Asianet Suvarna News Asianet Suvarna News

ದೇವೇಗೌಡರು ಸೊಸೆಯಂದಿಗೆ ಅಕ್ರಮವಾಗಿ 48 ಮುಡಾ ಸೈಟು ಹಂಚಿದ್ದಾರೆ; ಕಾಂಗ್ರೆಸ್‌ನಿಂದ ಆರೋಪ

ಹೆಚ್.ಡಿ. ದೇವೇಗೌಡರ ಆಡಳಿತಾವಧಿಯಲ್ಲಿ ತಮ್ಮ ಸೊಸೆಯಂದಿರಿಗೆ ಅಕ್ರಮವಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ 48 ಸೈಟುಗಳನ್ನು ಹಂಚಿಕೆ ಮಾಡಿದ್ದಾರೆ ಎಂದು ಕಾಂಗ್ರೆಸ್‌ನಿಂದ ಗುರುತರ ಆರೋಪ ಮಾಡಲಾಗಿದೆ.

HD Deve Gowda illegally allotted 48 Muda site to daughter in law Congress allegation sat
Author
First Published Jul 14, 2024, 9:12 PM IST | Last Updated Jul 14, 2024, 9:12 PM IST

ಬೆಂಗಳೂರು/ ಮೈಸೂರು (ಜು.14): ಹೆಚ್.ಡಿ. ದೇವೇಗೌಡರ ಆಡಳಿತಾವಧಿಯಲ್ಲಿ ತಮ್ಮ ಸೊಸೆಯಂದಿರಿಗೆ ಅಕ್ರಮವಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ 48 ಸೈಟುಗಳನ್ನು ಹಂಚಿಕೆ ಮಾಡಿದ್ದಾರೆ ಎಂದು ಕಾಂಗ್ರೆಸ್‌ನಿಂದ ಗುರುತರ ಆರೋಪ ಮಾಡಲಾಗಿದೆ.

ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರ ಮೇಲೆ ಮುಡಾದಿಂದ ಅಕ್ರಮವಾಗಿ ಸೈಟು ಹಂಚಿಕೆ ಮಾಡಿಸಿಕೊಂಡಿದ್ದಾರೆಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಕಾಂಗ್ರೆಸ್ ಸರ್ಕಾರ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದಾರೆ. ಇದರ ಬೆನ್ನಲ್ಲಿಯೇ ಕಾಂಗ್ರೆಸ್‌ ನಾಯಕರು ವಿಧಾನ ಪರಿಷತ್ತಿನಲ್ಲಿ 2011ರ ಮಾ.17ರಂದು ಸದನದಲ್ಲಿ ನಡೆದ ಚರ್ಚೆಯ ಸಾರಾಂಶವನ್ನು ಸರ್ಕಾರದ ಮುಂದೆ ಇಟ್ಟಿದ್ದಾರೆ. ಇಲ್ಲಿ ಯಡಿಯೂರಪ್ಪ ಅವರು ಹೆಚ್.ಡಿ. ದೇವೇಗೌಡರ ಆಡಳಿತದಲ್ಲಿ ತಮ್ಮ ಸೊಸೆಯಂದಿರಿಗೆ 48 ಸೈಟುಗಳನ್ನು ಹಂಚಿಕೆ ಮಾಡಿದ್ದಾರೆ ಎಂಬ ಆರೋಪದ ಬಗ್ಗೆ ಮಾತನಾಡಿದ ಮಾಹಿತಿಯ ಪತ್ರವನ್ನು ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದಾರೆ.

ಮಂಗಳೂರು ಬಸ್ಸಲ್ಲಿ ಅಪ್ರಾಪ್ತ ಹುಡುಗಿಗೆ ಕಿರುಕುಳ ಕೊಟ್ಟ ಮುಸ್ಲಿಂ ಮೌಲ್ವಿ; ಮನಸೋ ಇಚ್ಛೆ ಥಳಿಸಿದ ಪ್ರಯಾಣಿಕರು

ಮೂಡಾ ನಿವೇಶನ ಅಕ್ರಮ ಹಂಚಿಕೆ ಕುರಿತು ಬಿಜೆಪಿಯಿಂದ ಜೆಡಿಎಸ್ ಮೇಲೆ ಆರೋಪ 
1. ಮೈಸೂರಿನ ಮೂಡಾ ಹಗರಣಕ್ಕೆ ಸಂಬಂಧಪಟ್ಟಂತೆ 17-03-2011 ರಲ್ಲಿ ಅಂದಿನ ಮುಖ್ಯಮಂತ್ರಿ ಶ್ರೀ ಬಿ.ಎಸ್ ಯಡಿಯೂರಪ್ಪ ವಿಧಾನ ಪರಿಷತ್ತಿನ ಸಭಾಪತಿಗಳಿಗೆ ದಾಖಲೆಗಳನ್ನು ಸಲ್ಲಿಕೆ ಮಾಡಿ ಮಾಜಿ ಪ್ರಧಾನಿ ಶ್ರೀ ಎಚ್.ಡಿ ದೇವೇಗೌಡರು ತಮ್ಮ ಕುಟುಂಬಕ್ಕೆ 48 ನಿವೇಶನಗಳ ಹಂಚಿಕೆ ಮಾಡಿರುವುದನ್ನು ಪ್ರಸ್ತಾಪಿಸಿದ್ದಾರೆ. ಅವರ ಅಷ್ಟು ಆರೋಪಗಳು ವಿಧಾನ ಪರಿಷತ್ತಿನ ನಡವಳಿಕೆಗಳಲ್ಲಿ ದಾಖಲಾಗಿರುತ್ತದೆ.

2. ಈ ಆರೋಪದಲ್ಲಿ ಎಚ್. ಡಿ ಕುಮಾರಸ್ವಾಮಿ ರವರಿಗೆ 300 x 200 ಅಡಿ ಅಳತೆಯ (ಸುಮಾರು 60,000 ಅಡಿ) ನಿವೇಶನ ಸಂಖ್ಯೆ.17(ಬಿ) ಹಂಚಿಕೆಯಾಗಿರುವುದಾಗಿ ಹೇಳಿದ್ದಾರೆ. ಅದೇ ರೀತಿ ಅವರ ಕುಟುಂಬದ ಸವಿತಾ ಕೋಂ ಬೀರೇಗೌಡ ಎಂಬುವರಿಗೆ 130x 110 ಅಡಿ (ಸುಮಾರು 14,300 ಅಡಿ) ಅಕ್ರಮ ಹಂಚಿಕೆಯ  ಕುರಿತು ಆರೋಪ ಮಾಡಿದ್ದಾರೆ. ಇದರ ಸಿಬಿಐ ತನಿಖೆಗೆ ಬಿಜೆಪಿ ಒತ್ತಾಯಿಸುವುದೇ?

3. ವಿಧಾನಪರಿಷತ್ತಿನಲ್ಲಿ ಮಾತನಾಡುವಾಗ ಬಿ ಎಸ್ ಕೆ ಮೈನಿಂಗ್ ಕಂಪನಿಯಿಂದ ದೇವೇಗೌಡರ ಕುಟುಂಬದವರಿಗೆ 167 ಕೋಟಿ ಜಮಾ ಆಗಿದೆ ಎಂದು ಆರೋಪಿಸಿದ್ದಾರೆ. ಮುಂದುವರೆದು ಜಂಥ್ಯಾಂಕ್ಸ್ ಜಂತ್ ಕಲ್ ಎಂಟರ್ಪ್ರೈಸಸ್ ಗೆ 40 ವರ್ಷ ನವೀಕರಣ ಮಾಡಿ ಅದರಲ್ಲಿ ಇವರ ಕುಟುಂಬದವರು ಪಾರ್ಟ್ ನರ್ ಇದ್ದಾರೆ ಎಂದು ಆರೋಪಿಸಿದ್ದಾರೆ. ತಾವು ಮಾಡಿದ ಆರೋಪಗಳಿಗೆ ಪೂರಕವಾಗಿ ದಾಖಲೆಗಳನ್ನು ಸಭಾಪತಿಗಳಿಗೆ ಸದನದಲ್ಲಿ ಮಂಡಿಸಿದ್ದಾರೆ.

4. ಬಿಜೆಪಿ ನಾಯಕರಿಗೆ ಅಂದಿನ ಬಿಜೆಪಿ ಮುಖ್ಯಮಂತ್ರಿ ಶ್ರೀ ಯಡಿಯೂರಪ್ಪನವರು ಸದನದಲ್ಲಿ ಮೂಡ ಅಕ್ರಮ ನಿವೇಶನ ಹಂಚಿಕೆ ಕುರಿತು ದೇವೇಗೌಡರ ಕುಟುಂಬದ ಮೇಲೆ ಮಾಡಿರುವ ಗಂಭೀರ ಆರೋಪದ ಮೇಲೆ ತನಿಖೆಗೆ ಒತ್ತಾಯಿಸಲು ತಾಕತ್ತು ಇದೆಯೇ? ಯಡಿಯೂರಪ್ಪನವರು ದಾಖಲೆಗಳನ್ನು ಸಭಾಪತಿಗಳಿಗೆ ಮಂಡಿಸಿದರು ಇಲ್ಲಿಯವರೆಗೆ ಬಿಜೆಪಿ ಯಾವ ಕಾರಣಕ್ಕೆ ಮೌನವಾಯಿತು?

ಬೆಡ್ ರೂಮ್ ವಿಡಿಯೋ ಹಂಚಿಕೊಂಡ ನಿವೇದಿತಾ ಗೌಡ; ಇದಕ್ಕಂತಲೇ ಡಿವೋರ್ಸ್ ಕೊಟ್ಟಿದ್ದಾ ಎಂದ ಚಂದನ್ ಫ್ಯಾನ್ಸ್

5. ಅವಕಾಶವಾದದ ರಾಜಕಾರಣ ಮತ್ತು ಅನುಕೂಲ ಸಿಂಧು ರಾಜಕಾರಣಕ್ಕೆ ಶರಣಾಗಿರುವ ಬಿಜೆಪಿ ಮೂಡ ಹಗರಣದಲ್ಲಿ ಯಾವ ಯಾವ ಬಿಜೆಪಿ ನಾಯಕರು ಎಷ್ಟು ಎಷ್ಟು ನಿವೇಶನಗಳನ್ನು ಪಡೆದುಕೊಂಡಿದ್ದಾರೆ ಎಂಬುದನ್ನು ಬಹಿರಂಗಗೊಳಿಸಲಿ. ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗಲೇ ಮೈಸೂರಿನ ಮೂಡಾ ದಲ್ಲಿ ಹೆಚ್ಚು ಹಗರಣಗಳು ನಡೆದಿರುತ್ತವೆ. 

6. ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಪರಿಹಾರ ರೂಪದಲ್ಲಿ ಭೂ ಮಾಲೀಕರಿಗೆ ನಿವೇಶನ ನೀಡಿರುವುದನ್ನು ಬಿಜೆಪಿ ರಾಜಕೀಯ ಕಾರಣಕ್ಕಾಗಿ ಆರೋಪ ಮಾಡುತ್ತಿದೆ. ಆದರೆ ಯಾವುದೇ ಭೂಮಿಯನ್ನು ಕಳೆದುಕೊಳ್ಳದೆ ತಮ್ಮ ರಾಜಕೀಯ ಪ್ರಭಾವದ ಮೂಲಕ ಒಂದೇ ಕುಟುಂಬ 48 ನಿವೇಶನಗಳನ್ನು ಪಡೆದುಕೊಂಡ ಅಕ್ರಮ ಕುರಿತು ಬಿಜೆಪಿ ಚಕಾರ ಎತ್ತುವುದಿಲ್ಲ. ಅದೇ ರೀತಿ ಒಬ್ಬನೇ ವ್ಯಕ್ತಿಗೆ ಯಾವ ಆಧಾರದ ಮೇಲೆ 60 ಸಾವಿರ ಅಡಿ ಅಳತೆಯ ನಿವೇಶನ ಮಂಜೂರಾಗಿತ್ತು? ಸದನದ ಒಳಗೆ ದಾಖಲೆಯಿಟ್ಟು ಮಾತನಾಡಿದ ಯಡಿಯೂರಪ್ಪನವರಿಗೆ ಸಾರ್ವಜನಿಕವಾಗಿ ಮಾತನಾಡಲು ಸಾಧ್ಯವಾಗುತ್ತಿಲ್ಲ ಏಕೆ?

Latest Videos
Follow Us:
Download App:
  • android
  • ios