Asianet Suvarna News Asianet Suvarna News

Karnataka election 2023: ಸಮಸ್ಯೆ ಆಗರವಾಗಿದ್ದ ಶಿಗ್ಗಾಂವಿಯಲ್ಲೀಗ ಅಭಿವೃದ್ಧಿಯ ಮಹಾಪೂರ!

 ಸಮಸ್ಯೆಗಳ ಆಗರವಾಗಿದ್ದ ಶಿಗ್ಗಾಂವಿ- ಸವಣೂರು ಕ್ಷೇತ್ರದಲ್ಲಿ ಈಗ ಅಭಿವೃದ್ಧಿಯ ಮಹಾಪೂರವೇ ಹರಿದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

Haveri which was the nest of many problems, is now developing rav
Author
First Published Apr 20, 2023, 11:20 AM IST

ಹಾವೇರಿ (ಶಿಗ್ಗಾಂವಿ) (ಏ.20) : ಸಮಸ್ಯೆಗಳ ಆಗರವಾಗಿದ್ದ ಶಿಗ್ಗಾಂವಿ- ಸವಣೂರು ಕ್ಷೇತ್ರದಲ್ಲಿ ಈಗ ಅಭಿವೃದ್ಧಿಯ ಮಹಾಪೂರವೇ ಹರಿದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬುಧವಾರ ಶಿಗ್ಗಾಂವಿಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆಗೆ ಮುನ್ನ ಸಮಾವೇಶವನ್ನುದ್ದೇಶಿಸಿ ಮುಖ್ಯಮಂತ್ರಿ ಮಾತನಾಡಿದರು.

ಶಿಗ್ಗಾಂವಿ-ಸವಣೂರಿನ ಅಭಿವೃದ್ಧಿ(Shiggavi-savanuru) ನಮ್ಮೆಲ್ಲರ ಕನಸಾಗಿತ್ತು. 2008ರಲ್ಲಿ ನಾನು ಬಂದಾಗ ಒಳ್ಳೆಯ ರಸ್ತೆ ಇರಲಿಲ್ಲ. ರಸ್ತೆಯ ಮಧ್ಯೆ ಹಳ್ಳಗಳಿದ್ದವು. ಕುಡಿಯಲು ನೀರಿರಲಿಲ್ಲ. ಕುಡಿಯುವ ನೀರಿಗಾಗಿ ನಮ್ಮ ತಾಯಂದಿರು ರಸ್ತೆಯಲ್ಲಿ ಕೊಡ ಹಿಡಿದು ಸಾಲು ಹಿಡಿದು ನಿಲ್ಲುತ್ತಿದ್ದರು. ಒಂದು ಒಳ್ಳೆಯ ಸರ್ಕಾರಿ ಕಚೇರಿ ಕಟ್ಟಡ ಇರಲಿಲ್ಲ. ಜನರ ಕಷ್ಟಕ್ಕೆ ಸ್ಪಂದನೆ ಇರಲಿಲ್ಲ. ಕೆರೆಗಳಿಗೆ ನೀರು ಇರಲಿಲ್ಲ. ಇದರ ಮಧ್ಯೆ ಪ್ರಾರಂಭವಾಗಿರುವ ನಮ್ಮ ಅಭಿವೃದ್ಧಿ ಪಯಣ ಇವತ್ತು ಎರಡು ಏತ ನೀರಾವರಿ ಮಾಡಿ 100ಕ್ಕಿಂತ ಹೆಚ್ಚು ಕೆರೆಗಳನ್ನು ತುಂಬಿಸಿರುವ ದಾಖಲೆ ಶಿಗ್ಗಾಂವಿ-ಸವಣೂರಿನಲ್ಲಿ ಆಗಿದೆ ಎಂದರು.

ನನ್ನ ಸಾವಾದರೆ, ಶಿಗ್ಗಾಂವಿಯಲ್ಲೇ ಮಣ್ಣಾಗಬೇಕು: ಸಿಎಂ ಬೊಮ್ಮಾಯಿ

ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಹಳ್ಳಿಯಿಂದ ಹೊಲಗಳಿಗೆ ಹೋಗುವ 2 ಸಾವಿರ ಕಿ.ಮೀ. ಗ್ರಾಮೀಣ ರಸ್ತೆ ನಿರ್ಮಾಣ ಮಾಡಿದ್ದೇವೆ. 15 ವರ್ಷಗಳಲ್ಲಿ ಸುಮಾರು 10 ಸಾವಿರ ಬಡವರಿಗೆ ಮನೆ ನಿರ್ಮಾಣ ಮಾಡಿದ್ದೇವೆ. ಮಳೆಯಿಂದ ಹಾನಿಗೊಳಗಾದ ಜನರಿಗೆ 12 ಸಾವಿರ ಮನೆಗಳನ್ನು ಕಟ್ಟಿರುವ ದಾಖಲೆ ಮಾಡಿದ್ದೇವೆ. ಬಡತನ ಶಾಪವಲ್ಲ. ಹುಟ್ಟುವಾಗ ಬಡತನ ಇರಬಹುದು, ಸಾಯುವವರೆಗೂ ಬಡತನದಲ್ಲಿಯೇ ಇರಬೇಕೆಂದೇನೂ ಇಲ್ಲ. ದುಡಿಮೆಯಿಂದ ಪ್ರಾಮಾಣಿಕವಾಗಿ ಮುಂದೆ ಬರುವ ಅವಕಾಶ ಮಾಡಿಕೊಟ್ಟಿದ್ದೇನೆ. ಜನರು ಸ್ವಾಭಿಮಾನದ ಬದುಕಿನಿಂದ ಬಾಳುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

ಬಿಜೆಪಿ 125 ಸ್ಥಾನ ಗೆಲುವು:

ಜೆ.ಪಿ. ನಡ್ಡಾ(JP Nadda) ನೇತೃತ್ವದಲ್ಲಿ ಪಕ್ಷ ಕರ್ನಾಟಕದಲ್ಲಿ ಅತ್ಯಂತ ಸಂಘಟಿತವಾಗಿದೆ. ಈ ಚುನಾವಣೆಯಲ್ಲಿ ಬಿಜೆಪಿ 125ಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಪಡೆದು, ಮತ್ತೊಮ್ಮೆ ಕನ್ನಡ ನಾಡಿನ ಸೇವೆಯನ್ನು ಮಾಡಲು ಭಾರತೀಯ ಜನತಾ ಪಕ್ಷಕ್ಕೆ ಜನರು ಆಶೀರ್ವಾದ ಮಾಡುತ್ತಾರೆ. ಮುಖ್ಯಮಂತ್ರಿಯಾಗಿ ನಾನು ರೈತರಿಗೆ, ಯುವಕರಿಗೆ, ಮಹಿಳೆಯರಿಗೆ, ಕಾರ್ಮಿಕರಿಗೆ ವಿದ್ಯಾರ್ಥಿಗಳಿಗೆ ಏನೆಲ್ಲ ಕೆಲಸ ಮಾಡಿದ್ದೇನೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ನನ್ನ ಜೀವನದ ಕೊನೆಯ ಉಸಿರು ಇರುವವರೆಗೂ ನಿಮ್ಮ ಸೇವೆ ಮಾಡುತ್ತೇನೆ ಎಂದರು.

ಕ್ಷೇತ್ರದಲ್ಲಿ ಆಯುರ್ವೇದಿಕ್‌ ಆಸ್ಪತ್ರೆ, ಶಿಗ್ಗಾಂವಿ, ಸವಣೂರಿನಲ್ಲಿ 250 ಹಾಸಿಗೆಯ ಆಸ್ಪತ್ರೆ, ಜಿಟಿಟಿಸಿ ಮತ್ತು ಎಂಜಿನಿಯರಿಂಗ್‌ ಕಾಲೇಜು, 10 ಸಾವಿರ ಜನರಿಗೆ ಉದ್ಯೋಗ ಕೊಡುವ ಟೆಕ್ಸ್‌ಟೈಲ್‌ ಪಾರ್ಕ್ ಸೇರಿದಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿ ಮಾಡಿದ್ದೇನೆ. ಬಂಕಾಪುರ ತಾಲೂಕು ಆಗಬೇಕೆಂದು ಜನರ ಬೇಡಿಕೆ ಇದೆ. ನಾನು ಇವತ್ತು ಅದಕ್ಕೆ ಎಲ್ಲ ಅನುಮತಿ ಕೊಟ್ಟು ಆಜ್ಞೆ ಮಾಡಿದ್ದೇನೆ. ಚುನಾವಣೆ ನೀತಿ ಸಂಹಿತೆ ಅದಕ್ಕೆ ಅಡಚಣೆಯಾಗಿದೆ. ಬರುವ ದಿನಗಳಲ್ಲಿ ಬಂಕಾಪುರವನ್ನು ತಾಲೂಕು ಕೇಂದ್ರವನ್ನಾಗಿ ಮಾಡುತ್ತೇನೆ ಎಂದರು.

ಶಿಗ್ಗಾಂವಿಯಲ್ಲಿ ಬೊಮ್ಮಾಯಿ ಶಕ್ತಿ ಪ್ರದರ್ಶನ, ವರುಣಾದಲ್ಲಿ ಸಿದ್ದು ಅದ್ದೂರಿ ಕಾರ್ಯಕ್ರಮ!

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಖ್ಯಾತ ಚಿತ್ರ ನಟ ಕಿಚ್ಚ ಸುದೀಪ, ಹಿರಿಯ ನಾಯಕರಾದ ಗೋವಿಂದ ಕಾರಜೋಳ(Govind Karjol), ಸಿ.ಸಿ. ಪಾಟೀಲ, ಮುರುಗೇಶ ನಿರಾಣಿ(Murugesh nirani), ಬಿ.ಸಿ. ಪಾಟೀಲ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

Follow Us:
Download App:
  • android
  • ios