ಕಾಂಗ್ರೆಸ್ ಶಾಸಕರು ವಿಧಾನಸಭೆ ಚುನಾವಣೆಯಲ್ಲಿ ಪಡೆದಿರುವ ಮತಗಳಿಗಿಂತ ಹೆಚ್ಚು ಲೀಡ್ ಅನ್ನು ತಮ್ಮ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳಿಗೆ ಕೊಡಿಸಬೇಕು. ತನ್ಮೂಲಕ ಕಾಂಗ್ರೆಸ್‌ನ ಹೆಚ್ಚು ಸಂಸದರನ್ನು ಗೆಲ್ಲಿಸುವ ಮೂಲಕ ಪಕ್ಷಕ್ಕೆ ಬಲ ತುಂಬಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಸಕರಿಗೆ ಸೂಚನೆ ನೀಡಿದ್ದಾರೆ.
ಬೆಂಗಳೂರು (ಆ.08): ಕಾಂಗ್ರೆಸ್ ಶಾಸಕರು ವಿಧಾನಸಭೆ ಚುನಾವಣೆಯಲ್ಲಿ ಪಡೆದಿರುವ ಮತಗಳಿಗಿಂತ ಹೆಚ್ಚು ಲೀಡ್ ಅನ್ನು ತಮ್ಮ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳಿಗೆ ಕೊಡಿಸಬೇಕು. ತನ್ಮೂಲಕ ಕಾಂಗ್ರೆಸ್‌ನ ಹೆಚ್ಚು ಸಂಸದರನ್ನು ಗೆಲ್ಲಿಸುವ ಮೂಲಕ ಪಕ್ಷಕ್ಕೆ ಬಲ ತುಂಬಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಸಕರಿಗೆ ಸೂಚನೆ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ತುಮಕೂರು, ಯಾದಗಿರಿ, ಚಿತ್ರದುರ್ಗ, ಬಾಗಲಕೋಟೆ, ಬಳ್ಳಾರಿ ಹಾಗೂ ಧಾರವಾಡ ಜಿಲ್ಲೆಗಳ ಉಸ್ತುವಾರಿ ಸಚಿವರು, ಸಂಬಂಧಪಟ್ಟಜಿಲ್ಲಾ ಸಚಿವರು, ಶಾಸಕರ ಸಭೆಯಲ್ಲಿ ಈ ರೀತಿಯ ಸೂಚನೆ ನೀಡಲಾಗಿದೆ. ಈ ವೇಳೆ ಲೋಕಸಭೆ ಚುನಾವಣೆ ಸಿದ್ಧತೆ ಬಗ್ಗೆ ಪ್ರಮುಖವಾಗಿ ಚರ್ಚೆಯಾಗಿದ್ದು, ರಾಜ್ಯದಲ್ಲಿ ಕಾಂಗ್ರೆಸ್‌ಗೆ ಪೂರಕ ವಾತಾವರಣ ಇದೆ.
ಲೋಕಸಭೆ ಚುನಾವಣೆಗೆ ಸನ್ನದ್ಧರಾಗಿ: ಸಚಿವ ಸಂತೋಷ್ ಲಾಡ್
ಗ್ಯಾರಂಟಿ ಯೋಜನೆಗಳಿಂದಾಗಿ ಜನರು ಪಕ್ಷ ಹಾಗೂ ಸರ್ಕಾರದ ಬಗ್ಗೆ ಉತ್ತಮ ಅಭಿಪ್ರಾಯ ಹೊಂದಿದ್ದಾರೆ. ಹೀಗಾಗಿ ಇದರ ಲಾಭ ಪಡೆದು ಪಕ್ಷ ಹೆಚ್ಚು ಸ್ಥಾನ ಗೆಲ್ಲಲು ಕೃಷಿ ಮಾಡಬೇಕು. ಪ್ರತಿಯೊಬ್ಬ ಶಾಸಕರೂ ತಮ್ಮ ಕ್ಷೇತ್ರದಲ್ಲಿ ತಾವು ಪಡೆದಿರುವುದಕ್ಕಿಂತ ಹೆಚ್ಚು ಲೀಡ್ ಅನ್ನು ಪಕ್ಷದ ಅಭ್ಯರ್ಥಿಗೆ ಕೊಡಬೇಕು ಎಂದು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳು ಸೂಚನೆ ನೀಡಿರುವುದಾಗಿ ಮೂಲಗಳು ತಿಳಿಸಿವೆ.
ಅನುದಾನ ವಿಚಾರದಲ್ಲಿ ಶಾಸಕರಿಗೆ ಯಾವುದೇ ಅಸಮಾಧಾನ ಬೇಡ. ಗ್ಯಾರಂಟಿಗಳಿಂದಾಗಿ ಅನುದಾನ ಕಡಿಮೆಯಾಗಿದೆ. ಮುಂದಿನ ವರ್ಷದಿಂದ ಹೆಚ್ಚು ಅನುದಾನ ಸಿಗಲಿದೆ. ಹೀಗಾಗಿ ಸರ್ಕಾರ ಹಾಗೂ ಪಕ್ಷದ ಬಗ್ಗೆ ಭರವಸೆಯಿಟ್ಟು ಕೆಲಸ ಮಾಡಿ. ಹೈಕಮಾಂಡ್ ನಮ್ಮ ಬಗ್ಗೆ ಇಟ್ಟಿರುವ ನಂಬಿಕೆ ಉಳಿಸಿಕೊಳ್ಳಲು ಸಹಕರಿಸಿ ಎಂದು ಹೇಳಿದ್ದಾರೆ.
ಕಾಂಗ್ರೆಸ್ಸಿಂದ ದೇಶದ ಆರ್ಥಿಕತೆ ಸದೃಢ: ಸಚಿವ ಎಸ್.ಎಸ್.ಮಲ್ಲಿಕಾರ್ಜುನ
ರಾಜಕೀಯ ಮಾರ್ಗದರ್ಶನ ನೀಡಿದ್ದೇವೆ: ಈ ಬಗ್ಗೆ ಸಭೆ ಬಳಿಕ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ನಾನು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಲವು ಜಿಲ್ಲೆಗಳ ಶಾಸಕರುಗಳ ಜತೆ ಆಯಾ ಕ್ಷೇತ್ರಗಳ ವಿಚಾರವಾಗಿ ಚರ್ಚೆ ಮಾಡಿದ್ದೇವೆ. ಈ ವೇಳೆ ಅವರ ಅಹವಾಲು ಸ್ವೀಕರಿಸುವ ಜತೆಗೆ ರಾಜಕೀಯವಾಗಿ ಮಾರ್ಗದರ್ಶನ ನೀಡಿದ್ದೇವೆ. ಸತತ ಒಂದು ವಾರ ಈ ರೀತಿ ಚರ್ಚೆ ನಡೆಯುತ್ತದೆ ಎಂದು ಹೇಳಿದರು.
