ಶುಕ್ರವಾರ ಪಕ್ಷದ ಕಚೇರಿಯಲ್ಲಿ ದೇವೇಗೌಡ ಅವರ ಆಯ್ಕೆಯನ್ನು ಪ್ರಕಟ

ಬೆಂಗಳೂರು(ಅ.28):  ಜೆಡಿಎಸ್‌ ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನಿರೀಕ್ಷೆಯಂತೆ ಎಚ್‌.ಡಿ.ದೇವೇಗೌಡ ಅವರನ್ನು ಮರು ಆಯ್ಕೆ ಮಾಡಲಾಗಿದ್ದು, ಇಂದು(ಶುಕ್ರವಾರ) ಅಧಿಕೃತವಾಗಿ ಘೋಷಣೆ ಮಾಡಲಾಗುವುದು. ಗುರುವಾರ ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಿತು. ಸಭೆಯಲ್ಲಿ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ, ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಮತ್ತು 13 ರಾಜ್ಯದ ಪ್ರತಿನಿಧಿಗಳು ಭಾಗವಹಿಸಿದ್ದರು. 

ಕೇರಳ, ತಮಿಳುನಾಡು, ಮಹಾರಾಷ್ಟ್ರ ಸೇರಿದಂತೆ 13 ರಾಜ್ಯಗಳ ಪಕ್ಷದ ಮುಖಂಡರು ಸಭೆಯಲ್ಲಿ ಉಪಸ್ಥಿತರಿದ್ದರು. ದೇವೇಗೌಡ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಮರು ಆಯ್ಕೆ ಮಾಡುವ ಸಂಬಂಧ 10 ಮಂದಿ ಸೂಚಿಸಿದರು. ಇದಕ್ಕೆ ಸಹಮತ ವ್ಯಕ್ತಪಡಿಸಿದ ಸಭೆಯು ದೇವೇಗೌಡ ಆಯ್ಕೆಗೆ ಒಪ್ಪಿಗೆ ನೀಡಿತು.

ದೇವೇಗೌಡರ ಪ್ರೀತಿಗೆ ಕರಗಿದ ಜಿಟಿಡಿ: ಹೆಚ್‌ಡಿಕೆ ಸಂಧಾನಕ್ಕೆ ಬಗ್ಗದವರು ದೊಡ್ಡಗೌಡ್ರಿಗೆ ಶರಣು

ಶುಕ್ರವಾರ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ದೇವೇಗೌಡ ಅವರ ಆಯ್ಕೆಯನ್ನು ಪ್ರಕಟಿಸಲಾಗುವುದು ಎಂದು ಮೂಲಗಳು ಹೇಳಿವೆ.