ಕರ್ನಾಟಕವು ಕನ್ನಡಿಗ ಮುಖ್ಯಮಂತ್ರಿಗೆ ಮತ ಹಾಕಿದ್ದರೂ ಹರ್ಯಾಣದ ಸೂಪರ್‌ ಸಿಎಂ ನಮ್ಮನ್ನು ಆಳುತ್ತಿದ್ದಾರೆ ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಬೆಂಗಳೂರು (ಜು.27): ಕರ್ನಾಟಕವು ಕನ್ನಡಿಗ ಮುಖ್ಯಮಂತ್ರಿಗೆ ಮತ ಹಾಕಿದ್ದರೂ ಹರ್ಯಾಣದ ಸೂಪರ್‌ ಸಿಎಂ ನಮ್ಮನ್ನು ಆಳುತ್ತಿದ್ದಾರೆ ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ತಮ್ಮ ‘ಎಕ್ಸ್‌’ ಖಾತೆಯಲ್ಲಿ ‘ಕರ್ನಾಟಕ ಅಸಲಿ ಮುಖ್ಯಮಂತ್ರಿ ನೋಡಲು ಸ್ಕ್ಯಾನ್‌ ಮಾಡಿ’ ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರ ಫೇಸ್‌ಬುಕ್‌ ಖಾತೆಯ ಕ್ಯೂಆರ್‌ ಕೋಡ್‌ ಪೋಸ್ಟ್ ಮಾಡಿದ್ದಾರೆ.

Add Asianetnews Kannada as a Preferred SourcegooglePreferred

ಹರಿಯಾಣದ ಸೂಪರ್ ಸಿಎಂ ನಮ್ಮನ್ನು ಆಳುತ್ತಿದ್ದಾರೆ. ಅವರು ಈಗ ಮಂತ್ರಿಗಳೊಂದಿಗೆ ಮಾತ್ರವಲ್ಲ, ಸರ್ಕಾರದ ಅಧಿಕಾರಿಗಳೊಂದಿಗೂ ಸಭೆ ನಡೆಸುತ್ತಿದ್ದಾರೆ. ನಮ್ಮ ಹೆಮ್ಮೆಯ ಸ್ವಯಂಘೋಷಿತ ಚಾಂಪಿಯನ್ ಸಿದ್ದರಾಮಯ್ಯ ಅವರು ರಾಜ್ಯದ ಆಡಳಿತವನ್ನು ಸದ್ದಿಲ್ಲದೆ ಹೊರಗುತ್ತಿಗೆ ನೀಡಿದ್ದಾರೆ. ನಮ್ಮ ಹೆಮ್ಮೆ ಎಲ್ಲಿದೆ ಎಂದು ಪ್ರಶ್ನಿಸಿರುವ ನಿಖಿಲ್‌, ಕರ್ನಾಟಕದಲ್ಲಿ ಸುರ್ಜೇವಾಲಾ ಸರ್ಕಾರ ಅಧಿಕಾರ ನಡೆಸುತ್ತಿದೆ ಎಂದು ಟೀಕಿಸಿದ್ದಾರೆ.

Scroll to load tweet…

ಬಿಜೆಪಿ ಜತೆ ಮೈತ್ರಿ ಮುಂದುವರಿಕೆ: ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ನಡುವಿನ ಮೈತ್ರಿ ಹೀಗೆಯೇ ಮುಂದುವರಿಯಲಿದೆ. ಈ ಮೈತ್ರಿ ಮುಂದುವರಿಸಲು ದೇವೇಗೌಡರು, ಕುಮಾರಸ್ವಾಮಿ ಆಸಕ್ತಿ ಹೊಂದಿದ್ದಾರೆ ಎಂದು ಹೇಳಿದರು. 2018ರ ವಿಧಾನಸಭೆ ಚುನಾವಣೆಯಲ್ಲಿ ಬಾದಾಮಿ ಮತಕ್ಷೇತ್ರ ಸಿದ್ದರಾಮಯ್ಯ ಸ್ಪರ್ಧೆಯ ಕಾರಣ ಇಡೀ ರಾಜ್ಯದ ಗಮನ ಸೆಳೆದಿತ್ತು. ಚಾಮುಂಡಿಯಲ್ಲಿ ಜನ ಅವರ ಪರ ಇಲ್ಲ ಎಂಬುದು ಗೊತ್ತಾಗಿ ಬಾದಾಮಿ ಕ್ಷೇತ್ರ ಆಯ್ಕೆ ಮಾಡಿಕೊಂಡಿದ್ದರು. ಇಲ್ಲಿಯೂ ಅವರು ಗೆದ್ದಿದ್ದು ದೊಡ್ಡ ಅಂತರದಿಂದಲ್ಲ.

ಇಬ್ಬರು ಬಲಿಷ್ಠರ ಪೈಪೋಟಿಯ ಮಧ್ಯೆ ಶ್ರೀರಾಮುಲು ಅಲ್ಪಮತಗಳ ಅಂತರದಲ್ಲಿ ಸೋಲನ್ನು ಅಭವಿಸಿದರು. ಸಿದ್ದರಾಮಯ್ಯ ನಿಮ್ಮೆಲ್ಲರ ಆಶೀರ್ವಾದದಿಂದ ಗೆದ್ದರು. ಆದರೆ, ಜನರ ನಿರೀಕ್ಷೆಯಂತೆ ಕೆಲಸ ಮಾಡಲಿಲ್ಲ. ಪುನರ್ಜನ್ಮ ನೀಡಿದ ಕ್ಷೇತ್ರಕ್ಕೆ ಏನೂ ಮಾಡಲಿಲ್ಲ ಎಂದು ಆರೋಪಿಸಿದರು. ರಾಜ್ಯದಲ್ಲಿ ಶಾಸಕರು ಅನುದಾನ ಪಡೆಯಲು ಸಿಎಂ ಅವರನ್ನು ಭೇಟಿ ಮಾಡುವ ಬದಲು ಸುರ್ಜೇವಾಲಾ ಅವರನ್ನು ಭೇಟಿ ಮಾಡ್ತೀವಿ ಅಂತಿದ್ದಾರೆ. ಅಂದರೆ, ಸರ್ಕಾರ ಯಾವ ರೀತಿ ನಡೆಯುತ್ತಿದೆ ಎಂಬುದಕ್ಕೆ ಇದು ಸಣ್ಣ ಉದಾಹರಣೆ. ಸಿದ್ದರಾಮಯ್ಯ ಸಾಂವಿಧಾನಿಕ ಹುದ್ದೆ ಅಲಂಕರಿಸಿ ಕುಳಿತಿದ್ದರೂ, ಸೂಪರ್ ಸಿಎಂ ಸುರ್ಜೇವಾಲಾ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ದೂರಿದರು.

ಬಳಿಕ ಸುದ್ದಿಗಾರರ ಜೊತೆ ಅವರು ಮಾತನಾಡಿದರು, ಸಿಎಂ ಬದಲಾವಣೆ ಕುರಿತು ಪ್ರತಿಕ್ರಿಯಿಸಿ, ಸಿಎಂ ಸ್ಥಾನದಿಂದ ಯಾರು ಕೆಳಗಿಳಿಯುತ್ತಾರೆ?, ಯಾರು ಕೆಳಗಿಳಿಸುತ್ತಾರೆ?, ಕೆಪಿಸಿಸಿ ಅಧ್ಯಕ್ಷರ ಕುರ್ಚಿ ಮೇಲೆ ಯಾರು ಕಣ್ಣಿಟ್ಟಿದ್ದಾರೆ? ಎಂಬುದೆಲ್ಲಾ ನಮಗೆ ಬೇಕಿಲ್ಲದ ವಿಚಾರ. ಮಾತೆತ್ತಿದರೆ ಗ್ಯಾರಂಟಿ ಅಂತಾರೆ. ಆದರೆ, ಇದುವರೆಗೂ ಗ್ಯಾರಂಟಿಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಿಲ್ಲ ಎಂದು ಆರೋಪಿಸಿದರು.ಡಿಕೆಶಿ ಸಿಎಂ ಆಗಬೇಕು ಎಂಬುದಾಗಿ ಕೆಲ ಸ್ವಾಮೀಜಿಗಳು ಡಿಕೆಶಿ ಪರ ಬ್ಯಾಟಿಂಗ್‌ ಮಾಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಧಾರ್ಮಿಕ ಗುರುಗಳು ಒಂದಷ್ಟು ಸಂದರ್ಭದಲ್ಲಿ, ತಮ್ಮ ಸಮುದಾಯದ ನಾಯಕರಿಗೆ ಅವಕಾಶ ಸಿಗಲಿ ಎನ್ನುವ ಉದ್ದೇಶಕ್ಕೆ ಭಾವನೆ ವ್ಯಕ್ತಪಡಿಸಿದ್ದರಲ್ಲಿ ತಪ್ಪೇನಿಲ್ಲ ಎಂದು ಹೇಳಿದರು.

ನವೆಂಬರ್‌ನಲ್ಲಿ ಸರ್ಕಾರ ಪತನವಾಗಲಿದೆ ಎಂಬ ಬಿಜೆಪಿ ನಾಯಕರ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ನಾನು ಅದರ ಬಗ್ಗೆ ಹೆಚ್ಚು ಮಾತನಾಡಲ್ಲ. ಏಕೆಂದರೆ ಸರ್ಕಾರಕ್ಕೆ ರಾಜ್ಯದ ಜನತೆ ಸಂಪೂರ್ಣ ಬಹುಮತದ ಆಶೀರ್ವಾದ ಮಾಡಿದ್ದಾರೆ. ವಾಮಮಾರ್ಗ ಮೂಲಕ ಸರ್ಕಾರ ರಚನೆಯ ಪ್ರಶ್ನೆಯೇ ಇಲ್ಲ. ನಾವು ವಿಪಕ್ಷದ ಸ್ಥಾನದಲ್ಲಿ ಕುಳಿತಿದ್ದೇವೆ, ಇನ್ನೂ ಮೂರು ವರ್ಷ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.