Asianet Suvarna News Asianet Suvarna News

ಶಿರಾ ಬೈ ಎಲೆಕ್ಷನ್‌ಗೆ ಜೆಡಿಎಸ್ ಅಭ್ಯರ್ಥಿ ಘೋಷಣೆ: ರಂಗೇರಿದ ಉಪಚುನಾವಣೆ..!

ತೀವ್ರ ಕುತೂಹಲ ಮೂಡಿಸಿರುವ ತುಮಕೂರಿನ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್ ತನ್ನ ಅಭ್ಯರ್ಥಿಯ ಹೆಸರನ್ನು ಘೋಷಣೆ ಮಾಡಿದೆ. 
 

hd devegowda announces jds candidate for sira By Election 2020 rbj
Author
Bengaluru, First Published Oct 6, 2020, 3:49 PM IST
  • Facebook
  • Twitter
  • Whatsapp

ಬೆಂಗಳೂರು, (ಅ.06):  ತುಮಕೂರು ಜಿಲ್ಲಾ ಶಿರಾ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಇದರ ಮಧ್ಯೆ ಜೆಡಿಎಸ್​​ ಅಭ್ಯರ್ಥಿಯನ್ನ ಘೋಷಣೆ ಮಾಡಿದೆ.

ದಿವಂಗತ ಮಾಜಿ ಶಾಸಕ ಸತ್ಯನಾರಾಯಣ್ ಅವರ ಪತ್ನಿ ಅಮ್ಮಾಜಮ್ಮರನ್ನ ಜೆಡಿಎಸ್​ ಅಭ್ಯರ್ಥಿಯನ್ನಾಗಿ ಇಂದು (ಮಂಗಳವಾರ) ಅಧಿಕೃತವಾಗಿ  ಘೋಷಣೆ ಮಾಡಲಾಗಿದೆ.

ಜೆಡಿಎಸ್​ ವರಿಷ್ಠ ಹೆಚ್​​ಡಿ ದೇವೇಗೌಡ ಅವರು ಬೆಂಗಳೂರಿನಲ್ಲಿ ತಮ್ಮ ಅಭ್ಯರ್ಥಿಯನ್ನ ಪ್ರಕಟ ಮಾಡಿದರು. ಇನ್ನು ಸತ್ಯನಾರಾಯಣ್ ನಿಧನ ಹಿನ್ನೆಲೆಯಲ್ಲಿ ಅವರಿಂದ ತೆರವಾಗಿರುವ ಸ್ಥಾನವನ್ನು ಮತ್ತೆ ಜೆಡಿಎಸ್‌ಗೆ ತೆಕ್ಕೆಗೆ ತೆಗೆದುಕೊಳ್ಳಲು ದಳಪತಿಗಳು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ.

ಖ್ಯಾತ ವೈದ್ಯ ಬಿಜೆಪಿ ಸೇರ್ಪಡೆ: ಇವರೇ ಶಿರಾ ಬೈ ಎಲೆಕ್ಷನ್ ಅಭ್ಯರ್ಥಿ..!

ಸತ್ಯನಾರಾಯಣ್ ಅವರ ಪತ್ನಿಯನ್ನು ಕಣಕ್ಕಿಳಿಸಿದ್ರೆ, ಅನುಕಂಪದ ಆಧಾರದ ಮೇಲೆ ಗೆಲ್ಲಬಹುದು ಎನ್ನುವುದು ಜೆಡಿಎಸ್‌ನ ಲೆಕ್ಕಾಚಾರವಾಗಿದೆ.  ಕಾಂಗ್ರೆಸ್‌ ಅಭ್ಯರ್ಥಿಯಾಗಿ ಟಿ.ಬಿ.ಜಯಚಂದ್ರ ಕಣದಲ್ಲಿದ್ದಾರೆ. ಇನ್ನು ಬಿಜೆಪಿಯಿಂದ ರಾಜೇಶ್ ಗೌಡ ಅವರು ಅಖಾಡಳಿಯುವುದು ಬಹುತೇಕ ಖಚಿತವಾಗಿದ್ದು, ಇನ್ನೇನು ಅಧಿಕೃತ ಘೋಷಣೆಯಾಗಬೇಕಿದೆ.

ತುಮಕೂರು ಜಿಲ್ಲೆಯ ಶಿರಾ ಮತ್ತು ಬೆಂಗಳೂರಿನ ಆರ್.ಆರ್.ನಗರ ಕ್ಷೇತ್ರಗಳಿಗೆ ನ.03ರಂದು ಮತದಾನ ನಡೆಯಲಿದ್ದು, ನ.10ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಸಲು ಅ.16 ಕೊನೆಯ ದಿನವಾಗಿದೆ.

Follow Us:
Download App:
  • android
  • ios