ಸಿಂಧಗಿ ಉಪಚುನಾವಣೆಗೆ ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದ ಜೆಡಿಎಸ್

* ಸಿಂಧಗಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿ ಫೈನಲ್
* ಸಿಂಧಗಿ ಬೈ ಎಲೆಕ್ಷನ್‌ಗೆ ಮಹಿಳೆಯನ್ನು ಅಖಾಡಕ್ಕಿಳಿಸಿದ ಕುಮಾರಸ್ವಾಮಿ
* ನಾಜಿಯಾ ಶಕೀಲಾ ಅಂಗಡಿ ಸಿಂಧಗಿ  ಜೆಡಿಎಸ್ ಅಭ್ಯರ್ಥಿ

HD Kumaraswamy announces naziya shakila Angadi JDS candidate Sindagi By Poll rbj

ವಿಜಯಪುರ, (ಅ.01): ಸಿಂಧಗಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ (By Election) ಜೆಡಿಎಸ್ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ. ಅಚ್ಚರಿ ಎಂಬಂತೆ ನಾಜಿಯಾ ಶಕೀಲಾ ಅಂಗಡಿ ಅವರಿಗೆ ಟಿಕೆಟ್ ನೀಡಿದೆ. 

 2023ರ ವಿಧಾನಸಭೆ ಚುನಾವಣೆಯಲ್ಲಿ (Assembly Election 2023) ಮಹಿಳೆಯರಿಗೆ 30-35 ಸೀಟುಗಳನ್ನು ನೀಡುವುದಾಗಿ ಪ್ರಕಟಿಸಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು, ಅದಕ್ಕೆ ಮುನ್ನುಡಿ ಎಂಬಂತೆ ಸಿಂಧಗಿ ಕ್ಷೇತ್ರದ ಉಪ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯನ್ನಾಗಿ ಶ್ರೀಮತಿ ನಾಜಿಯಾ ಶಕೀಲಾ ಅಂಗಡಿ ಅವರನ್ನು ಕಣಕ್ಕಿಳಿಸಿದ್ದಾರೆ.

ಹಾನಗಲ್ ಬೈ ಎಲೆಕ್ಷನ್‌: ಜೆಡಿಎಸ್ ಅಧಿಕೃತ ಅಭ್ಯರ್ಥಿ ಇವರೇ, ಬಿ ಫಾರಂ ನೀಡಿದ ಕುಮಾರಸ್ವಾಮಿ

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಶ್ರೀಮತಿ ನಾಜಿಯಾ ಶಕೀಲಾ ಅಂಗಡಿ ಅವರು MA, B.ed ಪದವೀಧರರಾಗಿದ್ದು, ಜೆಡಿಎಸ್ ಪಕ್ಷದಲ್ಲಿ ಸಕ್ರಿಯರಾಗಿ ನಿಷ್ಠೆಯಿಂದ ಕೆಲಸ ಮಾಡುತ್ತಿದ್ದಾರೆ ಎಂದರು.

ಅನೇಕ ವರ್ಷಗಳಿಂದ ಸಮಾಜಮುಖಿ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ನಾಜಿಯಾ ಶಕೀಲಾ ಅಂಗಡಿ ಅವರು ಅತ್ಯುತ್ತಮ ಅಭ್ಯರ್ಥಿ ಆಗಿದ್ದು, ಸಮಾಜದ ಎಲ್ಲ ವರ್ಗದ ಜನರಿಗೂ ಸಲ್ಲುವ ಮಹಿಳೆಯಾಗಿದ್ದಾರೆ. ಪಕ್ಷನಿಷ್ಠೆಯ ಜತೆಗೆ ಪ್ರಾಮಾಣಿಕ ಹಾಗೂ ಸೇವಾ ಮನೋಭಾವ ಹೊಂದಿರುವ ನಾಜಿಯಾ ಶಕೀಲಾ ಅಂಗಡಿ ಅವರನ್ನು ಸಮಸ್ತ ಸಿಂಧಗಿ ಮತದಾರರು ಆಶೀರ್ವದಿಸಿ ಆಯ್ಕೆ ಮಾಡಬೇಕು ಎಂದು ಕುಮಾರಸ್ವಾಮಿ ಅವರು ಮನವಿ ಮಾಡಿದ್ದಾರೆ.

ಈಗಾಗಲೇ ಹಾನಗಲ್ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಟಿಕೆಟ್‌ ಅನ್ನು  Be, M tech ಪದವೀಧರರಾಗಿರುವ ನಿಯಾಜ್ ಶೇಕ್ ನೀಡಲಾಗಿದ್ದು,  ಎರಡೂ ಕ್ಷೇತ್ರಗಳಲ್ಲಿ ಉತ್ತಮ ಶಿಕ್ಷಣ ಪಡೆದಿರುವ ವಿದ್ಯಾವಂತರಿಗೆ ಜೆಡಿಎಸ್ ಟಿಕೆಟ್ ನೀಡಲಾಗಿದ್ದು, ಎರಡು ಕ್ಷೇತ್ರಗಳಲ್ಲಿ ಜನರು ಜೆಡಿಎಸ್ ಅಭ್ಯರ್ಥಿಗಳಿಗೆ ಮತ ನೀಡಿ ಆಶೀರ್ವಾದ ಮಾಡಬೇಕು ಎಂದಿದ್ದಾರೆ.

ಹಾವೇರಿ ಜಿಲ್ಲೆಯ ಹಾನಗಲ್ ಹಾಗೂ ವಿಜಯಪುರ ಜಿಲ್ಲೆ ಸಿಂದಗಿ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆಗೆ ಅಕ್ಟೋಬರ್ 8 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದೆ. ಅಕ್ಟೋಬರ್ 11 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಅಕ್ಟೋಬರ್ 13 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನಾಂಕವಾಗಿದೆ. ಅಕ್ಟೋಬರ್ 30 ರಂದು 2 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ನವೆಂಬರ್ 01ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.
 

Latest Videos
Follow Us:
Download App:
  • android
  • ios