ಟಿಕೆಟ್ ವಿಚಾರವಾಗಿ ದೆಹಲಿಗೆ ಹೋಗಿ ವರಿಷ್ಠರ ಜೊತೆ ಚರ್ಚೆ: ರಮೇಶ್‌ ಜಾರಕಿಹೊಳಿ

ಈಶ್ವರಪ್ಪ ಜೊತೆ ಟಿಕೆಟ್ ಅಸಮಾಧಾನ ಕುರಿತು ಚರ್ಚೆ ನಡೆಸಲಾಗಿದೆ. ಅವರನ್ನು ಮನವೊಲಿಸುವ ಪ್ರಯತ್ನ ನಡೆದಿದೆ. ಇನ್ನೂ ಸಮಯ ಮೀರಿಲ್ಲ. ನಾನು ಟಿಕೆಟ್ ವಿಚಾರವಾಗಿ ದೆಹಲಿಗೆ ಹೋಗಿ ವರಿಷ್ಠರ ಜೊತೆ ಚರ್ಚೆ ಮಾಡುತ್ತೇನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. 

Go to Delhi and discuss with elders regarding ticket issue Says Ramesh Jarkiholi gvd

ಶಿವಮೊಗ್ಗ (ಮಾ.16): ಈಶ್ವರಪ್ಪ ಜೊತೆ ಟಿಕೆಟ್ ಅಸಮಾಧಾನ ಕುರಿತು ಚರ್ಚೆ ನಡೆಸಲಾಗಿದೆ. ಅವರನ್ನು ಮನವೊಲಿಸುವ ಪ್ರಯತ್ನ ನಡೆದಿದೆ. ಇನ್ನೂ ಸಮಯ ಮೀರಿಲ್ಲ. ನಾನು ಟಿಕೆಟ್ ವಿಚಾರವಾಗಿ ದೆಹಲಿಗೆ ಹೋಗಿ ವರಿಷ್ಠರ ಜೊತೆ ಚರ್ಚೆ ಮಾಡುತ್ತೇನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನೂ ಚುನಾವಣೆ ಘೋಷಣೆ ಆಗಿಲ್ಲ. ಸಾಕಷ್ಟು ಬದಲಾವಣೆಗೆ ಅವಕಾಶ ಇದೆ. ಈಶ್ವರಪ್ಪ ಅವರಿಗೆ ಪದೇಪದೆ ಅನ್ಯಾಯ ಆಗುತ್ತಿದೆ. 

ಇದನ್ನು ಸರಿಪಡಿಸಬೇಕು. ಅವರು ಪಕ್ಷದಲ್ಲಿ ಮುಂದುವರಿಯಬೇಕು. ಎಲ್ಲವೂ ಸರಿ ಆಗುತ್ತದೆ ಎನ್ನುವ ವಿಶ್ವಾಸ ಇದೆ ಎಂದರು. ಈಶ್ವರಪ್ಪ ಮನೆಗೆ ಭೇಟಿ ನೀಡಿದ್ದೇನೆ. ಈಶ್ವರಪ್ಪ ನಮ್ಮ ಹಿರಿಯ ನಾಯಕರು. ಹಿಂದುಳಿದ ವರ್ಗಗಳ ನಾಯಕರು. ಅವರ ಜೊತೆ ರಾಜಕೀಯ ಚರ್ಚೆ ಮಾಡಿದ್ದು ನಿಜ. ಪಕ್ಷ ನಿರ್ಣಯ ತೆಗೆದುಕೊಂಡಿದೆ. ಯಾವುದೇ ಪರಿಸ್ಥಿತಿಯಲ್ಲಿ ಅದನ್ನು ಒಪ್ಪಿಕೊಳ್ಳಬೇಕು. ಟಿಕೆಟ್ ಹಂಚಿಕೆ ವಿಚಾರದಲ್ಲಿ ಅನ್ಯಾಯ ಆಗಿದೆ. ಹಾಗಂತ ಹಿಂದುತ್ವದ ಪರ ದನಿ ಎತ್ತಿದವರಿಗೆಲ್ಲ ಅನ್ಯಾಯವಾಗಿದೆ ಎಂದು ನನಗೆ ಅನಿಸುತ್ತಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಕೆಲಸ ಮಾಡಲ್ಲ: ಬಿ.ಶ್ರೀರಾಮುಲು ಲೇವಡಿ

ಹಾವೇರಿ ಟಿಕೆಟ್ ಬಗ್ಗೆ ಅಭ್ಯರ್ಥಿ ಆಗಿರುವ ಬಸವರಾಜ್ ಬೊಮ್ಮಾಯಿ ಜೊತೆಗೂ ನಾನು ಮಾತನಾಡುತ್ತೇನೆ. ಅದನ್ನು ಮಾಧ್ಯಮದ ಮುಂದೆ ಹೇಳಲ್ಲ. ಪಕ್ಷದ ವೇದಿಕೆಯಲ್ಲಿ ಹೇಳುತ್ತೇನೆ. ಬೆಳಗಾವಿ ಟಿಕೆಟ್ ವಿಷಯದಲ್ಲೂ ಬದಲಾವಣೆ ಆಗಬೇಕಿದೆ. ಲೋಕಸಭಾ ಕ್ಷೇತ್ರದ ವ್ಯಾಪ್ತಿಯವರಿಗೆ ಟಿಕೆಟ್‌ ಕೊಡಬೇಕು ಎಂಬುದು ನಮ್ಮ‌ ಮನವಿ. ಈ ವಿಷಯವನ್ನೂ ಪಕ್ಷದ ನಾಯಕರ ಗಮನಕ್ಕೆ ತರುತ್ತೇವೆ ಎಂದು ಭರವಸೆ ನೀಡಿದರು.

ಜಾರಕಿಹೊಳಿ ಶುಗರ್‌ ಫ್ಯಾಕ್ಟ್ರಿಗೆ ಸಿಐಡಿ ದಾಳಿ: ಮಾಜಿ ಸಚಿವ, ಗೋಕಾಕ್‌ನ ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿ ಮಾಲೀಕತ್ವದ ಸೌಭಾಗ್ಯಲಕ್ಷ್ಮಿ ಸಕ್ಕರೆ ಕಾರ್ಖಾನೆ ಮೇಲೆ ಮಂಗಳವಾರ ಸಿಐಡಿ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಪೆಕ್ಸ್ ಬ್ಯಾಂಕ್‌ನಲ್ಲಿ ಕಾರ್ಖಾನೆ ಸ್ಥಾಪನೆಗೆ ₹439 ಕೋಟಿ ಸಾಲ ಪಡೆದು ಮರುಪಾವತಿ ಮಾಡದಿರುವ ಪ್ರಕರಣಕ್ಕೆ ಸಂಬಂಧಿಸಿ ಈ ದಾಳಿ ನಡೆಸಲಾಗಿದೆ ಎನ್ನಲಾಗಿದೆ.

ಗೋಕಾಕ ತಾಲೂಕಿನ ಚಿಕ್ಕನಂದಿ ಗ್ರಾಮದ ಸಮೀಪದಲ್ಲಿರುವ ಈ ಕಾರ್ಖಾನೆ ಸ್ಥಾಪನೆಗೆಂದು ₹439 ಕೋಟಿ ಸಾಲ ಪಡೆಯಲಾಗಿತ್ತು. ಇದೀಗ ಮಾಲೀಕರು ಸಾಲ ಮರು ಪಾವತಿಸದೆ ಮೋಸ ಮಾಡುವ ಉದ್ದೇಶ ಹೊಂದಿದ್ದಾರೆಂದು ಆರೋಪಿಸಿ ಅಪೆಕ್ಸ್ ಬ್ಯಾಂಕ್ ಮ್ಯಾನೇಜರ್ ರಾಜಣ್ಣ ಮುತ್ತಶೆಟ್ಟಿ ಅವರು ಬೆಂಗಳೂರಿನ ವಿವಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣದ ತನಿಖೆಯನ್ನು ನಂತರ ರಾಜ್ಯ ಸರ್ಕಾರ ಸಿಐಡಿಗೆ ವಹಿಸಿತ್ತು. ಮಧ್ಯಾಹ್ನ 3 ಗಂಟೆಗೆ ನಾಲ್ವರು ಅಧಿಕಾರಿಗಳ ನೇತೃತ್ವದ ಸಿಐಡಿ ತಂಡ ಕಾರ್ಖಾನೆಗೆ ದಾಳಿ ನಡೆಸಿದ್ದು, ಈ ವೇಳೆ ಕಾರ್ಖಾನೆಯ ಮುಖ್ಯ ಪ್ರವೇಶ ದ್ವಾರವನ್ನು ಬಂದ್‌ ಮಾಡಲಾಗಿತ್ತು. 

ದಾಳಿ ಸಂದರ್ಭದಲ್ಲಿ ಹೊರಗಿನವರಿಗೆ ಕಾರ್ಖಾನೆಯೊಳಗೆ ಪ್ರವೇಶ ನಿರಾಕರಿಸಲಾಗಿತ್ತು. ಸಂಜೆವರೆಗೂ ಅಧಿಕಾರಿಗಳು ಕಾರ್ಖಾನೆಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದ್ದು, ಶಾಸಕ ರಮೇಶ್‌ ಜಾರಕಿಹೊಳಿ ದಾಳಿ ವೇಳೆ ಊರಲ್ಲಿ ಇರಲಿಲ್ಲ ಎಂದು ತಿಳಿದು ಬಂದಿದೆ. ಸದ್ಯ ರಮೇಶ್‌ ಜಾರಕಿಹೊಳಿ ಪುತ್ರ ಸಂತೋಷ ಜಾರಕಿಹೊಳಿ ಅವರೇ ಕಾರ್ಖಾನೆ ನೋಡಿಕೊಳ್ಳುತ್ತಿದ್ದಾರೆ. ದಾಳಿಗೆ ಸಂಬಂಧಿಸಿ ಕಾರ್ಖಾನೆಯ ವ್ಯವಸ್ಥಾಪಕರು ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಅಲ್ಲದೆ, ದಾಳಿ ಕುರಿತು ಸ್ಥಳೀಯ ಪೊಲೀಸರಿಗೂ ಯಾವುದೇ ಮಾಹಿತಿ ಇರಲಿಲ್ಲ.

ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ಎಂಎಸ್‌ಪಿ ನಿಗದಿ ನೆನಪಾಗಲಿಲ್ಲವೇಕೆ?: ಮಾಜಿ ಸಿಎಂ ಬೊಮ್ಮಾಯಿ

ಏನಿದು ಪ್ರಕರಣ?: ಅಪೆಕ್ಸ್‌ ಬ್ಯಾಂಕ್‌ನಿಂದ ಸಾಲ ಪಡೆಯುವಾಗ ರಮೇಶ್‌ ಜಾರಕಿಹೊಳಿ ಅವರು ಸೌಭಾಗ್ಯಲಕ್ಷ್ಮೀ ಸಕ್ಕರೆ ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ವಸಂತ್, ಶಂಕರ್ ಎಂಬುವವರು ನಿರ್ದೇಶಕರಾಗಿದ್ದರು. ಬ್ಯಾಂಕ್‌ನಿಂದ ಸಾಲ ಪಡೆಯುವ ವೇಳೆ ನಿರ್ದೇಶಕರನ್ನು ಬದಲಿಸುವಂತಿಲ್ಲ ಎಂದು ಷರತ್ತು ಹಾಕಲಾಗಿತ್ತು. ಆದರೂ ನಿರ್ದೇಶಕರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದು, ಬೇರೆಯವರನ್ನು ಆ ಹುದ್ದೆಗೆ ನೇಮಿಸಲಾಗಿತ್ತು. ಈ ಕುರಿತು ಬ್ಯಾಂಕ್‌ಗೆ ಯಾವುದೇ ಮಾಹಿತಿ ನೀಡಿರಲಿಲ್ಲ ಎಂದು ಬ್ಯಾಂಕ್‌ ವ್ಯವಸ್ಥಾಪಕ ನಿರ್ದೇಶಕರು ದೂರಿನಲ್ಲಿ ತಿಳಿಸಿದ್ದರು. ಅದರಂತೆ ಆರೋಪಿಗಳ ವಿರುದ್ಧ ರಮೇಶ್ ಜಾರಕಿಹೊಳಿ ಸೇರಿ ಹಲವರ ವಿರುದ್ಧ ಐಪಿಸಿ ಸೆಕ್ಷನ್ 406, 420 ಹಾಗೂ 34ರ ಅಡಿ ಪ್ರಕರಣ ದಾಖಲಾಗಿತ್ತು.

Latest Videos
Follow Us:
Download App:
  • android
  • ios