ಬೆಳಗಾವಿ, (ಜುಲೈ.25): ಇತ್ತೀಚೆಗೆ ನಡೆದಿದ್ದ ಉಪಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ್ದ ಸಿಎಂ ಬಿಎಸ್ ಯಡಿಯೂರಪ್ಪಗೆ ಕೋರ್ಟ್ ಸಂಕಷ್ಟ ಎದುರಾಗಿದೆ.

ಗೋಕಾಕ ಉಪ ಚುನಾವಣೆಯಲ್ಲಿ ದಾಖಲಾದ ಚುನಾವಣಾ ನೀತಿ ಸಂಹಿತೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 1 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ಗೋಕಾಕ ಸಿವಿಲ್ ಜಡ್ಜ್ ಜೆಎಂಎಫ್ ಸಿ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.

ಉಪಚುನಾವಣೆ ಬಿಸಿ: ಸಿಎಂ ಬಿಎಸ್‌ವೈ ಸೇರಿ ಐವರ ಮೇಲೆ ದೂರು ದಾಖಲು

ಗೋಕಾಕ ಉಪ ಚುನಾವಣೆಯಲ್ಲಿ  ಯಡಿಯೂರಪ್ಪ ಭಾಷಣ ಮಾಡುವ ವೇಳೆ 'ವೀರಶೈವ ಲಿಂಗಾಯತರ ಒಂದೇ ಮತಗಳು ಆ ಕಡೆ, ಈ ಕಡೆ ಆಗದಂತೆ  ಬಿಜೆಪಿಗೆ ಹಾಕಬೇಕೆಂದು ಹೇಳಿದ್ದರು.  ಜಾತಿ ಹೆಸರಿನಲ್ಲಿ ಮತಯಾಚನೆ ಮಾಡಿದ್ದಾರೆ ಎಂದು ಆರೋಪಿಸಿ ನೀತಿ ಸಂಹಿತೆ ಉಲ್ಲಂಘನೆಯ ಪ್ರಕರಣ ಗೋಕಾಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣಕ್ಕೆ ಸಂಭಂಧಿಸಿದಂತೆ ಗೋಕಾಕ್ ಪೊಲೀಸ್ ಠಾಣೆಯಿಂದ ನ್ಯಾಯಾಲಯದಲ್ಲಿ ಬಿ ರಿಪೋರ್ಟ್ ಸಲ್ಲಿಕೆಯಾಗಿತ್ತು. ಆದರೆ ನ್ಯಾಯಾಲಯ ಇದನ್ನು ತಿರಸ್ಕರಿಸಿ ಮುಖ್ಯಮಂತ್ರಿ ಬಿ .ಎಸ್ ಯಡಿಯೂರಪ್ಪ ಅವರಿಗೆ ಸೆಪ್ಟೆಂಬರ್ 1ರಂದು ನ್ಯಾಯಾಲಯಕ್ಕೆ ಹಾಜರಾಗುತೆ ಸಮನ್ಸ್ ಜಾರಿ ಮಾಡಿದೆ.

ರಮೇಶ್ ಜಾರಿಹೊಳಿ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಈ ಹಿನ್ನೆಯಲ್ಲಿ 2019ರಲ್ಲಿ ನಡೆದ ಗೋಕಾಕ್‌ ಉಪಚುನಾವಣೆ ವೇಳೆ ಬಿಎಸ್‌ವೈ ಜಾತಿ ಮೇಲೆ ಓಟ್ ಕೇಳಿದ್ದರು. ಇದರಿಂದ ಅವರ ವಿರುದ್ಧ ನೀತಿ ಸಂಹಿತೆ ದೂರು ದಾಖಲಾಗಿತ್ತು.