ಗಾಂಧಿನಗರ, (ಡಿ.01): ಗುಜರಾತ್‍ನ ಬಿಜೆಪಿ ರಾಜ್ಯಸಭಾ ಸದಸ್ಯ ಅಭಯ್ ಭಾರದ್ವಾಜ್ ಅವರು ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ಭಾರದ್ವಾಜ್ ಅವರಿಗೆ ಕೊರೋನಾ ಸೋಂಕು ತಗುಲಿರುವುದು ಪತ್ತೆಯಾಗುತ್ತಿದ್ದಂತೆ ರಾಜ್‍ಕೋಟ್‍ನ ಆಸ್ಪತ್ರೆಯ ಐಸಿಯುನಲ್ಲಿ 1 ತಿಂಗಳ ಕಾಲ ಚಿಕಿತ್ಸೆ ನೀಡಲಾಗುತ್ತಿತ್ತು. ಆರೋಗ್ಯದಲ್ಲಿ ಚೇತರಿಕೆ ಕಾಣದ ಹಿನ್ನೆಲೆ 2 ತಿಂಗಳ ಹಿಂದೆ ಚೆನ್ನೈನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು (ಮಂಗಳವಾರ) ಕೊನೆಯುಸಿರೆಳೆದಿದ್ದಾರೆ.

ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಬಿಜೆಪಿ MLA ನಿಧನ

ಈ ಮೂಲಕ ಗುಜರಾತ್ ಇಬ್ಬರು ರಾಜ್ಯಸಭಾ ಸದಸ್ಯರನ್ನು ಕಳೆದುಕೊಂಡಂತಾಗಿದೆ. ನವೆಂಬರ್ 26ರಂದು ರಾಜ್ಯಸಭಾ ಸದಸ್ಯ, ಕಾಂಗ್ರೆಸ್‍ನ ಹಿರಿಯ ನಾಯಕ ಅಹ್ಮದ್ ಪಟೇಲ್ ಅವರು ಕೊನೆಯುಸಿರೆಳೆದಿದ್ದರು.

ಭಾರದ್ವಾಜ್ ಅವರು ರಾಜ್‍ಕೋಟ್‍ನ ಬಿಜೆಪಿ ಹಿರಿಯ ನಾಯಕರಾಗಿದ್ದು, ವೃತ್ತಿಯಲ್ಲಿ ವಕೀಲರಾಗಿದ್ದರು. ಜುಲೈನಲ್ಲಿ ರಾಜ್ಯಸಭೆಗೆ ಆಯ್ಕೆಯಾಗಿದ್ದರು.