ರಾಜ್ಯಪಾಲರ ಬೊಗಳೆ ಭಾಷಣ ಸಪ್ಪೆ, ಸುಳ್ಳಿನ ಕಂತೆ: ಮಾಜಿ ಸಿಎಂ ಬೊಮ್ಮಾಯಿ ಟೀಕೆ
ರಾಜ್ಯಪಾಲರ ಭಾಷಣ ಸಪ್ಪೆಯಾಗಿದ್ದು, ಯಾವುದೇ ಜೀವಾಳ ಇಲ್ಲ. ಹೊಸ ಸರ್ಕಾರ ಬಂದಾಗ ಹೊಸ ಚೈತನ್ಯ, ಹೊಸ ದಿಕ್ಸೂಚಿ ಇಲ್ಲದೆ ಸರ್ಕಾರ ಕವಲು ದಾರಿಯಲ್ಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.
ಬೆಂಗಳೂರು (ಜು.04): ರಾಜ್ಯಪಾಲರ ಭಾಷಣ ಸಪ್ಪೆಯಾಗಿದ್ದು, ಯಾವುದೇ ಜೀವಾಳ ಇಲ್ಲ. ಹೊಸ ಸರ್ಕಾರ ಬಂದಾಗ ಹೊಸ ಚೈತನ್ಯ, ಹೊಸ ದಿಕ್ಸೂಚಿ ಇಲ್ಲದೆ ಸರ್ಕಾರ ಕವಲು ದಾರಿಯಲ್ಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ. ಸೋಮವಾರ ವಿಧಾನಸೌಧದಲ್ಲಿ ರಾಜ್ಯಪಾಲರ ಭಾಷಣದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ರಾಜ್ಯಪಾಲರ ಭಾಷಣದಲ್ಲಿ ಭರವಸೆ ಮೂಡುವಂತಹ ಯಾವುದೇ ಭಾಷಣ ಇಲ್ಲ. ಸುಳ್ಳಿನ ಕಂತೆ ಎಂಬುದು ಸಾಬೀತಾಗಿದೆ. ಅಕ್ಕಿಯನ್ನು 10 ಕೆಜಿ ಕೊಡುತ್ತೇವೆ ಎಂದು ಸಹಿ ಮಾಡಿ ಹೇಳಿದ್ದರು.
ಈಗ ಕೇಂದ್ರ ಎಂದು ಹೇಳದೆ ಆಹಾರ ಭದ್ರತೆಯಲ್ಲಿ ಕೊಡುತ್ತೇವೆ ಎಂದಿದ್ದಾರೆ. ಅಕ್ಕಿಯನ್ನು ಕೇಂದ್ರ ಸರ್ಕಾರ ನೀಡುತ್ತಿದೆ ಎಂದು ಹೇಳಲು ಅವರಿಗೆ ನಾಚಿಕೆಯಾಗಿದೆ ಎಂದು ವಾಗ್ದಾಳಿ ನಡೆಸಿದರು. ಗೃಹ ಜ್ಯೋತಿ ಯೋಜನೆಯಡಿಯಲ್ಲಿ 200 ಯೂನಿಟ್ ವಿದ್ಯುತ್ ಉಚಿತ ಕೊಡುವುದಾಗಿ ಹೇಳಿದ್ದರು. ಆದರೆ, ಈಗ ರಾಜ್ಯಪಾಲರ ಮೂಲಕ ಸುಳ್ಳು ಹೇಳಿಸಿದ್ದಾರೆ. ಜನರನ್ನು ಯಾಮಾರಿಸುವ ಕೆಲಸ ಮಾಡಿದ್ದಾರೆ. ಜವಾಬ್ದಾರಿಯಿಂದ ನುಸುಳಿಕೊಳ್ಳುತ್ತಿರುವ ಸರ್ಕಾರ ಇದಾಗಿದೆ. ಅರ್ಥವಿಲ್ಲದೆ ಸುಮ್ಮನೆ ಬೊಗಳೆ ಭಾಷಣ ಮಾಡಿಸಿದ್ದಾರೆ. ಈ ಸರ್ಕಾರಕ್ಕೆ ಅಭಿವೃದ್ಧಿಯ ಚಿಂತನೆ ಇಲ್ಲ ಎಂದು ಆರೋಪಿಸಿದರು.
ಬರಿದಾಗುತ್ತಿದೆ ಕೆಆರ್‌ಎಸ್ ಜಲಾಶಯ: ಕುಡಿಯುವ ನೀರಿಗೂ ಸಮಸ್ಯೆಯಾಗುವ ಸಂಕಷ್ಟ ಪರಿಸ್ಥಿತಿ
ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಗಲಾಟೆ ಆಗ್ತಿಲ್ಲ: ಹೋದಲ್ಲೆಲ್ಲಾ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಗಲಾಟೆ ಆಗುತ್ತಿಲ್ಲ. ಬೆಳಗಾವಿ ಹಾಗೂ ಚಿಕ್ಕೋಡಿಯಲ್ಲಿ ಉತ್ತಮ ಕಾರ್ಯಕ್ರಮಗಳಾದವು. ಬಾಗಲಕೋಟೆಯ ಕಾರ್ಯಕ್ರಮದಲ್ಲಿ ಓರ್ವ ಕಾರ್ಯಕರ್ತನಿಂದ ಮಾತ್ರ ಗಲಾಟೆ ಆಗಿದೆ. ಅದೇನು ದೊಡ್ಡ ವಿಚಾರವಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.
ನಗರದಲ್ಲಿ ಬಿಜೆಪಿ ಕಾರ್ಯಕರ್ತರ ಗಲಾಟೆ ನಂತರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ವಿಜಯಪುರದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಯತ್ನಾಳ್ ಬಂದ ಮೇಲೆ ಕಾರ್ಯಕ್ರಮ ಆರಂಭಿಸಬೇಕು ಎಂದು ಕಾರ್ಯಕರ್ತರು ಗಲಾಟೆ ಮಾಡಿದರು. ಬೇರೆ ಕೆಲಸ ಇರುವ ಕಾರಣ ಯತ್ನಾಳ್ ಕಾರ್ಯಕ್ರಮಕ್ಕೆ ಬಂದಿಲ್ಲ. ಈ ಬಗ್ಗೆ ಮೊದಲೇ ಯತ್ನಾಳ್ ನನಗೆ ಹೇಳಿದ್ದರು. ಅವರು ವಿಜಯಪುರದಲ್ಲಿ ಇರಲಿಲ್ಲ. ಆದಾಗ್ಯೂ ಯತ್ನಾಳ್ ಬೆಂಬಲಿಗರು ಅವರು ಕಾರ್ಯಕ್ರಮಕ್ಕೆ ಬರುವವರೆಗೆ ಕಾರ್ಯಕ್ರಮ ಆರಂಭಿಸಬಾರದು ಎಂದು ಗಲಾಟೆ ನಡೆಸಿದರು.
ಬಿಜೆಪಿ 605 ಭರವಸೆಗಳಲ್ಲಿ ಎಷ್ಟು ಈಡೇರಿಸಿದೆ?: ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಪ್ರಶ್ನೆ
ಇದನ್ನು ಹೊರತುಪಡಿಸಿ ಬೇರೆ ಯಾವುದೇ ಗಲಾಟೆ ನಡೆದಿಲ್ಲ. ಯತ್ನಾಳ್ ವಿರುದ್ಧ ಮುರುಗೇಶ ನಿರಾಣಿ, ಎ.ಎಸ್.ಪಾಟೀಲ ನಡಹಳ್ಳಿ ವಾಗ್ದಾಳಿ ವಿಚಾರವನ್ನು ದೊಡ್ಡದು ಮಾಡಬೇಕಿಲ್ಲ ಎಂದರು. ಮುಂಬರುವ ಲೋಕಸಭಾ ಚುನಾವಣೆಗೆ ವಿಜಯಪುರ ಕ್ಷೇತ್ರದಿಂದ ರಮೇಶ ಜಿಗಜಿಣಗಿ ಅವರಿಗೆ ಟಿಕೆಟ್ ನೀಡುವ ವಿಚಾರ ಪಾರ್ಲಿಮೆಂಟ್ ಬೋರ್ಡ್‌ನಲ್ಲಿ ನಿರ್ಧಾರವಾಗುತ್ತದೆ. ಚುನಾವಣೆಯ ಸೋಲಿನ ನಂತರ ಎಲ್ಲಾ ಪಕ್ಷಗಳಲ್ಲಿಯೂ ಇಂತಹ ಘಟನೆಗಳು ನಡೆಯುತ್ತವೆ. ಕಳೆದ ಬಾರಿ ಕಾಂಗ್ರೆಸ್ ಸೋತಾಗಲೂ ಇದೇ ತರಹ ನಡೆದಿತ್ತು ಎಂದು ಹೇಳಿದರು.