ಎಸ್‌ಎಂಕೆ ಮತ್ತೊಮ್ಮೆ ಸಿಎಂ ಆಗುವುದನ್ನು ತಪ್ಪಿಸಿದ್ದು ಎಚ್‌ಡಿಡಿ: ಸಚಿವ ಚಲುವರಾಯಸ್ವಾಮಿ

ಜಿಲ್ಲೆಯ ಒಕ್ಕಲಿಗ ನಾಯಕ ಎಸ್.ಎಂ.ಕೃಷ್ಣರಿಗೆ 2ನೇ ಬಾರಿ ಮುಖ್ಯಮಂತ್ರಿಯಾಗುವ ಅವಕಾಶವನ್ನು ತಪ್ಪಿಸಿದ್ದು ದೇವೇಗೌಡರು ಎಂದು ಸಚಿವ ಎನ್.ಚಲುವರಾಯಸ್ವಾಮಿ ಗಂಭೀರವಾಗಿ ಆರೋಪಿಸಿದರು. 

HD Devegowda prevented SM Krishna from becoming CM again Says Minister N Cheluvarayaswamy gvd

ಮಂಡ್ಯ (ಏ.12): ಜಿಲ್ಲೆಯ ಒಕ್ಕಲಿಗ ನಾಯಕ ಎಸ್.ಎಂ.ಕೃಷ್ಣರಿಗೆ 2ನೇ ಬಾರಿ ಮುಖ್ಯಮಂತ್ರಿಯಾಗುವ ಅವಕಾಶವನ್ನು ತಪ್ಪಿಸಿದ್ದು ದೇವೇಗೌಡರು ಎಂದು ಸಚಿವ ಎನ್.ಚಲುವರಾಯಸ್ವಾಮಿ ಗಂಭೀರವಾಗಿ ಆರೋಪಿಸಿದರು. ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಭೇಟಿ ವಿಚಾರವಾಗಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿ, ೨೦೦೪ ರಲ್ಲಿ ಯಾವ ಪಕ್ಷಕ್ಕೂ ಬಹುಮತ ಬಂದಿರಲಿಲ್ಲ. ಆಗ ಎಸ್.ಎಂ.ಕೃಷ್ಣ ಅಂದು ಜೆಡಿಎಸ್‌ಗೆ ಮತ್ತೊಂದು ಅವಕಾಶಕೊಡಿ ಎಂದಿದ್ದರು. ಅಂದು ನಾನು ಜೆಡಿಎಸ್‌ನಲ್ಲೇ ಇದ್ದೆ. 

ಅಂದು ಈ ಜಿಲ್ಲೆಯ ಒಕ್ಕಲಿಗ ನಾಯಕ ಎಸ್.ಎಂ.ಕೃಷ್ಣ ಅವರನ್ನು ಮತ್ತೊಮ್ಮೆ ಮುಖ್ಯಮಂತ್ರಿ ಮಾಡುವ ಅವಕಾಶ ದೇವೇಗೌಡರಿಗೆ ಮತ್ತು ಜೆಡಿಎಸ್‌ಗೆ ಇತ್ತು. ಆದರೆ ಮಾಡಲಿಲ್ಲ. ಈಗ ಅವರ ಮನೆಗೆ ಹೋಗ್ತಿರಲ್ಲ, ಅವರು ಏನು ಮಾಡಬೇಕು ಎಂದು ಕುಟುಕಿದರು. ಅಂದು ಮಲ್ಲಿಕಾರ್ಜುನ್ ಖರ್ಗೆಯವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸುವುದಕ್ಕೆ 2ನೇ ಆಯ್ಕೆ ಇತ್ತು. ಆದರೆ, ಅದನ್ನು ಜೆಡಿಎಸ್‌ನವರು ತಳ್ಳಿಹಾಕಿದರು. ಅವರು ಹೇಳಿದಂತೆ ಕೇಳಬೇಕೆಂಬ ಕಾರಣಕ್ಕೆ ಧರ್ಮಸಿಂಗ್ ಅವರನ್ನು ಕರೆತಂದು ಮುಖ್ಯಮಂತ್ರಿ ಮಾಡಿದರು. ಈಗ ಚುನಾವಣೆ ಬಂತು ಅಂತಾ ಇವತ್ತು ಎಲ್ಲರ ಮನೆಗೆ ಹೋಗುತ್ತಿದ್ದಾರೆ ಎಂದು ಲೇವಡಿ ಮಾಡಿದರು.

ಮತದಾರರ ಮನವೊಲಿಸಿ: ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸುವ ಸಂಕಲ್ಪದೊಂದಿಗೆ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಮತದಾರರ ಮನವೊಲಿಸುವ ಕೆಲಸ ಮಾಡಬೇಕೆಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು. ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಸಿದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕಿನ ಸ್ವಾಭಿಮಾನ ಮತ್ತು ಗೌರವವನ್ನು ಉಳಿಸುವುದು ನಿಮ್ಮ ಕೈಲಿದೆ ಎಂದರು.

ಮಡಿಕೇರಿ ಶಾಸಕರು ಮಂತರ್ ಗೌಡ್ರೋ, ಇಲ್ಲ ಅಪ್ಪ ಎ.ಮಂಜುವೋ: ಮಾಜಿ ಶಾಸಕ ಅಪ್ಪಚ್ಚು ರಂಜನ್ ಪ್ರಶ್ನೆ

ತಾಲೂಕಿನವರೇ ಸಂಸದರಾಗಿ ಲೋಕಸಭೆಗೆ ಪ್ರವೇಶ ಮಾಡುವ ಅವಕಾಶ ಬಂದಾಗ ನಿಮ್ಮ ತೀರ್ಮಾನ ಏನಾಗಿರಬೇಕೆಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು. ಯಾವುದೇ ವೈಮನಸ್ಸು, ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳನ್ನು ಬಿಟ್ಟು ಜಿಲ್ಲೆ ಹಾಗೂ ತಾಲೂಕಿನ ಅಭಿವೃದ್ಧಿ ದೃಷ್ಟಿಯಿಂದ ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸಿ ಮತ ನೀಡುವಂತೆ ಪ್ರತಿ ಮತದಾರರ ಮನವೊಲಿಸಬೇಕು ಎಂದು ಕರೆ ನೀಡಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಾಲೂಕು ಮತ್ತು ಜಿಲ್ಲೆಯಲ್ಲಿ ಸಾಕಷ್ಟು ಕೆಲಸ ಕಾರ್ಯಗಳು ನಡೆಯುತ್ತಿವೆ. ಕಾಂಗ್ರೆಸ್ ಯಾವುದೇ ಒಂದು ಜಾತಿ ವರ್ಗಕ್ಕೆ ಸೀಮಿತವಾಗಿಲ್ಲ. ಎಲ್ಲ ಸಮುದಾಯದ ಬಡಜನರಿಗೆ ಉತ್ತಮ ಬದುಕು ಕಟ್ಟಿಕೊಡುವ ಪಕ್ಷವಾಗಿದೆ ಎಂದರು.

Latest Videos
Follow Us:
Download App:
  • android
  • ios