ಬೆಂಗಳೂರು, (ಜುಲೈ.31): ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ನೂತನ ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಮಧ್ಯೆ ರಾಜ್ಯಸಭಾ ಸದಸ್ಯ, ಜೆಡಿಎಸ್ ವರಿಷ್ಠ ಎಚ್‌.ಡಿ. ದೇವೇಗೌಡ್ರು ಎಂಟ್ರಿ ಕೊಟ್ಟಿದ್ದಾರೆ.
 
ಕಳೆದ ಮೂರ್ನಾಲ್ಕು ದಿನಗಳಿಂದ ಕುಮಾರಸ್ವಾಮಿ ಅವರು ಮತ್ತೆ ಕಾಂಗ್ರೆಸ್‌ ವಿರುದ್ಧ ಕಿಡಿಕಾರುತ್ತಿದ್ದಾರೆ. ಇದನ್ನೇ ಪ್ಲಸ್ ಮಾಡಿಕೊಂಡ ನೂತನ ವಿಧಾನಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್‌, ಬಿಜೆಪಿ ಸರ್ಕಾರಕ್ಕೆ ಕುಮಾರಸ್ವಾಮಿ ಬೆಂಬಲ ನೀಡುತ್ತಿದ್ದಾರೆ ಎಂದು ಹೇಳುವ ಮೂಲಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದರು.

ಇನ್ನು ಈ ಬಗ್ಗೆ ಇಂದು (ಶುಕ್ರವಾರ) ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿರುವ ದೊಡ್ಡಗೌಡ್ರು, ಕುಮಾರಸ್ವಾಮಿ ಬಿಜೆಪಿ ಸರ್ಕಾರಕ್ಕೆ ಪರೋಕ್ಷ ಬೆಂಬಲ ನೀಡುತ್ತಿದ್ದಾರೆ ಎನ್ನುವ ವಿಧಾನಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್‌ ಹೇಳಿಕೆಗೆ ಮಾಡಿರುವ ಆರೋಪಕ್ಕೆ ನಿಮ್ಮಲ್ಲಿ ಏನಾದರೂ ಸಾಕ್ಷ್ಯ ಇದ್ಯಾ ಅಂತಾ ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ ಪ್ರಶ್ನಿಸಿದರು.

'ಬಿಜೆಪಿ ಸರ್ಕಾರಕ್ಕೆ ಕುಮಾರಸ್ವಾಮಿ ಪರೋಕ್ಷ ಬೆಂಬಲ ನೀಡುತ್ತಿದ್ದಾರೆ' 

ಕುಮಾರಸ್ವಾಮಿ ಕದ್ದು ಹೋಗಿ ಯಾರನ್ನೂ ಭೇಟಿ ಮಾಡುವ ಅವಶ್ಯಕತೆ ಇಲ್ಲ. ಯಡಿಯೂರಪ್ಪ ಅವರು ಹೇಳಿದಂತೆ ಒಂದು ಕಾಲದಲ್ಲಿ ಕುಮಾರಸ್ವಾಮಿ ಅಧಿಕಾರ ಮಾಡಿದ್ದಾರೆ. ರಾಜಕಾರಣಿಗಳು ಸುಖಾ ಸುಮ್ಮನೆ ಈ ರೀತಿ ಮತ್ತೊಬ್ಬರ ಬಗ್ಗೆ ಲಘುವಾಗಿ ಮಾತಾಡಬಾರದು ಎಂದು ಸಿ.ಪಿ.ಯೋಗೇಶ್ವರ್‌ ಟಾಂಗ್ ಕೊಟ್ಟರು. 

ಯೋಗೇಶ್ವರ್‌ ಹೆಚ್‌ಡಿ ಕುಮಾರಸ್ವಾಮಿ ಬಿಜೆಪಿ ಸರ್ಕಾರಕ್ಕೆ ಪರೋಕ್ಷ ಬೆಂಬಲ ನೀಡುತ್ತಿದ್ದಾರೆ. ಸರ್ಕಾರವೂ ಅವರಿಗೆ ಸಹಕಾರ ನೀಡುತ್ತಿದೆ ಎಂದು ಹೇಳಿದ್ದರು.