ಎಚ್‌ಡಿಕೆ, ನಿಖಿಲ್ ವಜಾ ಎಂಬ ಪತ್ರ ನಕಲಿ: ಇಬ್ರಾಹಿಂ ದೂರು
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಯುವ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಚಾಟಿಸಿದ್ದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪತ್ರದ ಸಂಬಂಧ ಜೆ.ಸಿ.ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬೆಂಗಳೂರು (ಅ.19): ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಯುವ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಚಾಟಿಸಿದ್ದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪತ್ರದ ಸಂಬಂಧ ಜೆ.ಸಿ.ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಈ ಪತ್ರದ ಸಂಬಂಧ ದೂರು ನೀಡಿದ್ದಾರೆ.
‘ನನ್ನ ಲೆಟರ್ ಹೆಡ್ ಹಾಗೂ ಸಹಿ ಒಳಗೊಂಡಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಯುವ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಚಾಟಿಸಿದ್ದಾಗಿ ಸಾಮಾಜಿಕ ಜಾಲತಾಣದಲ್ಲಿ ನಕಲಿ ಪತ್ರವೊಂದು ಹರಿದಾಡುತ್ತಿದೆ. ಇದರಿಂದ ನನಗೆ ಹಾಗೂ ಪಕ್ಷದ ಪದಾಧಿಕಾರಿಗಳಿಗೆ ಮುಜುಗರವಾಗಿದೆ. ದುಷ್ಕರ್ಮಿಗಳು ಈ ನಕಲಿ ಪತ್ರ ಹರಿಬಿಡುವ ಮುಖಾಂತರ ಪಕ್ಷ, ನನ್ನ ಘನತೆ ಹಾಗೂ ಸ್ಥಾನಮಾನಕ್ಕೆ ಹಾನಿ ಮಾಡಿದ್ದಾರೆ. ಈ ನಕಲಿ ಪತ್ರ ಸೃಷ್ಟಿಸಿದ ದುಷ್ಕರ್ಮಿಗಳನ್ನು ಪತ್ತೆಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ’ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಕೋರಿದ್ದಾರೆ.
ಒರಿಜಿನಲ್ ಜೆಡಿಎಸ್‌ಗೆ ನಾನೇ ಅಧ್ಯಕ್ಷ, ಇಂಡಿಯಾಕ್ಕೆ ನಮ್ಮ ಬೆಂಬಲ: ಇಬ್ರಾಹಿಂ
ಇಬ್ರಾಹಿಂ ಹಿಂದೆ ನಿಂತು ಕಾಂಗ್ರೆಸ್ ಆಡಿಸುತ್ತಿದೆ: ಜೆಡಿಎಸ್ ವರಿಷ್ಠ ದೇವೇಗೌಡರು ಮತ್ತು ಎಚ್‌ಡಿಕೆ ಕಟ್ಟಿರುವ ಪಕ್ಷದಲ್ಲಿ ಬಂದು ಸೇರಿಕೊಂಡಿರುವ ಸಿ.ಎಂ.ಇಬ್ರಾಹಿಂ ಈಗ ನನ್ನದೇ ಪಕ್ಷ ಅಂದ್ರೆ ಯಾರೂ ಒಪ್ಪುವುದಿಲ್ಲ. ಇದೆಲ್ಲ ಕಾಂಗ್ರೆಸ್‌ನವರು ಸಿ.ಎಂ.ಇಬ್ರಾಹಿಂ ಹಿಂದೆ ನಿಂತು ಆಡಿಸುತ್ತಿರುವ ಆಟ ಎಂದು ಎಂಎಲ್‌ಸಿ ಇಂಚರ ಗೋವಿಂದರಾಜು ಆರೋಪಿಸಿದರು. ಒಕ್ಕಲಿಗ ಸಮುದಾಯದ ಬಗ್ಗೆ ಭಗವಾನ್ ನೀಡಿರುವ ಹೇಳಿಕೆ ಸಂಸ್ಕೃತಿ ಹೀನ ಎಂದು ಖಂಡಿಸಿ ನಗರದ ಎಸ್‌ಪಿ ಕಚೇರಿಯಲ್ಲಿ ಅಪರ ಜಿಲ್ಲಾ ರಕ್ಷಣಾಧಿಕಾರಿ ಭಾಸ್ಕರ್‌ರವರಿಗೆ ಮನವಿ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಬಿಜೆಪಿ- ಜೆಡಿಎಸ್ ಮೈತ್ರಿ ಅನಿವಾರ್ಯ: ದೇವೇಗೌಡರ ಗರಡಿಯಲ್ಲಿ ಎಲ್ಲಾ ಅಧಿಕಾರಗಳನ್ನು ಅನುಭವಿಸಿ ಪಕ್ಷ ಬಿಟ್ಟು ಹೋದವರು ಇಬ್ರಾಹಿಂ, ಕಾಂಗ್ರೆಸ್ ಪಕ್ಷದಲ್ಲಿ ಮೂಲೆ ಗುಂಪಾದಾಗಲೂ ಜೆಡಿಎಸ್ ಪಕ್ಷದಲ್ಲಿ ರಾಜ್ಯಾದ್ಯಕ್ಷ ಪದವಿ ಕೊಟ್ಟಿದ್ದು ದೇವೇಗೌಡರು. ಪಕ್ಷವು ಬಿಜೆಪಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ಈಗಾಗಲೇ ೩-೪ ಸುತ್ತಿನ ಮಾತುಕತೆಗಳು ಮುಗಿಸಿದೆ. ಪ್ರಸ್ತುತ ಜೆ.ಡಿ.ಎಸ್. ಪಕ್ಷ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದು ಅನಿವಾರ್ಯ ಎಂದರು.
ಇಬ್ರಾಹಿಂ ಒರಿಜಿನಲ್ ಪಕ್ಷ ಎಂಬ ಬೋರ್ಡ್ ಹಾಕಿಕೊಳ್ಳಲಿ: ಎಚ್.ಡಿ.ಕುಮಾರಸ್ವಾಮಿ ಗರಂ
ದೇವೇಗೌಡರು ಎನ್‌ಡಿಎ ಜತೆ ಮೈತ್ರಿ ಮಾಡಿಕೊಂಡಿರುವ ಬಗ್ಗೆ ನಮ್ಮೆಲ್ಲರ ಒಪ್ಪಿಗೆ ಇದೆ, ರಾಜ್ಯದಲ್ಲಿ ಜೆಡಿಎಸ್ ಬಲಿಷ್ಟವಾಗಿ ಕಟ್ಟಲು ವರಿಷ್ಠರ ತೀರ್ಮಾನಕ್ಕೆ ನಾವೆಲ್ಲರೂ ಬದ್ದವಾಗಿದ್ದೇವೆ, ಪಕ್ಷದ ನಿರ್ಧಾರದಂತೆ ಕೋಲಾರಕ್ಕೆ ಯಾರೇ ಅಭ್ಯರ್ಥಿಯಾದರೂ ನಿಷ್ಠೆಯಿಂದ ಗೆಲ್ಲಿಸಿಕೊಡುತ್ತೇವೆ. ಕಾಂಗ್ರೆಸ್‌ನವರು 12 ಮಂದಿ ಜೆ.ಡಿ.ಎಸ್. ಶಾಸಕರು ತಮ್ಮ ಕಡೆ ಇದ್ದಾರೆಂದು ಹೇಳಿಕೊಳ್ಳುತ್ತಿದ್ದಾರೆ. ಆದರೆ ಒಬ್ಬರೂ ಅತ್ತ ಹೋಗುತ್ತಿಲ್ಲ ಎಂದು ಹೇಳಿದರು.