ಸರ್ಕಾರ ಪತನ ತಂತ್ರ ನಿಜವಿರಬಹುದು: ಸಚಿವ ಸತೀಶ್ ಜಾರಕಿಹೊಳಿ
ಬಿಜೆಪಿಯವರು ರಾಜ್ಯ ಸರ್ಕಾರ ಉರುಳಿಸಲು ತಂತ್ರ ನಡೆಸುತ್ತಿರುವುದು ನಿಜ ಇದ್ದರೂ ಇರಬಹುದು ಅಥವಾ ಇಲ್ಲದೇ ಇರಬಹುದು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ ನೋಡಿಕೊಳ್ಳುತ್ತಾರೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಬೆಳಗಾವಿ (ಜು.25): ಬಿಜೆಪಿಯವರು ರಾಜ್ಯ ಸರ್ಕಾರ ಉರುಳಿಸಲು ತಂತ್ರ ನಡೆಸುತ್ತಿರುವುದು ನಿಜ ಇದ್ದರೂ ಇರಬಹುದು ಅಥವಾ ಇಲ್ಲದೇ ಇರಬಹುದು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ ನೋಡಿಕೊಳ್ಳುತ್ತಾರೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಸುವರ್ಣಸೌಧದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಸರ್ಕಾರ ಕೆಡವಲು ಬೆಂಗಳೂರಿನಿಂದ ಹೊರಗಿದ್ದುಕೊಂಡು ಪ್ರಯತ್ನ ನಡೆಯುತ್ತಿದೆ ಎಂಬ ಡಿಕೆಶಿ ಹೇಳಿಕೆಯನ್ನು ಸಮರ್ಥಿಸಿಕೊಂಡ ಸಚಿವರು, ಬಿಜೆಪಿಯವರು ದೇಶಾದ್ಯಂತ ಜನರಿಂದ ಆಯ್ಕೆ ಆದ ಸರ್ಕಾರ ಉರುಳಿಸುವುದರಲ್ಲಿ ಪರಿಣಿತರಾಗಿದ್ದಾರೆ.
ಬೇರೆ, ಬೇರೆ ರಾಜ್ಯಗಳಲ್ಲಿ ಅನೇಕ ಸರ್ಕಾರಗಳನ್ನು ಪತನಗೊಳಿಸಿದ್ದಾರೆ. ಅವರು ನಿರಂತರವಾಗಿ ಇಂತಹ ಕೆಲಸ ಮಾಡುತ್ತಾರೆ. ಮೊದಲು ಮಹಾರಾಷ್ಟ್ರದಲ್ಲಿ ಆಯ್ತು, ನಂತರ ತೆಲಂಗಾಣ, ಮಧ್ಯಪ್ರದೇಶದಲ್ಲಿಯೂ ಈ ನಿಟ್ಟಿನಲ್ಲಿ ಯತ್ನ ನಡೆಯಿತು, ಅದು ವಿಫಲ ಆಗಿದೆ. ಅವರು ಜನಾದೇಶ ಪಡೆದುಕೊಂಡು ಬರುವುದಿಲ್ಲ. ಶಾಸಕರನ್ನು ಮಂತ್ರಿ ಮಾಡುತ್ತೇವೆ ಎಂಬುದಾಗಿ ಆಮಿಷ ಒಡ್ಡುತ್ತಾರೆ. ಕೆಲವರು ಇದಕ್ಕೆ ಬಲಿಯಾಗಬಹುದು. ಇನ್ನೂ ಕೆಲವರು ಬಲಿಯಾಗದನೇ ಇರಬಹುದು. ಹಾಗಾಗಿ, ನಾವು ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದರು. ಅಸಮಾಧಾನ ಹೊಂದಿದ ಶಾಸಕರು ಮೂರೂ ಪಕ್ಷದಲ್ಲಿದ್ದಾರೆ.
ವಿಶ್ವಕರ್ಮ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಸಿಕ್ಕಿಲ್ಲ: ಕೆ.ಪಿ.ನಂಜುಂಡಿ
ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಮೂರು ಪಕ್ಷದಲ್ಲಿ ಅಸಮಾಧಾನಿತ ಶಾಸಕರಿದ್ದಾರೆ. ಅವರವರ ಮನಸ್ಥಿತಿ ಹೇಗಿರುತ್ತದೆ ಎಂಬುದನ್ನು ಹೇಳುವುದಕ್ಕೆ ಆಗುವುದಿಲ್ಲ. ಕುಮಾರಸ್ವಾಮಿಯವರು ಇದೇ ಉದ್ದೇಶಕ್ಕೆ ಹೋಗಿರಬಹುದು. ಅದು ನಿಜಾನೂ ಇರಬಹುದು. ಸುಳ್ಳು ಇರಬಹುದು. ಆದರೆ, ನಮ್ಮ ಪಕ್ಷ, ಸಿಎಂ, ಡಿಸಿಎಂ ಈ ಬಗ್ಗೆ ಗಂಭೀರವಾಗಿ ವಿಚಾರ ಮಾಡಬೇಕು. ಅವರು ಹೆಚ್ಚು ಜವಾಬ್ದಾರರು. ಏಕೆಂದರೆ ಪಾರ್ಟಿ ಅವರ ಮೇಲೆ ಡಿಪೆಂಡ್ ಇದೆ. ಈ ನಿಟ್ಟಿನಲ್ಲಿ ಪ್ರಯತ್ನ ನಡೆಯುತ್ತಿದೆಯೋ, ಇಲ್ಲವೋ ಎಂಬುದು ಅವರಿಗೆ ಗೊತ್ತಿರುತ್ತದೆ. ಅವರ ಕಡೆ ಎಲ್ಲ ಮಾಹಿತಿ ಇರುತ್ತದೆ. ರಾಜಕಾರಣ ಎಂದರೆ ‘ಟ್ವೆಂಟಿ ಫೋರ್ ಇಂಟು ಸೆವೆನ್’ ಇದ್ದ ಹಾಗೆ ಎಂದು ಹೇಳಿದರು.
ಹೈಕಮಾಂಡ್ ಹೇಳಿದರೆ ಲೋಕಸಭೆ ಚುನಾವಣೆಗೆ ಸ್ಪರ್ಧೆ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹೈಕಮಾಂಡ್ ಸೂಚಿಸಿದರೆ ಸ್ಪರ್ಧೆಗೆ ಸಿದ್ಧನಿದ್ದೇನೆ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಿ ಯಾವುದನ್ನೂ ಹೇಳಲಿಕ್ಕೆ ಆಗುವುದಿಲ್ಲ. ಕೊನೆ ಗಳಿಗೆಯಲ್ಲಿ ಏನಾದರೂ ಆಗಬಹುದು. ಹಾಗೆ ಪಕ್ಷದ ಹೈಕಮಾಂಡ್ ಸೂಚನೆ ನೀಡಿದರೆ ಲೋಕಸಭೆಗೆ ಸ್ಪರ್ಧಿಸಲೂ ಸಿದ್ಧ ಎಂದು ತಿಳಿಸಿದರು.
ಕೆಆರ್‌ಎಸ್ ಜಲಾಶಯದ ಒಳಹರಿವಿನಲ್ಲಿ ಅಲ್ಪಪ್ರಮಾಣದ ಹೆಚ್ಚಳ
ಲೋಕಸಭಾ ಚುನಾವಣೆ ಸಂಬಂಧ ಇತ್ತೀಚೆಗೆ ಬೆಂಗಳೂರಿನಲ್ಲಿ ಸಭೆ ನಡೆದಿದೆ. ಆಕಾಂಕ್ಷಿಗಳ ಪಟ್ಟಿಯೂ ದೊಡ್ಡದಿದೆ. ಇನ್ನೆರಡು ತಿಂಗಳಲ್ಲಿ ಬೆಳಗಾವಿ, ಚಿಕ್ಕೋಡಿ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗುವುದು ಎಂದ ಅವರು, ಬಹಳಷ್ಟು ಜನ ಚಿಕ್ಕೋಡಿ ಟಿಕೆಟ್ ನೀಡಿದರೆ ಕಾಂಗ್ರೆಸ್‌ಗೆ ಬರುವುದಾಗಿ ಹೇಳಿದ್ದಾರೆ. ಪಕ್ಷಕ್ಕಾಗಿ ಬರುವವರು ಬರಲಿ. ಅದನ್ನು ಸ್ಥಳೀಯರು ಹಾಗೂ ನಾವು ಸೇರಿ ಅವರ ಹೆಸರನ್ನು ಹೈಕಮಾಂಡ್‌ಗೆ ಶಿಫಾರಸು ಮಾಡುತ್ತೇವೆ ಎಂದರು.