Asianet Suvarna News Asianet Suvarna News

ಆಸ್ಪತ್ರೆಯಿಂದ ಡಿಸ್ವಾರ್ಜ್ ಆಗುತ್ತಿದ್ದಂತೆಯೇ ಸರ್ಕಾರಕ್ಕೊಂದು ಮನವಿ ಮಾಡಿದ ಎಚ್‌ಡಿಕೆ

ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ಕೊರೋನಾದಿಂದ ಗುಣಮುಖರಾಗಿ ಮನೆ ಬರುತ್ತಿದ್ದಂತೆಯೇ ರಾಜ್ಯ ಸರ್ಕಾರದ ಮುಂದೆ ಒಂದು ಹೊಸ ಡಿಮ್ಯಾಂಡ್ ಇಟ್ಟಿದ್ದಾರೆ.

give free Covid19 vaccine to everyone says hd kumaraswamy rbj
Author
Bengaluru, First Published Apr 24, 2021, 6:09 PM IST

ಬೆಂಗಳೂರು, (ಏ.24): ಇದೇ ಮೇ ತಿಂಗಳ 1 ರಿಂದ ‌18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಲು ಕೇಂದ್ರ ಸರಕಾರ ತೆಗೆದುಕೊಂಡಿರುವ ತೀರ್ಮಾನದಂತೆ, ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ಆರುವರೆ ಕೋಟಿ ಜನತೆಗೂ ಉಚಿತವಾಗಿ ಲಸಿಕೆಯನ್ನು ನೀಡುವ ಮೂಲಕ ನೆರವಿಗೆ ಧಾವಿಸಬೇಕೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಈಗಾಗಲೇ ಜಾರ್ಖಂಡ್, ಗೋವಾ, ಛತ್ತೀಸ್‌ಘಡ, ಉತ್ತರ ಪ್ರದೇಶ, ಅಸ್ಸಾಂ, ಮಧ್ಯಪ್ರದೇಶ, ಕೇರಳ, ಬಿಹಾರ ಮತ್ತು ಸಿಕ್ಕಿಂನಲ್ಲಿ ಲಸಿಕೆಯನ್ನು ಉಚಿತವಾಗಿ ನೀಡುವುದಾಗಿ ಘೋಷಿಸಲಾಗಿದೆ. ಈಗ ಕರ್ನಾಟಕ ರಾಜ್ಯದಲ್ಲಿಯೂ ಸಹ ಇದೇ ಕ್ರಮ ಅನುಸರಿಸಬೇಕು‌ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಲ್ಲಿ ‌ನನ್ನ ಕೋರಿಕೆ ಎಂದಿದ್ದಾರೆ.

ಕುಮಾರಸ್ವಾಮಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ಆದ್ರೂ ಸಾರ್ವಜನಿಕರ ಭೇಟಿಗೆ ಅವಕಾಶ ಇಲ್ಲ 
 
ಈಗಿನ ಸಂದರ್ಭದಲ್ಲಿ ಜನರು ಹಣ ಕೊಟ್ಟು ಲಸಿಕೆ ಪಡೆಯಲು ಸಾಧ್ಯವಿಲ್ಲ. ಹೀಗಾಗಿ ಸರಕಾರವೇ ಮುಂದೆ ಬಂದು 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಉಚಿತ ಲಸಿಕೆ ನೀಡುವ ತೀರ್ಮಾನವನ್ನು ಪ್ರಕಟಿಸಬೇಕೆಂಬುದು ಆಗ್ರಹಿಸಿದ್ದಾರೆ.

ಸುಮಾರು ಒಂದು ಕೋಟಿ ಡೋಸ್ ಲಸಿಕೆ ಕೊಳ್ಳಲು 400 ಕೋಟಿ ರೂ ಮೀಸಲಿಡಲಾಗಿದೆ. ಸರಿಸುಮಾರು 2.50 ಲಕ್ಷ ಕೋಟಿ ರೂ. ಬಜೆಟ್ ಮಂಡನೆ ಮಾಡುವ ಸರಕಾರಕ್ಕೆ ಕನಿಷ್ಠ ಪಕ್ಷ 2 ಸಾವಿರ ಕೋಟಿ ರೂ. ಹಣವನ್ನು ಲಸಿಕೆ ಖರೀದಿ ಮಾಡಲು ಮೀಸಲಿಡುವುದರಿಂದ ಬೊಕ್ಕಸಕ್ಕೆ ಭಾರೀ ಹೊರೆಯಾಗದು. ಬಡವ-ಬಲ್ಲಿದನೆಂಬ ತಾರತಮ್ಯ ತೋರದೆ ರಾಜ್ಯದ ಎಲ್ಲಾ ಜನತೆಗೆ ಉಚಿತವಾಗಿ ಲಸಿಕೆ ನೀಡುವ ಮಹತ್ವದ ನಿರ್ಧಾರ ತೆಗೆದುಕೊಳ್ಳುವಂತೆ ಸರ್ಕಾರಕ್ಕೆ ಎಚ್ ಡಿಕೆ ಒತ್ತಾಯಿಸಿದರು.

ರಾಜ್ಯದ ಪ್ರತಿಯೊಬ್ಬರಿಗೂ ಉಚಿತ ಲಸಿಕೆ ನೀಡುವಂತೆ ಒಂದುವರೆ ತಿಂಗಳ ಹಿಂದೆಯೇ ಸರ್ಕಾರಕ್ಕೆ ಸಲಹೆ ನೀಡಿದ್ದೆ. ಪಲ್ಸ್ ಪೋಲಿಯೋ ಲಸಿಕೆ ನೀಡಿದ ಮಾದರಿಯಲ್ಲಿ ಎಲ್ಲರಿಗೂ ಉಚಿತವಾಗಿ ಕೊರೋನಾ ಲಸಿಕೆ ನೀಡುವ ನಿರ್ಧಾರ ಕೈಗೊಂಡರೆ ಅದು ಅಭಿನಂದನಾರ್ಹ ಎಂದು ಅವರು ಟ್ವೀಟ್ ಮಾಡಿದ್ದಾರೆ.

Follow Us:
Download App:
  • android
  • ios