Asianet Suvarna News Asianet Suvarna News

ಎಲ್ಲಿದ್ದೆ, ಎಲ್ಲಿಂದ ಬಂದೆ ಎಂದು ಅವರೇ ಹೇಳಲಿ: ಎಚ್‌ಡಿಕೆ ತೀವ್ರ ಆಕ್ರೋಶ

  • ಸಿದ್ದರಾಮಯ್ಯ ಅವರು ಮಾಡಿರುವ ಟೀಕೆಗೆ ತೀಕ್ಷ್ಣ ವಾಗಿ ಪ್ರತಿಕ್ರಿಯಿಸಿರುವ ಜೆಡಿಎಸ್‌ ನಾಯಕ, ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ
  • ಸುಳ್ಳಿನ ಶೂರ, ಸಿದ್ಧ ಕಲೆಯ ನಿಷ್ಣಾತ ಸಿದ್ದರಾಮಯ್ಯ ಅವರಿಗೆ ರಾಜಕೀಯ ಶಕ್ತಿ ತುಂಬಿದವರು ಯಾರು? 
HD Kumaraswamy anger Over Congress leader siddaramaiah snr
Author
Bengaluru, First Published Sep 27, 2021, 8:15 AM IST
  • Facebook
  • Twitter
  • Whatsapp

 ಬೆಂಗಳೂರು (ಸೆ.27) :  ಜೆಡಿಎಸ್‌ (JDS) ಪಕ್ಷ ಸ್ವತಂತ್ರವಾಗಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ, ಅದೊಂದು ಪರಾವಲಂಬಿ ಪಕ್ಷ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (siddaramaiah) ಅವರು ಮಾಡಿರುವ ಟೀಕೆಗೆ ತೀಕ್ಷ್ಣ ವಾಗಿ ಪ್ರತಿಕ್ರಿಯಿಸಿರುವ ಜೆಡಿಎಸ್‌ ನಾಯಕ, ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ (HD Kumaraswamy), ಸುಳ್ಳಿನ ಶೂರ, ಸಿದ್ಧ ಕಲೆಯ ನಿಷ್ಣಾತ ಸಿದ್ದರಾಮಯ್ಯ ಅವರಿಗೆ ರಾಜಕೀಯ (Politics) ಶಕ್ತಿ ತುಂಬಿದವರು ಯಾರು? ನಾನು ಎಲ್ಲಿದ್ದೆ, ಎಲ್ಲಿಂದ ಬಂದೆ ಎಂಬುದನ್ನು ಅವರೇ ರಾಜ್ಯದ ಜನತೆಗೆ ತಿಳಿಸಿದರೆ ಚೆನ್ನಾಗಿರುತ್ತದೆ ಎಂದು ತಿರುಗೇಟು ನೀಡಿದ್ದಾರೆ.

ಯಾರೋ ಕಟ್ಟಿದ ಹುತ್ತಕ್ಕೆ ಹೊಕ್ಕು ರಾಜಕೀಯದ ಮರು ಹುಟ್ಟು ಪಡೆದು ಉಂಡ ಮನೆಗೆ ಕನ್ನ ಕೊರೆವ ಗುಣ ಯಾರದ್ದು ಎಂಬುದನ್ನು ಜನ ಬಲ್ಲರು. ಪರಾವಲಂಬಿ ರಾಜಕಾರಣ ಅವರ ನೈಜ ಗುಣ. ನೇರ ರಾಜಕಾರಣ ಅವರ ರಕ್ತದಲ್ಲೇ ಇಲ್ಲ. ಜೆಡಿಎಸ್‌ನ ಅನ್ನ-ಗೊಬ್ಬರದಿಂದ ಬೆಳೆದು ಈಗ ಕಾಂಗ್ರೆಸ್‌ ಪಕ್ಷವನ್ನೇ ನುಂಗುತ್ತಾ ಆ ಪಕ್ಷದ ದಿಗ್ಗಜರನ್ನೇ ಬಲಿ ತೆಗೆದುಕೊಳ್ಳುತ್ತಿದ್ದಾರೆ ಎಂದು ಕುಮಾರಸ್ವಾಮಿ ಟ್ವೀಟರ್‌ನಲ್ಲಿ ಕಟುವಾಗಿ ಟೀಕಿಸಿದ್ದಾರೆ.

 

ಗೊತ್ತೇನ್ರಿ...ಕೇಳ್ರಿ ಇಲ್ಲಿ... ಸಿದ್ದರಾಮಯ್ಯ 'ಲಾ' ಪಾಯಿಂಟ್‌ಗೆ ತಬ್ಬಿಬ್ಬಾಯ್ತು ವಿಧಾನಸಭೆ.!

ಜೆಡಿಎಸ್‌ ಅವರಿವರ ಜೊತೆ ಹೋಗುವ ಪಕ್ಷ ಎಂದು ಸಿದ್ದರಾಮಯ್ಯ ಅವರು ಹೇಳಿರುವುದು ಅವರ ರಾಜಕೀಯ ಪ್ರಜ್ಞೆಯ ದಿವಾಳಿತನವಷ್ಟೆ. 2018ರಲ್ಲಿ ದೇವೇಗೌಡರ ಮನೆ ಬಾಗಿಲಿಗೆ ಬಂದವರು ಯಾರು? ನನ್ನನ್ನು ಮುಖ್ಯಮಂತ್ರಿ ಮಾಡಿ ಕೊನೆಗೆ ಕೈಕೊಟ್ಟು ಆ ಸರ್ಕಾರದ ಪತನಕ್ಕೆ ‘ಕಾರಣ ಪುರುಷರು’ ಯಾರು ಎಂಬುದು ಇಡೀ ರಾಜ್ಯಕ್ಕೆ ಗೊತ್ತಿರುವ ಸಂಗತಿಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಗಂಭೀರ ಆರೋಪ ಮಾಡಿದ ಸಿದ್ದರಾಮಯ್ಯ

ದೇವೇಗೌಡರನ್ನು ಪ್ರಧಾನಿ ಮಾಡಿ, ಅವರಿಗೂ ಕೈ ಕೊಟ್ಟವರು ಯಾರು ಎಂಬುದು ಜನರಿಗೆ ಗೊತ್ತಿದೆ. ಸಿದ್ದರಾಮಯ್ಯ ಅವರೇ ಸುಮ್ಮನೆ ನಮ್ಮನ್ನು ಕೆಣಕಬೇಡಿ. ಜೆಡಿಎಸ್‌ ಚಿಕ್ಕ ಪಕ್ಷವಿರಬಹುದು. ಅದರ ಶಕ್ತಿಯನ್ನು ಕಡೆಗಣಿಸಬೇಡಿ. ಕರ್ನಾಟಕದ ರಾಜಕಾರಣದಲ್ಲಿ ಪರಾವಲಂಬಿ ಸಸ್ಯ ನೀವು. ಪಕ್ಷಗಳನ್ನು ಒಡೆಯುವ ನಿಮ್ಮ ‘ಸಿದ್ದ ಕಲೆ’ರಾಜ್ಯಕ್ಕೆ ಹೊಸತೇನು ಅಲ್ಲ ಎಂದು ಎಚ್‌.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ.

Follow Us:
Download App:
  • android
  • ios