ಸರ್ಕಾರಿ ವಕೀಲರ ನೇಮಕ ಹಗರಣ: ಇಲಾಖಾ ತನಿಖೆಗೆ ಸಿಎಂ ಸಿದ್ದು ನಿರ್ದೇಶನ
ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗುತ್ತಿರುವ ಅಕ್ರಮ, ಅವ್ಯವಹಾರ ಪ್ರಕರಣಗಳನ್ನು ಒಂದೊಂದಾಗಿ ತನಿಖೆಗೆ ವಹಿಸುತ್ತಿರುವ ಕಾಂಗ್ರೆಸ್ ಸರ್ಕಾರ ಇದೀಗ ಸಹಾಯಕ ಸರ್ಕಾರಿ ಅಭಿಯೋಜಕರು ಮತ್ತು ಸಹಾಯಕ ಸರ್ಕಾರಿ ವಕೀಲರ ನೇಮಕಾತಿ ಪರೀಕ್ಷೆಯಲ್ಲಿ ಕೇಳಿಬಂದಿದ್ದ ಅಕ್ರಮ, ಭ್ರಷ್ಟಾಚಾರ ಆರೋಪವನ್ನು ಇಲಾಖಾ ತನಿಖೆಗೆ ವಹಿಸಿದೆ.
ಬೆಂಗಳೂರು (ಜೂ.07): ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗುತ್ತಿರುವ ಅಕ್ರಮ, ಅವ್ಯವಹಾರ ಪ್ರಕರಣಗಳನ್ನು ಒಂದೊಂದಾಗಿ ತನಿಖೆಗೆ ವಹಿಸುತ್ತಿರುವ ಕಾಂಗ್ರೆಸ್ ಸರ್ಕಾರ ಇದೀಗ ಸಹಾಯಕ ಸರ್ಕಾರಿ ಅಭಿಯೋಜಕರು ಮತ್ತು ಸಹಾಯಕ ಸರ್ಕಾರಿ ವಕೀಲರ ನೇಮಕಾತಿ ಪರೀಕ್ಷೆಯಲ್ಲಿ ಕೇಳಿಬಂದಿದ್ದ ಅಕ್ರಮ, ಭ್ರಷ್ಟಾಚಾರ ಆರೋಪವನ್ನು ಇಲಾಖಾ ತನಿಖೆಗೆ ವಹಿಸಿದೆ.
ಈ ಸಂಬಂಧ ಮಂಗಳವಾರ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಟಿಪ್ಪಣಿ ಹೊರಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, 2022ರ ಜುಲೈ 23 ಮತ್ತು 24ರಂದು ನಡೆದ ಸಹಾಯಕ ಸರ್ಕಾರಿ ಅಭಿಯೋಜಕರು, ಸಹಾಯಕ ಸರ್ಕಾರಿ ವಕೀಲರ ನೇಮಕಾತಿ ಪರೀಕ್ಷೆಯಲ್ಲಿ ಭ್ರಷ್ಟಾಚಾರ, ಅಕ್ರಮಗಳು ನಡೆದಿರುವ ಬಗ್ಗೆ ವ್ಯಾಪಕ ದೂರುಗಳು ಸಲ್ಲಿಕೆಯಾಗಿವೆ.
ಬಾಡಿಗೆ ಮನೆಗಳಿಗೂ ಉಚಿತ ವಿದ್ಯುತ್: ಗೊಂದಲಕ್ಕೆ ತೆರೆ ಎಳೆದ ಸಿದ್ದು, ಇಂಧನ ಸಚಿವ ಜಾರ್ಜ್
ಹಾಗಾಗಿ ಈ ಬಗ್ಗೆ ಕೂಡಲೇ ನಿರ್ದಾಕ್ಷಿಣ್ಯವಾಗಿ ಇಲಾಖಾ ತನಿಖೆ ನಡೆಸಿ ತಪ್ಪಿತಸ್ಥರ ವಿವರಗಳೊಂದಿಗೆ 10 ದಿನಗಳೊಳಗೆ ವರದಿ ನೀಡಬೇಕು ಎಂದು ಆದೇಶ ಹೊರಡಿಸಿದ್ದಾರೆ. ಇತ್ತೀಚೆಗಷ್ಟೆಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ನೀಡಲಾಗಿದ್ದ 3000 ಕೋಟಿ ರು. ಅನುದಾನವನ್ನು ದುರ್ಬಳಕೆ ಮಾಡಲಾಗಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅವರು ಇಲಾಖಾ ತನಿಖೆಗೆ ಆದೇಶಿಸಿದ್ದನ್ನು ಸ್ಮರಿಸಬಹುದು.
ಗೋ ಹತ್ಯೆ ನಿಷೇಧ ಕಾಯ್ದೆ ಬದಲಾವಣೆ ಸಲ್ಲದು: ರಾಜ್ಯದ ಪಶು ಸಂಗೋಪನಾ ಸಚಿವರು ಗೋ ಹತ್ಯೆ ನಿಷೇಧ ಕಾನೂನು ಪುನರ್ ಪರಿಶೀಲನೆ ವಿಷಯ ಉಲ್ಲೇಖಿಸಿರುವುದು ಖಂಡನಾರ್ಹ. ಯಾವುದೇ ಕಾರಣಕ್ಕೂ ಈ ಕಾಯ್ದೆ ಬದಲಾವಣೆ ಮಾಡಬೇಡಿ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಸಚಿವರು ಗೋವಿಗೆ ಒಂದು ಕಾನೂನು ಎಮ್ಮೆಗೆ ಒಂದು ಕಾನೂನು ಎಂದು ಮಾತನಾಡಿದ್ದಾರೆ. ಪಶು ಸಂಗೋಪನಾ ಸಚಿವರು ತಮ್ಮ ಮನೆಯ ಗೃಹ ಪ್ರವೇಶಕ್ಕೆ ಗೋವಿಗೆ ಮೊದಲು ಪ್ರವೇಶ ಮಾಡುತ್ತಾರೋ ಅಥವಾ ಎಮ್ಮೆ, ಕೋಣ ಪ್ರವೇಶ ಮಾಡುತ್ತಾರೋ ಎಂಬುದನ್ನು ತಿಳಿಸಲಿ.
ಗೋವಿಗೆ ಭಾರತದಲ್ಲಿ ತನ್ನದೇ ಆದ ಸ್ಥಾನಮಾನವಿದೆ. ಪೂಜ್ಯ ಭಾವನೆಯಿಂದ ನಾವು ಕಾಣುತ್ತೇವೆ. ಕೋಟ್ಯಂತರ ದೇವತೆಗಳು ಗೋವಿನಲ್ಲಿದೆ ಎಂಬ ವಿಶ್ವಾಸ ನಮಗಿದೆ. ಹಾಗಾಗಿ ಸಚಿವರು ಇಂತಹ ಹೇಳಿಕೆ ನೀಡುವುದನ್ನು ನಿಲ್ಲಿಸಲಿ ಎಂದರು. ಕಾಂಗ್ರೆಸ್ ಸರ್ಕಾರ ನೀಡಿರುವ ಗ್ಯಾರಂಟಿಗಳ ಬಗ್ಗೆ ಜನ ಪ್ರಶ್ನೆ ಮಾಡುತ್ತಿದ್ದಾರೆ. ಅದನ್ನು ಮರೆಮಾಚಲು ಇಂತಹ ಹೇಳಿಕೆ ಕೊಟ್ಟು ಕಾಂಗ್ರೆಸ್ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಯಾವುದೇ ಕಾರಣಕ್ಕೂ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಬದಲಾವಣೆ ಮಾಡಬಾರದು ಎಂದರು.
ರಾಮನಗರ, ಬನ್ನೇರುಘಟ್ಟದಲ್ಲಿ ಆನೆ ಕಾರ್ಯಪಡೆ ರಚನೆ: ಸಚಿವ ಈಶ್ವರ ಖಂಡ್ರೆ
ಗ್ಯಾರಂಟಿ ಯೋಜನೆಯಲ್ಲಿ ತಾರತಮ್ಯ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೂ ಬರವುದಕ್ಕೂ ಮೊದಲು ಸಿದ್ದರಾಮಯ್ಯಗೂ ಫ್ರೀ, ಡಿಕೆಶಿಗೂ ಫ್ರೀ ಎಂದು ಹೇಳಿದ್ದರು ಈಗ ಯಾಕೆ ತಾರತಮ್ಯ. ನೀವು ನೀಡಿದ್ದ ಗ್ಯಾರಂಟಿ ಯೋಜನೆಯ ಆಶ್ವಾಸನೆಗಳನ್ನು ಯಾವುದೇ ಷರತ್ತು ವಿಧಿಸದೇ ಜಾರಿಗೊಳಿಸಿ. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದಿಲ್ಲ ಅಂದುಕೊಂಡು ಈ ಗ್ಯಾರಂಟಿ ಯೋಜನೆ ಹೇಳಿದ್ದರು. ಆದರೆ, ಜನತೆ ಇವರ ಗ್ಯಾರಂಟಿ ಯೋಜನೆ ನಂಬಿ ಸ್ಪಷ್ಟವಾದ ಬಹುಮತ ಕೊಟ್ಟಿದ್ದಾರೆ. ಎಲ್ಲರಿಗೂ ಉಚಿತ ವಿದ್ಯುತ್ ನೀಡುವುದಾಗಿ ಹೇಳಿದ್ದರು. ಆದರೆ, ಈಗ ಅದಕ್ಕೂ ಹಲವು ಷರತ್ತುಗಳನ್ನು ವಿಧಿಸಿದ್ದಾರೆ. ಒಂದೆಡೆ ವಿದ್ಯುತ್ ದರ ಏರಿಕೆ ಮಾಡಲಾಗಿದೆ. ಐದಾರು ತಿಂಗಳಲ್ಲಿ ಕಾಂಗ್ರೆಸ್ ನೀಡಿದ ಗ್ಯಾರಂಟಿ ಸ್ಕೀಮ್ ಬೋಗಸ್ ಆಗಲಿವೆ ಎಂದು ಜನರೇ ಮಾತನಾಡುತ್ತಿದ್ದಾರೆ ಎಂದರು.