ಶೋಷಿತ ಸಮುದಾಯಕ್ಕೆ ನ್ಯಾಯ ಒದಗಿಸುವ ಭರದಲ್ಲಿ ಇತರ ಸಮುದಾಯಗಳ ಮೇಲೆ ಸವಾರಿ ಮಾಡದ  ರಾಜಕೀಯ ಸೂಕ್ಷ್ಮ ಪ್ರಜ್ಞೆ ಅರಸು ಅವರಲ್ಲಿ ನಾನು ಕಂಡಿದ್ದೇನೆ, ಸಾಮಾಜಿಕ, ಆರ್ಥಿಕ ಸುಧಾರಣೆಗಳ ಹರಿಕಾರ ಅರಸು ಸದಾ ಸ್ಮರಣೀಯರು ಎಂದ ಹೆಚ್‌ಡಿಕೆ| 

ಬೆಂಗಳೂರು(ಆ.20): ಇಂದು ಮಾಜಿ ಮುಖ್ಯಮಂತ್ರಿ ದಿ. ಡಿ. ದೇವರಾಜ ಅರಸು ಅವರ ಜನ್ಮದಿನವಾಗಿದೆ. ಹೀಗಾಗಿ ಈ ಸಂದರ್ಭದಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಸರಣಿ ಟ್ವೀಟ್‌ ಮಾಡುವ ದೇವರಾಜ ಅರಸು ಅವರ ಸೇವಾ ಕಾರ್ಯಗಳನ್ನ ಸ್ಮರಿಸಿಕೊಂಡಿದ್ದಾರೆ.

ಕರ್ನಾಟಕ ನಾಮಕರಣ, ಹಾವನೂರು ಕಮಿಷನ್, ಭೂ ಸುಧಾರಣೆ, ಮಲ ಹೊರುವ ಪದ್ಧತಿ ನಿಷೇಧ, ಜೀತ ಪದ್ಧತಿ ನಿರ್ಮೂಲನೆ ಹಾಗೂ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮದಿನದ ಸಂದರ್ಭದಲ್ಲಿ ವಿನಮ್ರವಾಗಿ ಸ್ಮರಿಸಿಕೊಳ್ಳುತ್ತೇನೆ ಎಂದು ಬರೆದುಕೊಂಡಿದ್ದಾರೆ. 

Scroll to load tweet…

8 ಬಾರಿ ಅರಸು ಕುಟುಂಬದವರ ಆಯ್ಕೆ : 1989ರ ನಂತರ ಗೆಲ್ಲಲಿಲ್ಲ

ತಮಗೆ ದಕ್ಕಿದ ರಾಜಕೀಯ ಪರಮಾಧಿಕಾರವನ್ನು ತಳಸಮುದಾಯದ ಅಭಿವೃದ್ಧಿಗೆ ಕ್ರಾಂತಿಕಾರಿ ನಿರ್ಧಾರ ತೆಗೆದುಕೊಳ್ಳುವ ಮೂಲಕ ರಾಜಕೀಯ ಇಚ್ಛಾಶಕ್ತಿ ಪ್ರದರ್ಶಿಸಿದ ಅರಸು ಅವರ ಕಾರ್ಯ ವೈಖರಿ ಅನುಕರಣೀಯ ಎಂದು ಹೇಳಿದ್ದಾರೆ.

Scroll to load tweet…

ಶೋಷಿತ ಸಮುದಾಯಕ್ಕೆ ನ್ಯಾಯ ಒದಗಿಸುವ ಭರದಲ್ಲಿ ಇತರ ಸಮುದಾಯಗಳ ಮೇಲೆ ಸವಾರಿ ಮಾಡದ ರಾಜಕೀಯ ಸೂಕ್ಷ್ಮ ಪ್ರಜ್ಞೆ ಅರಸು ಅವರಲ್ಲಿ ನಾನು ಕಂಡಿದ್ದೇನೆ. ಸಾಮಾಜಿಕ, ಆರ್ಥಿಕ ಸುಧಾರಣೆಗಳ ಹರಿಕಾರ ಅರಸು ಸದಾ ಸ್ಮರಣೀಯರು ಎಂದು ಹೆಚ್‌ಡಿಕೆ ಡಿ. ದೇವರಾಜ ಅರಸು ಅವರ ಕಾರ್ಯವನ್ನ ಸ್ಮರಿಸಿಕೊಂಡಿದ್ದಾರೆ. 


Scroll to load tweet…