ಅಹಮದಾಬಾದ್, (ಅ.29)​: ಗುಜರಾತಿನ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ಮುಖಂಡ ಕೇಶುಭಾಯ್​ ಪಟೇಲ್​ (92) ಅವರು ಗುರುವಾರ ಕೊನೆಯುಸಿರೆಳೆದಿದ್ದಾರೆ. 

ಉಸಿರಾಡಲು ತೊಂದರೆಯಾಗುತ್ತಿದೆ ಎಂದು ಗುರುವಾರ ಬೆಳಗ್ಗೆಯಷ್ಟೇ ಮನೆಯವರ ಬಳಿ ಹೇಳಿಕೊಂಡಿದ್ದರು. ಬಳಿಕ ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲೇ ಇಂದು (ಗುರುವಾರ) ಕೊನೆಯುಸೆರೆಳೆದಿದ್ದಾರೆ. 

ಕೊರೋನಾ ಸೋಂಕಿನಿಂದ ಮತ್ತೋರ್ವ ಬಿಜೆಪಿ ನಾಯಕ ನಿಧನ: ಮೋದಿ ಸಂತಾಪ

ಕೇಶುಭಾಯ್​ ಪಟೇಲ್​ ಅವರಿಗೆ ಸೆಪ್ಟೆಂಬರ್​ನಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿತ್ತ.​ ಆದರೆ, ಯಾವುದೇ ರೋಗ ಲಕ್ಷಣಗಳು ಇರಲಿಲ್ಲ. ಆದರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಚೇತರಿಸಿಕೊಂಡಿದ್ದ ಅವರು ಅಹಮದಾಬಾದ್​ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಕೇಶುಭಾಯ್​ ಪಟೇಲರು ಎರಡು ಅವಧಿಯಲ್ಲಿ ಗುಜರಾತ್ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಇದೀಗ ಕೇಶುಭಾಯ್​ ಪಟೇಲರನ್ನು ಕಳೆದುಕೊಂಡ ಬಿಜೆಪಿಗೆ ದೊಡ್ಡ ನಷ್ಟವಾಗಿದೆ.

 

 

ಮೊನ್ನೇ ಅಷ್ಟೇ ಗುಜರಾತಿ ಖ್ಯಾತ ನಟ ಹಾಗೂ ಬಿಜೆಪಿ ನಾಯಕ ನರೇಶ್‌ ಕನೋಡಿಯಾ(77) ಅವರು ಕೊರೋನಾ ವೈರಸ್‌ನಿಂದ ಸಾವನ್ನಪ್ಪಿದ್ದನ್ನು ಇಲ್ಲಿ ಸ್ಮರಿಸಬಹುದು.