ಗಡಿ ಭಾಗದ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು: ಶಾಸಕ ಪುಟ್ಟರಂಗಶೆಟ್ಟಿ

ತಾಲೂಕಿನ ಗಡಿ ಅಂಚಿನಲ್ಲಿರುವ ಬಿಸಲವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವುದಾಗಿ ಶಾಸಕ ಸಿ.ಪುಟ್ಟರಂಗಶೆಟ್ಟಿ ತಿಳಿಸಿದರು. 

Greater emphasis on development of border villages Says MLA C Puttarangashetty gvd

ಚಾಮರಾಜನಗರ (ಜೂ.05): ತಾಲೂಕಿನ ಗಡಿ ಅಂಚಿನಲ್ಲಿರುವ ಬಿಸಲವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವುದಾಗಿ ಶಾಸಕ ಸಿ.ಪುಟ್ಟರಂಗಶೆಟ್ಟಿ ತಿಳಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಬಿಸಲವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಖಂಡರು ಹಾಗೂ ಗ್ರಾ.ಪಂ., ಸಹಕಾರ ಸಂಘಗಳ ಪ್ರತಿನಿಧಿಗಳು ನೂತನ ಶಾಸಕರನ್ನು ಭೇಟಿಯಾಗಿ ಅಭಿನಂದಿಸಿದ ಸಂದರ್ಭದಲ್ಲಿ ಗ್ರಾಮಸ್ಥರ ಮನವಿಯನ್ನು ಆಲಿಸಿ ಅವರು ಮಾತನಾಡಿದರು.

ಬಿಸಲವಾಡಿ ಗ್ರಾಮ ಪಂಚಾಯಿತಿ ತಮಿಳುನಾಡು ಗಡಿ ಭಾಗದಲ್ಲಿದೆ. ಈ ಭಾಗದಲ್ಲಿ ಸಾಕಷ್ಟು ಸಮಸ್ಯೆಗಳಿದ್ದು, ಪಂಚಾಯಿತಿ ವ್ಯಾಪ್ತಿಗೆ ಬರುವ ಬಂದಿಗೌಡನಹಳ್ಳಿ, ಕೋಡಿ ಉಗನೆ, ಬೇವಿನತಾಳಪುರ, ಬಿ.ಜೆ.ಕಾಲೋನಿಗಳು ಸೇರ್ಪಡಯಾಗಿದ್ದು, ಎಲ್ಲಾ ಗ್ರಾಮಗಳ ರಸ್ತೆ, ಕುಡಿಯುವ ನೀರು, ಚರಂಡಿ ಸೌಲಭ್ಯ ಸೇರಿದಂತೆ ಕೃಷಿ ಚಟುವಟಿಕೆಗಳನ್ನು ರೈತರು ಕೈಗೊಳ್ಳಲು ಅನುಕೂಲವಾಗುವಂತೆ ಸಕಾಲದಲ್ಲಿ ರೈತರಿಗೆ ಸಾಲ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಸರ್ಕಾರದಿಂದ ವಿಶೇಷ ಯೋಜನೆಯನ್ನು ರೂಪಿಸಿ ಹೆಚ್ಚಿನ ಅನುದಾನವನ್ನು ಕೊಡಿಸುವ ಜವಾಬ್ದಾರಿಯಿದೆ.

Ramanagara: ಕಾಡಂಚಿನ ಗ್ರಾಮ​ಗ​ಳಲ್ಲಿ ಕಲ್ಲಿನ ತಡೆ​ಗೋಡೆಗೆ ಚಿಂತನೆ: ಸಚಿವ ಈಶ್ವರ ಖಂಡ್ರೆ

ಎಪಿಎಂಸಿ ಮಾಜಿ ಅಧ್ಯಕ್ಷ ಬಿ.ಕೆ.ರವಿಕುಮಾರ್‌ ಮಾತನಾಡಿ, ಬಿಸಲವಾಡಿ ಗ್ರಾಮ ಪಂಚಾಯಿತಿ ತಮ್ಮ ಗೆಲುವಿಗೆ ಸಂಪೂರ್ಣ ಬೆಂಬಲವನ್ನು ನೀಡುವ ಜತೆಗೆ ಹೆಚ್ಚಿನ ಮತಗಳನ್ನು ನೀಡಿ, ಬಹುಮತ ಬರುವಂತೆ ಮಾಡಿದ್ದಾರೆ. ಈಗಾಗಲೇ ಗ್ರಾಮದ ಮುಖಂಡರ ಕೋರಿಕೆಯಂತೆ ಬಿಸಲವಾಡಿ, ಬಂದಿಗೌಡನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳ ಸಂಪರ್ಕ ರಸ್ತೆಗಳಿಗೆ ವಿಶೇಷ ಅನುದಾನ ಕೊಡಿಸಬೇಕು. ಸಾರಿಗೆ ಸೌಲಭ್ಯ ಸೇರಿದಂತೆ ಈ ಭಾಗದಲ್ಲಿ ವಾಸಿಸುವ ಜನರ ಸಮಸ್ಯೆಗಳನ್ನು ಪರಿಹರಿಸಬೇಕು. ಈ ಎಲ್ಲಾ ಸಮಸ್ಯೆಗಳಿಗೆ ತಾವು ಅದ್ಯತೆ ಮೇರೆಗೆ ಅನುದಾನವನ್ನು ನೀಡಿ ಮಾದರಿ ಗ್ರಾಮ ಪಂಚಾಯಿತಿಯನ್ನಾಗಿ ಮಾಡಬೇಕು ಎಂದು ಮನವಿ ಮಾಡಿಕೊಂಡರು.

ಈ ಸಂದರ್ಭದಲ್ಲಿ ಬಿಸಲವಾಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸಿ.ಮಹದೇವಪ್ಪ, ಡೇರಿ ಅಧ್ಯಕ್ಷ ಶಿವಬಸಪ್ಪ, ಪಿಎಸಿಸಿ ಬ್ಯಾಂಕ್‌ ಅಧ್ಯಕ್ಷ ಸಿದ್ದನಾಯಕ, ಎಪಿಎಂಸಿ ಮಾಜಿ ಉಪಾಧ್ಯಕ್ಷ ಕೋಡಿಉಗನೆ ಪುರುಷೋತ್ತಮ್‌, ಗ್ರಾ.ಪಂ. ಮಾಜಿ ಅಧ್ಯಕ್ಷ ಗಿರೀಶ್‌, ಎನ್‌.ಪ್ರಭುಸ್ವಾಮಿ, ಮಹದೇವಣ್ಣ, ಸದಸ್ಯ ನಾರಾಯಣನಾಯಕ, ಮುಖಂಡ ಗುರುಸ್ವಾಮಿ, ನಾಗರಾಜು, ಚನ್ನಬಸಪ್ಪ, ಗುರುಶಾಂತಪ್ಪ, ರಾಜು, ಶಿವಕುಮಾರ್‌, ಪರಶಿವಪ್ಪ, ಶ್ರೀಕಾಂತ್‌, ರಘು, ನಾಗರಾಜು ಮೊದಲಾದವರು ಇದ್ದರು.

ಹಳ್ಳಿಗಳ ಅಭಿವೃದ್ಧಿ ಕಡೆಗೂ ಗಮನ: ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಹಳ್ಳಿಗಳ ಸಮಗ್ರ ಅಭಿವೃದ್ಧಿಗೆ ಒತ್ತು ನೀಡುವುದಾಗಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು. ಕ್ಷೇತ್ರದ ಅಟ್ಟುಗುಳೀಪುರ ಗ್ರಾಮಕ್ಕೆ ಭೇಟಿ ನೀಡಿದ ಅವರು ಗ್ರಾಮಸ್ಥರಿಂದ ಸನ್ಮಾನಿಸಿ ಸ್ವೀಕರಿಸಿ ಮಾತನಾಡಿದರು. ಕಳೆದ 5 ವರ್ಷದ ಅವಧಿಯಲ್ಲಿ ಬಿಜೆಪಿ ಸರ್ಕಾರ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನೀಡದ ಕಾರಣದಿಂದ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿದೆ. 

ಇಂದಿನಿಂದಲೇ ಲೋಕಸಭಾ ಚುನಾವಣೆಗೆ ತಯಾರಿ ಆರಂಭಿಸಿದ್ದೇವೆ: ಮಾಜಿ ಸಿಎಂ ಬೊಮ್ಮಾಯಿ

ಈ ಬಾರಿ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಪಕ್ಷ ಅಧಿಕಾರದಲ್ಲಿದ್ದು, ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಕ್ಷೇತ್ರ ಸೇರಿದಂತೆ ಹಳ್ಳಿಗಳ ಸಮಗ್ರ ಅಭಿವೃದ್ಧಿ ಪಡಿಸಲಾಗುವುದು ಎಂದರು. ಗ್ರಾಮಸ್ಥರ ಮನವಿ ಮೇರೆಗೆ ಅಟ್ಟುಗುಳೀಪುರ ಗ್ರಾಮದ ಚನ್ನಂಜೇಶ್ವರ ದೇವಸ್ಥಾನ ರಸ್ತೆ, ಬಸವ ಭವನದ ಮುಂದುವರೆದ ಕಾಮಗಾರಿ, ಬಾಕಿ ಉಳಿದಿರುವ ಸಿಮೆಂಟ್‌ ರಸ್ತೆಗಳನ್ನು ಪೂರ್ಣಗೊಳಿಸಲಾಗುವುದು. ಕುಂಬೇಶ್ವರ ದೇವಸ್ಥಾನದ ಸುತ್ತುಗೋಡೆ ನಿರ್ಮಾಣ ಮಾಡಲಾಗುವುದು ಎಂದು ಭರವಸೆ ನೀಡಿದರು.

Latest Videos
Follow Us:
Download App:
  • android
  • ios