ಬಿಜೆಪಿಗೆ ಸೇರುವಂತೆ ಡಿಕೆಶಿ ಮೇಲೆ ಒತ್ತಡ ಹೇರಲಾಗ್ತಿದ್ಯಾ? ಗಂಭೀರ ಆರೋಪ

* ಬಿಜೆಪಿಗೆ ಸೇರುವಂತೆ ಡಿಕೆ ಶಿವಕುಮಾರ್‌ಗೆ ಮೇಲೆ ಒತ್ತಡ ಹೇರಲಾಗ್ತಿದ್ಯಾ?
* ಸ್ಫೋಟಕ ಆರೋಪ ಮಾಡಿದ ಡಿಕೆ ಶಿವಕುಮಾರ್
* ಟ್ವೀಟ್ ಮೂಲಕ ಬಿಜೆಪಿ ವಿರುದ್ಧ ಗುಡುಗು

govt agencies filing cases against me just because iam not joining-bjp Says dk shivakumar rbj

ಬೆಂಗಳೂರು, (ಮೇ.26): ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ವಿರುದ್ಧ ಜಾರಿ ನಿರ್ದೇಶನಾಲಯ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ  ಡಿ.ಕೆ. ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. 

ಬಿಜೆಪಿಗೆ ಸೇರುವಂತೆ ನನ್ನ ಮೇಲೆ ಒತ್ತಡ ಹೇರಲಾಗ್ತಿದೆ. ಬಿಜೆಪಿಗೆ ಸೇರಲು ಒಪ್ಪದಿದ್ದಾಗ ನನ್ನ ವಿರುದ್ಧ ಸಂಚು ರೂಪಿಸಲಾಗುತ್ತಿದೆ ಎಂದು ಡಿಕೆಶಿ ಟ್ವೀಟ್​ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಸರ್ಕಾರಿ ಸಂಸ್ಥೆಗಳು ನನ್ನ ವಿರುದ್ಧ ಪ್ರಕರಣ ದಾಖಲಿಸ್ತಿವೆ. ನನ್ನನ್ನು ಹೆದರಿಸುವುದು ಅಷ್ಟು ಸುಲಭವಲ್ಲ. ಬಿಜೆಪಿಯ 40% ಕಮಿಷನ್ ಸರ್ಕಾರದಿಂದ ಜನರು ಬೇಸತ್ತಿದ್ದಾರೆ. ಈ ರಾಜಕೀಯ ಸೇಡಿಗೆ ಸರಿಯಾದ ಉತ್ತರ ಸಿಗಲಿದೆ ಎಂದು ಡಿಕೆ ಶಿವಕುಮಾರ್ ಟ್ವಿಟರ್​ನಲ್ಲಿ ಗುಡುಗಿದ್ದಾರೆ.

ಚಾರ್ಜ್ ಶೀಟ್ ಜತೆಗೆ ಟ್ರಂಕ್‌ನಲ್ಲಿ ಕೋರ್ಟ್‌ಗೆ ಡಿಕೆಶಿಯ ಆಸ್ತಿ ಲೆಕ್ಕ ಕೊಟ್ಟ ಇಡಿ

BJP ಪಕ್ಷಕ್ಕೆ ಸೇರುವಂತೆ ನನ್ನ ಮೇಲೆ ಒತ್ತಡ ಹೇರಲಾಗುತ್ತಿದೆ. ಅದಕ್ಕೆ ಒಪ್ಪದಿದ್ದಕ್ಕೆ ಸಂಚು ರೂಪಿಸಲಾಗಿದೆ. ಸರ್ಕಾರಿ ಸಂಸ್ಥೆಗಳು ನನ್ನ ವಿರುದ್ಧ ಪ್ರಕರಣ ದಾಖಲಿಸುತ್ತಿವೆ. ನನ್ನನ್ನು ಹೆದರಿಸುವುದು ಅಷ್ಟು ಸುಲಭವಲ್ಲ. ಬಿಜೆಪಿಯ 40% ಕಮಿಷನ್ ಸರ್ಕಾರದಿಂದ ನಾಡಿನ ಜನ ಬೇಸತ್ತಿದ್ದಾರೆ. ಈ ರಾಜಕೀಯ ಸೇಡಿಗೆ ಸರಿಯಾದ ಉತ್ತರ ಸಿಗಲಿದೆ ಎಂದು ಟ್ವೀಟ್ ಮಾಡಿದ್ದಾರೆ.

ಚಾರ್ಜ್ ಶೀಟ್ ಸಲ್ಲಿಕೆ
ಕೆಪಿಸಿಸಿ ಅಧ್ಯಕ್ಷ  ಡಿಕೆ ಶಿವಕುಮಾರ್‌ಗೆ ಇಡಿ ಪ್ರಕರಣ ಮತ್ತೆ ಸಂಕಷ್ಟ ತಂದೊಡ್ಡಿದೆ. 2 ವರ್ಷ 4 ತಿಂಗಳ ಬಳಿಕ  ದೆಹಲಿಯ ರೋಸ್ ಅವೆನ್ಯೂ ವಿಶೇಷ ನ್ಯಾಯಾಲಯಕ್ಕೆ  ಜಾರಿ ನಿರ್ದೇಶನಾಲಯ ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದರು.  

50 ರಿಂದ 55 ಪುಟಗಳ ಚಾರ್ಜ್ ಶೀಟ್  ಜೊತೆಗೆ ಒಂದು ಸಣ್ಣ ಟ್ರಂಕ್ ನಲ್ಲಿ ದಾಖಲೆಗಳನ್ನು ಇಡಿ ಅಧಿಕಾರಿಗಳು ಸಲ್ಲಿಸಿದರು. ಈ ಪ್ರಕರಣದಲ್ಲಿ ಡಿಕೆ ಶಿವಕುಮಾರ್ 48 ದಿನ ದೆಹಲಿಯ ತಿಹಾರ್ ಜೈಲಿನಲ್ಲಿ ಬಂಧಿಯಾಗಿದ್ದರು.

ಪ್ರಕರಣದ ಎ1 ಆರೋಪಿ ಡಿಕೆ ಶಿವಕುಮಾರ್ , 
ಎ2 ಸುನೀಲ್ ಶರ್ಮಾ, ಎ3 ಸಚಿನ್ ನಾರಾಯಣ, ಎ4 ಕರ್ನಾಟಕ ಭವನ ಸಿಬ್ಬಂದಿ ಆಂಜನೇಯ ಹನುಮಂತಯ್ಯ ಇವರ ಜೊತೆಗೆ ಹಲವು ಆರೋಪಿಗಳ‌ ಹೆಸರು  ಚಾರ್ಜ್ ಶೀಟ್ ನಲ್ಲಿ ಪ್ರಸ್ತಾಪ ಮಾಡಲಾಗಿದೆ. PMLA ಕಾಯ್ದೆ ಮತ್ತು ಸೆಕ್ಷನ್  120b ಅಡಿ ಆರೋಪ ಹೊರಿಸಲಾಗಿದ್ದು, ಈ ಆರೋಪಗಳ ಮೇಲೆ ಶನಿವಾರ ಬೆಳಿಗ್ಗೆ ಇಡಿ ವಕೀಲರಿಂದ ವಾದ ಮಂಡನೆಯಾಗಲಿದೆ. 

ಇಡಿ ಹೊರಿಸಿದ್ದ ಆರೋಪಗಳು :
ಡಿ.ಕೆ ಶಿವಕುಮಾರ್ 800  ಬೇನಾಮಿ ಆಸ್ತಿ ಮಾಡಿದ್ದಾರೆ‌. ಕುಟುಂಬಸ್ಥರ ಹೆಸರಿನಲ್ಲಿ 200 ಕೋಟಿ ಠೇವಣಿ ಇದೆ.  20ಕ್ಕೂ ಅಧಿಕ ಬ್ಯಾಂಕ್, 317 ಕ್ಕೂ ಹೆಚ್ಚು ಬ್ಯಾಂಕ್ ಅಕೌಂಟ್ ಮೂಲಕ ಅಕ್ರಮ ಹಣ ವರ್ಗಾವಣೆ.‌ ಮಗಳ ಹೆಸರಿನಲ್ಲಿ 108 ಕೋಟಿ ಅಕ್ರಮ ವ್ಯವಹಾರ  ಪುತ್ರಿಗೆ 48 ಕೋಟಿ ಸಾಲ‌ ಇದೆ, ಆದರೆ ಸಾಲದ ಮೂಲ ತಿಳಿಸಿಲ್ಲ. 

ದೆಹಲಿ ನಿವಾಸದ 8.59 ಕೋಟಿ ಹಣಕ್ಕೆ ಲೆಕ್ಕ ಕೊಟ್ಟಿಲ್ಲ . ಡಿ.ಕೆ ಶಿ ಹೆಸರಲ್ಲಿ 24, ಸಂಸದ ಡಿಕೆ ಸುರೇಶ್ ಹೆಸರಲ್ಲಿ 27 , ತಾಯಿ ಹೆಸರಲ್ಲಿ 38 ಆಸ್ತಿಗಳಿವೆ.  ಡಿ.ಕೆ ಕುಟುಂಬದ ಬಳಿ ಒಟ್ಟು 300 ಆಸ್ತಿಗಳಿವೆ.  ಡಿ.ಕೆ ಶಿವಕುಮಾರ್ ವ್ಯವಹಾರದಲ್ಲಿ ಅಕ್ರಮ ಆಸ್ತಿ ಗಳಿಕೆ ಮತ್ತು ಹವಾಲ ದಂದೆ ನಡೆದಿರುವ ಅನುಮಾನಗಳಿವೆ ಅಂಥ ದೆಹಲಿ ಹೈಕೋರ್ಟ್ ನಲ್ಲಿ ಬೇಲ್ ಅರ್ಜಿಯ ಮೇಲೆ ವಾದ- ಪ್ರತಿವಾದ ನಡೆಯುತ್ತಿದ್ದಾಗ ಇ ಡಿ ಡಿಕೆಶಿವಕುಮಾರ್ ಅವರ ಮೇಲೆ ಆರೋಪ ಮಾಡಿತ್ತು.

ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಡಿಕೆ ಶಿವಕುಮಾರ್‌ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ ಚಾರ್ಜ್‌ಶೀಟ್‌ ಸಲ್ಲಿಸಲಾಗಿದೆ. ಡಿಕೆ ಶಿವಕುಮಾರ್‌ ವಿರುದ್ಧ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ ಸಂಬಂಧ ದಾಳಿ ನಡೆಸಲಾಗಿತ್ತು. ಗುಜರಾತ್‌ ರಾಜ್ಯಸಭಾ ಚುನಾವಣೆ ವೇಳೆ, ಅಹ್ಮದ್‌ ಪಟೇಲ್‌ ಗೆಲುವಿನ ಸಲುವಾಗಿ ಗುಜರಾತ್‌ ಕಾಂಗ್ರೆಸ್‌ ಶಾಸಕರನ್ನು ಡಿಕೆಶಿ ಕಸ್ಟಡಿಯಲ್ಲಿಟ್ಟ ಸಂದರ್ಭದ ವೇಳೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದರು. ಇದು ರಾಜಕೀಯ ಪ್ರೇರಿತ ದಾಳಿ ಎಂದು ಕಾಂಗ್ರೆಸ್‌ ಗಂಭೀರ ಆರೋಪ ಮಾಡಿತ್ತು. ಆದರೆ ದೆಹಲಿಯ ಡಿಕೆಶಿ ನಿವಾಸದಲ್ಲಿ ನಗದು ಲಭ್ಯವಾಗಿತ್ತು. ಈ ಸಂಬಂಧ ಡಿಕೆಶಿ ಅವರನ್ನು ಬಂಧಿಸಲಾಗಿತ್ತು. ಇದೀಗ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿದ್ದು, ಚುನಾವಣೆ ಸಮೀಪವಾಗುತ್ತಿರುವ ಸಂದರ್ಭದಲ್ಲಿ ಶಿವಕುಮಾರ್‌ಗೆ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ. 

Latest Videos
Follow Us:
Download App:
  • android
  • ios