
ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
ಗೃಹಲಕ್ಷ್ಮಿ ಯೋಜನೆಯಲ್ಲಿ ಅನರ್ಹ ಫಲಾನುಭವಿಗಳನ್ನು ಹೊರಗಿಡಲು ರಾಜ್ಯ ಸರ್ಕಾರ ಬೃಹತ್ ಪರಿಶೀಲನೆ ಆರಂಭಿಸಿದ್ದು, ಅರ್ಹ ಮಹಿಳೆಯರಿಗೆ ಮಾತ್ರ ₹2000 ನೆರವು ತಲುಪುವಂತೆ ಕ್ರಮ ಕೈಗೊಂಡಿದೆ.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಲ್ಲಿ ಅನರ್ಹ ಫಲಾನುಭವಿಗಳನ್ನು ಪತ್ತೆಹಚ್ಚಲು ಬೃಹತ್ ಪರಿಶೀಲನಾ ಕಾರ್ಯಾಚರಣೆ ಆರಂಭವಾಗಿದೆ. ಸತ್ತವರ ಹೆಸರು, ತೆರಿಗೆ ಪಾವತಿದಾರರು ಹಾಗೂ ಇತರೆ ಅನರ್ಹರ ಹೆಸರಲ್ಲಿ ಸಾವಿರಾರು ಕೋಟಿ ರೂಪಾಯಿ ಸೋರಿಕೆಯಾಗಿರುವ ಶಂಕೆ ವ್ಯಕ್ತವಾಗಿದೆ. ಸುಮಾರು 4 ಲಕ್ಷಕ್ಕೂ ಹೆಚ್ಚು ಅನರ್ಹ ಖಾತೆಗಳನ್ನು ಗುರುತಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಸರ್ಕಾರಕ್ಕೆ ನೂರಾರು ಕೋಟಿ ರೂಪಾಯಿ ಉಳಿತಾಯವಾಗುವ ನಿರೀಕ್ಷೆಯಿದೆ. ಆದರೆ ಯೋಜನೆಯನ್ನು ಸ್ಥಗಿತಗೊಳಿಸುವ ಉದ್ದೇಶ ಇಲ್ಲ, ಅರ್ಹ ಮಹಿಳೆಯರಿಗೆ ಮಾತ್ರ ₹2000 ನೆರವು ತಲುಪುವಂತೆ ಪರಿಷ್ಕರಣೆ ಮಾಡಲಾಗುತ್ತಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.