ಲೋಕಸಭೆ ಚುನಾವಣೆಗೆ ಮುನ್ನ  ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಗವರ್ನರ್‌ಗೆ ಸಲ್ಲಿಸಿದ್ದಾರೆ.

ನವದೆಹಲಿ (ಮಾ.12): ಲೋಕಸಭೆ ಚುನಾವಣೆಗೆ ಮುನ್ನ ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಗವರ್ನರ್‌ ಬಂಡಾರು ದತ್ತಾತ್ರೇಯ ಅವರಿಗೆ ಸಲ್ಲಿಸಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕರ್ನಾಲ್​ನಿಂದ ಖಟ್ಟರ್ ಕಣಕ್ಕಿಳಿಯಬಹುದು ಎಂದು ಹೇಳಲಾಗುತ್ತಿದೆ. 

ಹರಿಯಾಣದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಜನನಾಯಕ ಜನತಾ ಪಕ್ಷ (ಜೆಜೆಪಿ) ಯ ಆಡಳಿತ ಸಮ್ಮಿಶ್ರದಲ್ಲಿ ಬಿರುಕು ಕಾಣಿಸಿಕೊಂಡಿದೆ. ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ಒಪ್ಪಂದವನ್ನು ಅಂತಿಮಗೊಳಿಸಲು ಉಭಯ ಪಕ್ಷಗಳು ವಿಫಲವಾದ ಕಾರಣ ಹರಿಯಾಣದಲ್ಲಿ ಬಿಜೆಪಿ ಮತ್ತು ಜೆಜೆಪಿ ನಡುವಿನ ಮೈತ್ರಿ ಮುರಿದು ಬೀಳುವ ಹಂತದಲ್ಲಿದೆ. ಈ ನಡುವೆ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ರಾಜೀನಾಮೆ ನೀಡಿದ್ದು, ಅವರ ಸಂಪುಟದ ಎಲ್ಲಾ ಸಚಿವರು ರಾಜೀನಾಮೆ ಸಲ್ಲಿಸಿದ್ದಾರೆ.

ಸುಮಲತಾ ಪರ ನಾಲ್ವರು ಸ್ಟಾರ್ ನಟರ ಪ್ರಚಾರ: ನಟ, ಪುತ್ರ ಅಭಿಷೇಕ್ ಅಂಬರೀಷ್

ಈ ಬೆಳವಣೆಗೆ ಬೆನ್ನಲ್ಲೇ ಬಿಜೆಪಿಯ ನಯಾಬ್ ಸೈನಿ ಅಥವಾ ಸಂಜಯ್ ಭಾಟಿಯಾ ಅವರು ಸಿಎಂ ಸ್ಥಾನಕ್ಕೇರಬಹುದು ಎನ್ನಲಾಗುತ್ತಿದೆ.ವರದಿ ಪ್ರಕಾರ ಇಂದು ಮದ್ಯಾಹ್ನ ರಾಜ್ಯದಲ್ಲಿ ಹೊಸ ಸಚಿವ ಸಂಪುಟ ರಚನೆಯಾಗಲಿದೆ. ಮಧ್ಯಾಹ್ನ 1 ಗಂಟೆಗೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಇಂದು ಬೆಳಗ್ಗೆ 11.30ಕ್ಕೆ ಬಿಜೆಪಿ ಪಕ್ಷದ ಶಾಸಕರು ಮತ್ತು ಏಳು ಸ್ವತಂತ್ರ ಶಾಸಕರೊಂದಿಗೆ ಸಿಎಂ ಖಟ್ಟರ್ ತುರ್ತು ಸಭೆ ಕರೆದಿದ್ದರು. ಈ ಸಭೆಗೆ ಜೆಜೆಪಿ ಶಾಸಕರು ಬಂದಿರಲಿಲ್ಲ ಎಂದು ತಿಳಿದುಬಂದಿದೆ. ಸ್ವತಂತ್ರ ಶಾಸಕರನ್ನು ಇಟ್ಟುಕೊಂಡು ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಬಹುದು ಎಂದು ಹೇಳಲಾಗುತ್ತಿದೆ. ಹೀಗಾಗಿ ಮುಂದಿನ ರಾಜಕೀಯ ಬೆಳವಣಿಗೆ ಬಗ್ಗೆ ತೀವ್ರ ಕುತೂಹಲ ಹೆಚ್ಚಿದೆ.

90 ಸದಸ್ಯ ಬಲದ ಹರ್ಯಾಣ ವಿಧಾನಸಭೆಯಲ್ಲಿ 41 ಸ್ಥಾನ ಬಿಜೆಪಿ, 30 ಸ್ಥಾನ ಕಾಂಗ್ರೆಸ್ ಮತ್ತು 10 ಸ್ಥಾನ ಜೆಜೆಪಿ. 7 ಮಂದಿ ಸ್ವತಂತ್ರರು, ಭಾರತೀಯ ರಾಷ್ಟ್ರೀಯ ಲೋಕದಳ (ಐಎನ್‌ಎಲ್‌ಡಿ) ಮತ್ತು ಎಚ್‌ಎಲ್‌ಪಿಯಿಂದ ತಲಾ ಒಬ್ಬ ಶಾಸಕರಿದ್ದಾರೆ. ಸರ್ಕಾರ ರಚನೆಗೆ 46 ಸದಸ್ಯ ಬಲ ಇರಬೇಕು. ಬಿಜೆಪಿಗೆ 5 ಸದಸ್ಯ ಬಲದ ಕೊರತೆ ಇದೆ. ಹೀಗಾಗಿ ಸ್ವತಂತ್ರರನ್ನು ಸೆಳೆದುಕೊಳ್ಳಲು ಬಿಜೆಪಿ ಮುಂದಾಗಿದೆ ಎನ್ನಲಾಗಿದೆ.

ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಸೀಟು ಹಂಚಿಕೆ ಒಪ್ಪಂದಕ್ಕೆ ಬರಲು ವಿಫಲವಾದ ನಂತರ ಬಿಜೆಪಿ ಮತ್ತು ಉಪಮುಖ್ಯಮಂತ್ರಿ ದುಷ್ಯಂತ್ ಚೌಟಾಲಾ ನೇತೃತ್ವದ ಜೆಜೆಪಿ ನಡುವಿನ ಸಂಬಂಧ ಹದಗೆಟ್ಟಿದೆ. 2019 ರ ಚುನಾವಣೆಯಲ್ಲಿ ಬಿಜೆಪಿ ರಾಜ್ಯದ ಎಲ್ಲಾ 10 ಲೋಕಸಭಾ ಸ್ಥಾನಗಳನ್ನು ಗೆದ್ದಿತ್ತು. ಮೈತ್ರಿ ಮುರಿದು ಬಿದ್ದಿದೆ ಆದರೆ ಎಂಎಲ್ ಖಟ್ಟರ್ ಸರ್ಕಾರವನ್ನು ಬೆಂಬಲಿಸುವ ಕೆಲವು ಸ್ವತಂತ್ರ ಶಾಸಕರು ಅದರ ಅಸ್ತಿತ್ವವನ್ನು ಖಚಿತಪಡಿಸುತ್ತಾರೆ ಎಂದು ಸ್ವತಂತ್ರ ಶಾಸಕ ನಯನ್ ಪಾಲ್ ರಾವತ್ ಹೇಳಿದ್ದಾರೆ ಎಂದು ವರದಿಯಾಗಿದೆ.

ಬಿಷ್ಣುಪುರದಲ್ಲಿ ವಿಚ್ಚೇದಿತ ಗಂಡ ಹೆಂಡತಿ ಮಧ್ಯೆ ಸ್ಪರ್ಧೆ: ಬಿಜೆಪಿಯಿಂದ ಗಂಡ ಟಿಎಂಸಿಯಿಂದ ಹೆಂಡ್ತಿ ಸ್ಪರ್ಧೆ

ಭಾನುವಾರವಷ್ಟೆ ಹರ್ಯಾಣದ ಹಿಸಾರ್‌ ಕ್ಷೇತ್ರದ ಬಿಜೆಪಿ ಸಂಸದ ಬೃಜೇಶ್‌ ಸಿಂಗ್‌ ಕಾಂಗ್ರೆಸ್‌ಗೆ ಪಕ್ಷಾಂತರ ಮಾಡಿದ್ದರು. ಲೋಕಸಭಾ ಚುನಾವಣೆಯಲ್ಲಿ ತಮ್ಮ ಹಿಸಾರ್‌ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಬಹುದು ಎನ್ನಲಾಗಿದೆ. ಬಲವಾದ ಕಾರಣಗಳ ಹಿನ್ನೆಲೆಯಲ್ಲಿ ನಾನು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ನನಗೆ ಸಂಸದನಾಗಿ ಸೇವೆ ನೀಡಲು ಅವಕಾಶ ನೀಡಿದ ಪಕ್ಷದ ವರಿಷ್ಠರಿಗೆ ಕೃತಜ್ಞತೆ ಅರ್ಪಿಸುತ್ತೇನೆ ಎಂದಿದ್ದರು.