Lok Sabha Election 2024: ಚಿಕ್ಕಬಳ್ಳಾಪುರ ಬಿಜೆಪಿ ಟಿಕೆಟ್‌ ನನಗೇ ಕೊಡಿ, ವಿಶ್ವನಾಥ್

ನನ್ನ ಪುತ್ರ ಅಲೋಕ್ ವಿಶ್ವನಾಥ್ ಬಗ್ಗೆ ಕ್ಷೇತ್ರದಲ್ಲಿ ಒಲವು ಇದೆ ಎಂಬುದನ್ನು ಹಲವು ಸಮೀಕ್ಷೆಗಳು ತಿಳಿಸಿವೆ. ಈ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಒಂದು ಸುತ್ತಿನ ಪ್ರವಾಸವನ್ನೂ ಮಾಡಿ ಕಾರ್ಯಕರ್ತರನ್ನು ಹುರಿದುಂಬಿಸುವ ಕೆಲಸ ಮಾಡಲಾಗಿದೆ: ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ 

Give Me Chikkaballapura BJP Ticket Says MLA SR Vishwanath grg

ಬೆಂಗಳೂರು(ಮಾ.21):  ಲೋಕಸಭಾ ಚುನಾವಣೆಗೆ ಚಿಕ್ಕಬಳ್ಳಾಪುರ ಕ್ಷೇತ್ರದ ಅಭ್ಯರ್ಥಿಯಾಗಿ ನಾನೇ ಸ್ಪರ್ಧಿಸುತ್ತೇನೆ. ನನಗೇ ಟಿಕೆಟ್ ಕೊಡಿ ಎಂದು ಯಲಹಂಕದ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಹೇಳಿದ್ದಾರೆ.

ಬುಧವಾರ ಸಂಜೆ ಸುದ್ದಿಗಾರರ ಜತೆ ಮಾತನಾಡಿದ ಅವರು, ನನ್ನ ಪುತ್ರ ಅಲೋಕ್ ವಿಶ್ವನಾಥ್ ಬಗ್ಗೆ ಕ್ಷೇತ್ರದಲ್ಲಿ ಒಲವು ಇದೆ ಎಂಬುದನ್ನು ಹಲವು ಸಮೀಕ್ಷೆಗಳು ತಿಳಿಸಿವೆ. ಈ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಒಂದು ಸುತ್ತಿನ ಪ್ರವಾಸವನ್ನೂ ಮಾಡಿ ಕಾರ್ಯಕರ್ತರನ್ನು ಹುರಿದುಂಬಿಸುವ ಕೆಲಸ ಮಾಡಲಾಗಿದೆ ಎಂದರು.

Lok Sabha Election 2024: ಪಕ್ಷ, ಕ್ಷೇತ್ರ ನನ್ನ ಆಯ್ಕೆಯಲ್ಲ: ಡಾ|ಮಂಜುನಾಥ್

ನಾನು ಪಕ್ಷದ ನಿಷ್ಠನಾಗಿರುವ ಶಿಸ್ತಿನ ಸಿಪಾಯಿ. ನನಗೆ ಚಮಚಾಗಿರಿ ಮಾಡಿ ಗೊತ್ತಿಲ್ಲ ಮತ್ತು ಲಾಬಿಯನ್ನೂ ಮಾಡುವುದಿಲ್ಲ. ಸಮೀಕ್ಷೆಯ ವಾಸ್ತವಾಂಶವನ್ನು ವರಿಷ್ಠರಿಗೆ ತಿಳಿಸಿದ್ದೇನೆ. ಒಂದು ವೇಳೆ ಅಲೋಕ್ ವಿಶ್ವನಾಥ್‌ಗೆ ಟಿಕೆಟ್ ನೀಡದಿದ್ದರೆ ನಾನೇ ಅಭ್ಯರ್ಥಿಯಾಗುತ್ತೇನೆ. ನನಗೇ ಟಿಕೆಟ್ ನೀಡುವಂತೆ ಪಕ್ಷದ ರಾಜ್ಯಾಧ್ಯಕ್ಷರಿಗೆ ಮನವಿ ಮಾಡಿದ್ದೇನೆ ಎಂದು ಹೇಳಿದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ವಿಶ್ವನಾಥ್‌, ಬಿಜೆಪಿಯ ಭದ್ರಕೋಟೆಯಾಗಿರುವ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಕೈ ತಪ್ಪಬಾರದು ಎಂಬ ಕಾರಣಕ್ಕೆ ನಾನೇ ಅಭ್ಯರ್ಥಿಯಾಗಲು ನಿರ್ಧರಿಸಿದ್ದೇನೆ ಎಂದರು.

Latest Videos
Follow Us:
Download App:
  • android
  • ios