ಬೆಂಗಳೂರು, (ಜ.13): ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಅಸಮಾಧಾನಗೊಂಡಿದ್ದ ಎಚ್.ನಾಗೇಶ್ ಅವರಿಗೆ ಸಿಎಂ ಬಿಎಸ್‌ ಯಡಿಯೂರಪ್ಪ ಗುಡ್‌ ನ್ಯೂಸ್ ಕೊಟ್ಟಿದ್ದಾರೆ.

ಹೌದು...ನಾಗೇಶ್ ಅವರನ್ನ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ಡಾ.ಅಂಬೇಡ್ಕರ್ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ನಾಗೇಶ್​ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಿದ್ದಂತೆಯೇ ಸ್ವಕ್ಷೇತ್ರದಲ್ಲೇ ಸಂಭ್ರಮಾಚರಣೆ!

ಅಬಕಾರಿ ಸಚಿವರಾಗಿದ್ದ ನಾಗೇಶ್,  ಸಿಎಂ ಸೂಚನೆಯ ಮೇರೆಗೆ ರಾಜೀನಾಮೆ ನೀಡಿದ್ದರು. ನಾನ್ ಮಾಡಿದ್ದಾದ್ರೂ ಏನು..? ಎಂದು ಸಿಎಂ ಯಡಿಯೂರಪ್ಪ ಅವರ ಮುಂದೆಯೇ ಅಬಕಾರಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಸಂದರ್ಭದಲ್ಲಿ ನಾಗೇಶ್ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದರು. 

ಈ ಹಿನ್ನೆಲೆಯಲ್ಲಿ ನಾಗೇಶ್ ಅವರನ್ನು ಸಮಾಧಾನ ಮಾಡುವ ಸಲುವಾಗಿ ಸಿಎಂ ಯಡಿಯೂರಪ್ಪ ಅವರು, ನಾಗೇಶ್ ಅವರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಿದ್ದಾರೆ.

ಸಿಎಂ ಹೇಳಿದ್ದಕ್ಕೆ ರಾಜೀನಾಮೆ ನೀಡಿದ್ದೇನೆ. ಸಿಎಂ ಯಡಿಯೂರಪ್ಪನವರು ಮುಂದಿನ ದಿನಗಳಲ್ಲಿ ಉನ್ನತ ಹುದ್ದೆ ನೀಡುವುದಾಗಿ ಹೇಳಿದ್ದಾರೆ. ಇದರಿಂದ ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದ್ದರು.