* ಕಾಂಗ್ರೆಸ್ ನಾಯಕ ಸಿಎಂ ಇಬ್ರಾಹಿಂ ಚಿತ್ತ ಜೆಡಿಎಸ್‌ನತ್ತ* ಇಬ್ರಾಹಿಂ ಬೇಡಿಕೆಗೆ ಪರೋಕ್ಷವಾಗಿ ಟಾಂಗ್ ಕೊಟ್ಟ ದೇವೇಗೌಡ* 6 ಬಾರಿ ಗೆದ್ದವರನ್ನು ಅಧಿಕಾರದಿಂದ ಇಳಿಸಲು ಆಗುತ್ತಾ? ಎಚ್‌ಡಿಡಿ

ಬೆಂಗಳೂರು, (ಫೆ.15): ಸಿಎಂ ಇಬ್ರಾಹಿಂ(CM Ibrahim) ಅವರು ಕಾಂಗ್ರೆಸ್ (Congress) ತೊರೆಯುವುದಾಗಿ ಹೇಳಿದ್ದು, ಜೆಡಿಎಸ್‌ ಸೇರುವ ಒಲವು ತೋರಿದ್ದಾರೆ. ಆದ್ರೆ, ದೆಹಲಿಯಿಂದ ಕರೆ ಬಮದ ಹಿನ್ನೆಲೆಯಲ್ಲಿ ಫೆ.14ರಂದು ರಾಜೀನಾಮೆ ಕೊಡುತ್ತೇನೆ ಎಂದವರು ಯುಟರ್ನ್ ಹೊಡೆದಿದ್ದಾರೆ.

ಇಬ್ರಾಹಿಂ ಜೆಡಿಎಸ್‌ಗೆ ಬಂದರೆ ಅಲ್ಪಸಂಖ್ಯಾತ ಮತಗಳನ್ನ ಕ್ರೋಢೀಕರಣ ಮಾಡಬಹುದು ಎನ್ನುವ ಪ್ಲಾನ್‌ನಲ್ಲಿ ದಳಪತಿಗಳು ಇದ್ದಾರೆ. ಆದ್ರೆ, ಇಬ್ರಾಹಿಂ ರಾಜೀನಾಮೆಯಿಂದ ಹಿಂದೆ ಸರಿದಿರುವುದು ಜೆಡಿಎಸ್‌ಗೆ ನಿರಾಸೆಯಾಗಿದೆ.

Karnataka Politics ಒಂದೇ ಫೋನ್‌ ಕಾಲ್, ಸಿಎಂ ಇಬ್ರಾಹಿಂ ಯುಟರ್ನ್, ಜೆಡಿಎಸ್‌ಗೆ ಬಿಗ್ ಶಾಕ್

ಇನ್ನು ಸಿಎಂ ಇಬ್ರಾಹಿಂ ಪಕ್ಷ ಸೇರ್ಪಡೆ ವಿಚಾರಕ್ಕೆ ಜೆಡಿಎಸ್(JDS) ವರಿಷ್ಠ ಎಚ್‌ಡಿ ದೇವೇಗೌಡ (HD Devegowda) ಪ್ರತಿಕ್ರಿಯಿಸಿ, ನಮ್ಮಲ್ಲಿ ಈಗ ಒಬ್ಬರು ರಾಜ್ಯಾಧ್ಯಕ್ಷರಾಗಿ ಇದ್ದಾರೆ. ಅವರು ಆರು ಬಾರಿ ಗೆದ್ದವರು. ಅವರನ್ನು ನಾಳೆ ಬೆಳಿಗ್ಗೆಯೇ ಅಧಿಕಾರದಿಂದ ಇಳಿಸಲು ಆಗುತ್ತಾ.? ಎಂದರು.

ಸಿಎಂ ಇಬ್ರಾಹಿಂ ಅವರಿಗೆ ಇಷ್ಟೇ ಹೇಳಿದ್ದೇವೆ. ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುವ ವೇಳೆ ಗಣನೆಗೆ ತೆಗೆದುಕೊಳ್ಳುತ್ತೇವೆ ಎಂದು ಭರವಸೆ ಕೊಟ್ಟಿದ್ದೇವೆ ಎಂದು ಹೇಳಿದರು. ಈ ಮೂಲಕ ಸದ್ಯಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ ಇಲ್ಲ. ಮುಂದಿನ ನೋಡೋಣ ಎನ್ನುವ ಮಾತುಳನ್ನಾಡಿದ್ದಾರೆ.

ಜೆಡಿಎಸ್ ತೊರೆಯುವುದಾಗಿ ಕೆಲ ಮುಖಂಡರು ಬಹಿರಂಗವಾಗಿಯೇ ಹೇಳುತ್ತಿದ್ದಾರಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ದೇವೇಗೌಡರು, ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ ಪಕ್ಷ ಸಂಘಟನೆ ಮಾಡಲು ಸಮಯ ಇನ್ನೂ ಮೀರಿಲ್ಲ ಎಂದ ಅವರು, ಕೇವಲ 123 ಸೀಟುಗಳು ನಮ್ಮ ಗುರಿ ಎಂದು ಘೋಷಿಸುವುದು ಸಾಕವುದಿಲ್ಲ ಎಂದು ಅಭಿಪ್ರಾಯಪಟ್ಟರು.

ಇದೇ ವೇಳೆ ಹಿಜಾಬ್ ವಿಚಾರದ ಮಾತನಾಡಿ, ವಿವಾದ ಆರಂಭವಾಗುತ್ತಿದ್ದಂತೆ ಎರಡು ರಾಷ್ಟ್ರೀಯ ಪಕ್ಷಗಳು ಅದನ್ನು ಆರಂಭದಲ್ಲೇ ಚಿವುಟಿ ಹಾಕುವ ಕೆಲಸ ಮಾಡ ಬೇಕಿತ್ತು ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿದ್ದಾರೆ.

ಅದನ್ನು ಎರಡೂ ರಾಷ್ಟ್ರೀಯ ಪಕ್ಷಗಳೂ ಮಾಡಬೇಕಿತ್ತು. ಆದರೆ ಈಗ ತುಂಬಾ ಬೆಳವಣಿಗೆಗಳಾಗಿವೆ, ಹೀಗಾಗಿ ಕೋರ್ಟ್ ಏನು ತೀರ್ಪು ಕೊಡುತ್ತದೋ ಅದನ್ನು ಒಪ್ಪಬೇಕು ಎಂದು ಎಚ್‌ಡಿ ದೇವೇಗೌಡ ಅಭಿಪ್ರಾಯ ವ್ಯಕ್ತಪಡಿಸಿದರು.

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ಇಬ್ರಾಹಿಂ
ಹೌದು...ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಹುದ್ದೆ ಕೈತಪ್ಪಿರುವುದರಿಂದ ಅಸಮಾಧಾನಗೊಂಡಿರುವ ಸಿಎಂ ಇಬ್ರಾಹಿಂ, ಜೆಡಿಎಸ್‌ನತ್ತ ಮುಖ ಮಾಡಿದ್ದಾರೆ. ಈಗಾಗಲೇ ಕುಮಾರಸ್ವಾಮಿ ಅವರು ಹಲವು ಬಾರಿ ಭೇಟಿ ಮಾಡಿ ಚರ್ಚೆ ಮಾಡಿದ್ದಾರೆ.

 ಆದ್ರೆ, ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ ನೀಡಬೇಕೆಂಬ ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ದೇವೇಗೌಡ ಅವರು ಸದ್ಯಕ್ಕೆ ಅಸಾಧ್ಯ. ಮುಂದೆ ನೋಡೋಣ ಎನ್ನುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.