ಲೋಕಸಭೆ ಚುನಾವಣೆ 2024: ಚಿತ್ರದುರ್ಗ ಕ್ಷೇತ್ರಕ್ಕೆ ಕಾರಜೋಳ ಹೆಸರು ಫೈನಲ್‌?

ಹಾಲಿ ಸಂಸದರಾಗಿರುವ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಅವರು ಸ್ಪರ್ಧಿಸಲು ನಿರಾಕರಿಸಿರುವುದರಿಂದ ಅದೇ ಪರಿಶಿಷ್ಟ ಜಾತಿಯ ಮಾದಿಗ ಸಮುದಾಯಕ್ಕೆ ಸೇರಿದ ಕಾರಜೋಳ ಅವರನ್ನು ಕಣಕ್ಕಿಳಿಸುವುದರಿಂದ ಅನುಕೂಲವಾಗುತ್ತದೆ ಎಂಬ ಅಭಿಪ್ರಾಯ ಪಕ್ಷದಲ್ಲಿ ವ್ಯಕ್ತವಾಗಿದೆ.

Govind Karjol's Name is Final for Chitradurga Constituency of Lok Sabha Election 2024 grg

ಬೆಂಗಳೂರು(ಮಾ.26):  ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಸ್ಪರ್ಧಿಸುವುದು ಬಹುತೇಕ ನಿಚ್ಚಳವಾಗಿದ್ದು, ಮಂಗಳವಾರ ಪ್ರಕಟಗೊಳ್ಳುವ ನಿರೀಕ್ಷೆಯಿದೆ. ಹಾಲಿ ಸಂಸದರಾಗಿರುವ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಅವರು ಸ್ಪರ್ಧಿಸಲು ನಿರಾಕರಿಸಿರುವುದರಿಂದ ಅದೇ ಪರಿಶಿಷ್ಟ ಜಾತಿಯ ಮಾದಿಗ ಸಮುದಾಯಕ್ಕೆ ಸೇರಿದ ಕಾರಜೋಳ ಅವರನ್ನು ಕಣಕ್ಕಿಳಿಸುವುದರಿಂದ ಅನುಕೂಲವಾಗುತ್ತದೆ ಎಂಬ ಅಭಿಪ್ರಾಯ ಪಕ್ಷದಲ್ಲಿ ವ್ಯಕ್ತವಾಗಿದೆ.

ಇದಕ್ಕೂ ಮೊದಲು ನಾರಾಯಣಸ್ವಾಮಿ ಬದಲು ಮಾದಾರ ಚನ್ನಯ್ಯ ಸ್ವಾಮೀಜಿಗಳನ್ನು ಕಣಕಳಿಸುವ ಪ್ರಯತ್ನ ನಡೆದರೂ ಅದು ಫಲ ನೀಡಲಿಲ್ಲ. ಹೀಗಾಗಿ, ಮಾದಿಗ ಸಮುದಾಯದ ಅಗ್ರಗಣ್ಯ ನಾಯಕರೂ ಆಗಿರುವ ಹಾಗೂ ಇತರ ಎಲ್ಲ ಸಮುದಾಯಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ಕಾರಜೋಳ ಅವರನ್ನೇ ಅಭ್ಯರ್ಥಿಯನ್ನಾಗಿಸುವ ಬಗ್ಗೆ ಪಕ್ಷದ ನಾಯಕರು ನಿರ್ಧಾರ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಚಿತ್ರದುರ್ಗದಲ್ಲೂ ಈಗ ಬಿಜೆಪಿಗರ ವಿರುದ್ಧ ಗೋಬ್ಯಾಕ್‌ ಪ್ರತಿಭಟನೆ

ಇದೇ ವೇಳೆ ಜಿಲ್ಲೆಯ ಹೊಳಲ್ಕೆರೆ ಹಾಲಿ ಶಾಸಕ ಚಂದ್ರಪ್ಪ ಅವರ ಪುತ್ರ ರಘುಚಂದನ್ ಅವರೂ ಪ್ರಬಲ ಆಕಾಂಕ್ಷಿಯಾಗಿದ್ದರು. ಆದರೆ, ಗೆಲ್ಲುವ ಲೆಕ್ಕಾಚಾರ ಮತ್ತು ಹಿರಿತನದ ಆಧಾರದ ಮೇಲೆ ಕಾರಜೋಳ ಅವರೇ ಸೂಕ್ತರಾಗಬಲ್ಲರು ಎಂಬ ನಿಲುವನ್ನು ರಾಜ್ಯ ಬಿಜೆಪಿ ನಾಯಕರು ಒಕ್ಕೊರಲಿನಿಂದ ವರಿಷ್ಠರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.

Latest Videos
Follow Us:
Download App:
  • android
  • ios