Asianet Suvarna News Asianet Suvarna News

'ಒಂದ್ಕಡೆ ಕೊರೋನಾ ಮತ್ತೊಂದ್ಕಡೆ ಭಾರೀ ಮಳೆ, ಬಿಎಸ್‌ವೈ ಸರ್ಕಾರಕ್ಕೆ ಅಗ್ನಿಪರೀಕ್ಷೆ'

ಅತಿವೃಷ್ಟಿ ಸಂತ್ರಸ್ತರ ಪರಿಹಾರ ಕಾಮಗಾರಿಗಳಿಗೆ ಹಣಕಾಸಿನ ಕೊರತೆಯಾಗಬಾರದು| ಸಕಾಲಿಕ ಎಚ್ಚರಿಕೆಯನ್ನು ಸರ್ಕಾರ ತೆಗೆದುಕೊಳ್ಳದಿದ್ದರೆ ಪರಿಸ್ಥಿತಿ ಬಿಗಡಾಯಿಸುತ್ತದೆ| ಎಚ್ಚರ ತಪ್ಪಿದರೆ ಜನರ ಬದುಕು ಮೂರಾಬಟ್ಟೆ| ಸಚಿವರು ಮತ್ತು ಅಧಿಕಾರಿಗಳು ನೆರೆ ಸಂತ್ರಸ್ತರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು|

H D Kumaraswamy Urge the Government to respond to the people due to the Heavy Rain
Author
Bengaluru, First Published Aug 7, 2020, 12:18 PM IST

ಬೆಂಗಳೂರು(ಆ.07):  ರಾಜ್ಯ ಸರ್ಕಾರಕ್ಕೀಗ ಈಗ ಅಗ್ನಿ ಪರೀಕ್ಷೆ ಎದುರಾಗಿದೆ. ಇದನ್ನು ಎದುರಿಸಲು ಸಮರ್ಥವಾಗಿ ಸರ್ಕಾರ ಸಜ್ಜಾಗಬೇಕಿದೆ. ಮುಂಗಾರು ಮಳೆಗೆ ರಾಜ್ಯದ ಜನರು ನಲುಗಿದ್ದಾರೆ. ಜನತೆ ಮತ್ತು ಜಾನುವಾರುಗಳ ರಕ್ಷಣೆಗೆ ಸರ್ಕಾರ ಸಮರೋಪಾದಿಯಲ್ಲಿ ಸ್ಪಂದಿಸಬೇಕು. ಪರಿಹಾರ ಕಾಮಗಾರಿಗಳನ್ನು ಅನುಷ್ಠಾನ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. 

 

ಈ ಸಂಬಂಧ ಸರಣಿ ಟ್ವೀಟ್‌ ಮಾಡಿರುವ ಹೆಚ್.ಡಿ.ಕುಮಾರಸ್ವಾಮಿ, ಸಚಿವರು ಮತ್ತು ಅಧಿಕಾರಿಗಳು ಮಳೆ ಹಾನಿಗೊಳಗಾದ ಪ್ರದೇಶಗಳಿಗೆ ತೆರಳಿ ಅಲ್ಲಿಯೇ ಮೊಕ್ಕಾಂ ಮಾಡಿ ಪರಿಸ್ಥಿತಿಯ ಉಸ್ತುವಾರಿ ನೋಡಿಕೊಳ್ಳುವ ಮೂಲಕ ನೆರೆ ಸಂತ್ರಸ್ತರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕಿದೆ ಎಂದು ಹೇಳಿದ್ದಾರೆ. 

 

ಅತಿವೃಷ್ಟಿ ಸಂತ್ರಸ್ತರ ಪರಿಹಾರ ಕಾಮಗಾರಿಗಳಿಗೆ ಹಣಕಾಸಿನ ಕೊರತೆಯಾಗದಂತೆ ಸಕಾಲಿಕ ಎಚ್ಚರಿಕೆಯನ್ನು ಸರ್ಕಾರ ತೆಗೆದುಕೊಳ್ಳದಿದ್ದರೆ ಪರಿಸ್ಥಿತಿ ಬಿಗಡಾಯಿಸುತ್ತದೆ. ಒಂದು ಕಡೆ ಕೊರೋನಾ ಸೋಂಕಿನ ಭೀತಿ ಈಗ ನೆರೆಪೀಡಿತ ಪರಿಸ್ಥಿತಿ ಸರ್ಕಾರಕ್ಕೊಂದು ಅಗ್ನಿಪರೀಕ್ಷೆ. ಎಚ್ಚರ ತಪ್ಪಿದರೆ ಜನರ ಬದುಕು ಮೂರಾಬಟ್ಟೆಯಾಗುತ್ತದೆ ಎಂದಿದ್ದಾರೆ. 

ಕೊಡಗಿನಲ್ಲಿ ಅರ್ಚಕರ ಕುಟುಂಬ ಕಣ್ಮರೆ: ಕಾರ್ಯಾಚರಣೆಗೆ ಮಳೆ ಅಡ್ಡಿ

 

ಈ ಬಾರಿಯೂ ರಾಜ್ಯ ಅತಿವೃಷ್ಟಿಯ ಸಂಕಷ್ಟಕ್ಕೆ ಸಿಲುಕಿದೆ. ವಿಶೇಷವಾಗಿ ರೈತರು ಕಂಗಾಲಾಗಿದ್ದಾರೆ.  ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ  ಮುಂಗಾರಿನ ಅಬ್ಬರ ಭೀತಿಯ ವಾತಾವರಣ ಸೃಷ್ಟಿಸಿದೆ. ಜಿಲ್ಲಾವಾರು ವಿಶೇಷ ಕಾರ್ಯಪಡೆ ರಚಿಸುವ ಮೂಲಕ ನೆರೆ ಪರಿಸ್ಥಿತಿಯನ್ನು ನಿಭಾಯಿಸಬೇಕು. ಅತಿವೃಷ್ಟಿ ಸಂತ್ರಸ್ತರಿಗೆ ಕೂಡಲೇ ಆಸರೆ ಕೇಂದ್ರಗಳನ್ನು ಸ್ಥಾಪಿಸಬೇಕು. ಬೆಳೆ ಹಾನಿಗೊಳಗಾದ ರೈತರಿಗೆ ಹಾಗೂ ಮನೆ-ಮಠ ಕಳೆದುಕೊಂಡವರಿಗೆ, ಜೀವ ಹಾನಿಗೊಳಗಾದವರಿಗೆ ತಡಮಾಡದೆ ಸರ್ಕಾರ ಸಹಾಯಹಸ್ತ ಚಾಚಬೇಕು ಎಂದು ಆಗ್ರಹಿಸಿದ್ದಾರೆ.

ಸತತ ನೆರೆಯಿಂದ ಸಂತ್ರಸ್ತರಾಗಿರುವ ಕುಟುಂಬಗಳಿಗೆ ಹೆಚ್ಚಿನ ಪರಿಹಾರ ನೀಡಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ರಾಜ್ಯಕ್ಕೆ ವಿಶೇಷ ಅರ್ಥಿಕ ನೆರವು ನೀಡಬೇಕು. ರಾಜ್ಯ ಸರ್ಕಾರ ಕೂಡ ಈ ಸಂಬಂಧ ಕೇಂದ್ರದ ಮೇಲೆ ಒತ್ತಡ ತರಬೇಕು ಎಂದು ಹೇಳಿದ್ದಾರೆ.
 

Follow Us:
Download App:
  • android
  • ios