ಹ್ಯಾಟ್ರಿಕ್‌ ಹೀರೋ ಶಿವಣ್ಣ ಪತ್ನಿ ಗೀತಾ ಶಿವರಾಜ್‌ ಕುಮಾರ್‌ ಕಾಂಗ್ರೆಸ್‌ ಸೇರ್ಪಡೆ!

ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಅವರ ಪತ್ನಿ ಗೀತಾ ಶಿವರಾಜ್‌ ಕುಮಾರ್‌ ಅವರು ಇಂದು ಬೆಂಗಳೂರಿನಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಲು ಮುಂದಾಗಿದ್ದಾರೆ.

Hat trick hero Sivanna wife Geeta Shivraj Kumar joins Congress sat

ಬೆಂಗಳೂರು (ಏ.27): ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಅವರ ಪತ್ನಿ ಗೀತಾ ಶಿವರಾಜ್‌ ಕುಮಾರ್‌ ಅವರು ಇಂದು ಬೆಂಗಳೂರಿನಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಲು ಮುಂದಾಗಿದ್ದಾರೆ. ಈ ಹಿಂದೆ ಜೆಡಿಎಸ್ ಪಕ್ಷದಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ಸೋತಿದ್ದ ಗೀತಾ ಅವರು ತಮ್ಮ ಸಹೋದರ ಮಧು ಬಂಗಾರಪ್ಪ ಅವರ ಬೆನ್ನಲ್ಲೇ ಕಾಂಗ್ರೆಸ್‌ಗೆ ಸೇರ್ಪಡೆ ಆಗುತ್ತಿದ್ದಾರೆ. 

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷಾಂತರ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಈಗ ರಾಜ್ಯದಲ್ಲಿ ಮತದಾನ ದಿನಕ್ಕೆ ಇನ್ನು 13 ದಿನಗಳು ಮಾತ್ರ ಬಾಕಿ ಇರುವ ಸಂದರ್ಭದಲ್ಲಿ ಗೀತಾ ಶಿವರಾಜ್‌ ಕುಮಾರ್‌ ಕಾಂಗ್ರೆಸ್‌ಗೆ ಸೇರ್ಪಡೆ ಆಗಿದ್ದಾರೆ. ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಪುತ್ರಿಯಾಗಿರುವ ಗೀತಾ ಶಿವರಾಜ್‌ ಕುಮಾರ್‌ ಅವರು 2014ರಲ್ಲಿ ಶಿವಮೊಗ್ಗ ಲೋಕಸಭೆಯಿಂದ ಸ್ಪರ್ಧೆ ಮಾಡಿದ್ದರು. ಆದರೆ, ಈ ವೇಳೆ ಸೋಲು ಉಂಟಾಗಿತ್ತು. ನಂತರ ರಾಜಕಾರಣದಿಂದ ಸುಮಾರು 9 ವರ್ಷಗಳ ಕಾಲ ದೂರ ಉಳಿದಿದ್ದ ಗೀತಾ, ಈಗ ಕಾಂಗ್ರೆಸ್‌ಗೆ ಸೇರ್ಪಡೆ ಆಗುತ್ತಿರುವುದು ಕುತೂಹಲ ಮೂಡಿಸಿದೆ.

Karnataka Election: ಶಿವಮೊಗ್ಗ ಸಮಾವೇಶದಲ್ಲಿ ತಮಿಳು ನಾಡಗೀತೆ ಪ್ರಸಾರ!

ನಾಳೆ‌ ಕಾಂಗ್ರೆಸ್ ಸೇರ್ಪಡೆಯಾಗಲಿರುವ ಗೀತಾ ಶಿವರಾಜ್ ಕುಮಾರ್: ನಾಳೆ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಈಗಾಗಲೇ ಮಧು ಬಂಗಾರಪ್ಪ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಪ್ರಸ್ತುತ 2023ರ ವಿಧಾನಸಭಾ ಚುನಾವಣೆಯಲ್ಲಿ ಸೊರಬ ವಿಧಾನಸಭೆಯಿಂದ ಗೀತಾ ಶಿವರಾಜ್‌ ಕುಮಾರ್‌ ಅವರ ಸಹೋದರ ಮಧು ಬಂಗಾರಪ್ಪ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ಆದರೆ, ಇವರ ಇನ್ನೊಬ್ಬ ಸಹೋದರ ಸಿನಿಮಾ ನಟ ಕುಮಾರ್‌ ಬಂಗಾರಪ್ಪ ಅವರು ಬಿಜೆಪಿಯಿಂದ ಸೊರಬ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಸೊರಬ ಕ್ಷೇತ್ರದಲ್ಲಿನ ಸಹೋದರರ ಸವಾಲ್‌ಗೆ ಮಧು ಬಂಗಾರಪ್ಪಗೆ ಸಹೋದರಿ ಗೀತಾ ಶಿವರಾಜ್‌ ಕುಮಾರ್‌ ಬೆಂಬಲ ಸೂಚಿಸಿದ್ದು, ಅವರ ಪರವಾಗಿ ಪ್ರಚಾರ ಮಾಡುವುದಕ್ಕೂ ಹೋಗಲಿದ್ದಾರೆ.

ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಿದ ಪ್ರಭಾಕರರೆಡ್ಡಿ: ಕನಕಪುರ,ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಹೊಸ ಬದಲಾವಣೆ ಆಗ್ತಾ ಇದ್ದೇವೆ. ಪಿಜಿಆರ್ ಸಿಂಧ್ಯಾ ಅವರು ಬಸವಕಲ್ಯಾಣದಲ್ಲಿ ಕಾಂಗ್ರೆಸ್ ಸೇರಿದ್ದಾರೆ. ಕನಕಪುರದಲ್ಲಿ ನಾರಯನಗೌಡ ಚುನಾವಣೆಯಲ್ಲಿ ನನ್ನ ವಿರುದ್ಧ ಸ್ಫರ್ಧೆ ಮಾಡಿದ್ದರು.ಸಹಕಾರ ರಂಗದಲ್ಲಿ ಒಳ್ಳೆಯ ಹೆಸರು ಮಾಡಿದ್ದರು. ನನಗೆ ಒಳ್ಳೆಯದಾಗಲಿ ಅಂತ ಕಾಂಗ್ರೆಸ್ ಸೇರುತ್ತಿದ್ದಾರೆ. ಪ್ರಭಾಕರ್ ರೆಡ್ಡಿ ಬಹಳ ಹೋರಾಟ ಮಾಡಿ, ಜೆಡಿಎಸ್‌ ಟಿಕೆಟ್‌ ಪಡೆದಿದ್ದರು. ಆದರೆ, ಕೊನೇ ಕ್ಷಣದಲ್ಲಿ ಟಿಕೆಟ್‌ ತಪ್ಪಿದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಸೇರಿದ್ದಾರೆ. ಬಿಜೆಪಿ ಕಾರ್ಯಕರ್ತರು ಕೂಡ ಕಾಂಗ್ರೆಸ್ ಸೇರುತ್ತಿದ್ದಾರೆ. ಈಗಾಗಲೇ ಮಾಧ್ಯಮ ಸಮೀಕ್ಷೆಯಲ್ಲಿ ಕಾಂಗ್ರೆಸ್‌ ಪರವಾಗಿ ಅಲೆಯಿದೆ. ದಕ್ಷಿಣ ಭಾರತದಲ್ಲಿ ಕಾಂಗ್ರೆಸ್‌ನ ಹೆಬ್ಬಾಗಿಲು ತೆರೆದುಕೊಳ್ಳುತ್ತದೆ. ಯಾರ ಸಹಾಯವನ್ನೂ ಪಡೆದುಕೊಳ್ಳದೆ ಸ್ವತಂತ್ರವಾಗಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶೀವಕುಮಾರ್‌ ಹೇಳಿದ್ದರು. 

Latest Videos
Follow Us:
Download App:
  • android
  • ios