋಟುಗಳು, 300ಕ್ಕೂ ಅಧಿಕ ನಾಡ ದೋಣಿಗಳು ಮೀನುಗಾರಿಕೆಯಲ್ಲಿ ತೊಡಗಿಸಿಕೊಳ್ಳುತ್ತದೆ. ಸದ್ಯದ ಪರಿಸ್ಥಿತಿಯಲ್ಲಿ ಮೀನು ಖಾಲಿ ಮಾಡಲು ದೂರದ ಭಟ್ಕಳ ಮೊದಲಾದೆಡೆ ತೆರಳಬೇಕಾದ ಅನಿವಾರ್ಯತೆ ಮೀನುಗಾರರದ್ದು.
ಗಂಗೊಳ್ಳಿ: ಉಡುಪಿ-ಉತ್ತರಕನ್ನಡ ಮೀನುಗಾರರ ಜಟಾಪಟಿ
ಈ ಸಮಸ್ಯೆಗೆ ಶೀಘ್ರ ಪರಿಹಾರ ಒದಗಿಸಿ ಮೀನುಗಾರರು ಬದುಕು ಕಟ್ಟಿಕೊಳ್ಳಲು ಕ್ರಮಕೈಗೊಳ್ಳದಿದ್ದಲ್ಲಿ ಹೋರಾಟ ನಿಶ್ಚಿತ ಎಂದು ಗಂಗೊಳ್ಳಿಯ ಹಸಿ ಮೀನು ವ್ಯಾಪಾರಸ್ಥರ ಸಂಘದವರು ಎಚ್ಚರಿಕೆ ನೀಡಿದ್ದಾರೆ. ಈ ಭಾಗದಲ್ಲಿ ನಾಡ ದೋಣಿ ಮೀನುಗಾರಿಕೆಯನ್ನು ಅವಲಂಬಿಸಿರುವ ಬಡ ಮೀನುಗಾರರ ಹೆಚ್ಚಿನ ಸಂಖ್ಯೆಯಲ್ಲಿದ್ದು, ಸರ್ಕಾರ ಅತಿ ಶೀಘ್ರವಾಗಿ ಗುಣಮಟ್ಟದ ಕಾಮಗಾರಿ ನಡೆಸಬೇಕಾಗಿದೆ.