* ಸಿದ್ದರಾಮಯ್ಯ ವಿರುದ್ಧ ಮತ್ತೆ ಗುಡುಗಿದ ಕುಮಾರಸ್ವಾಮಿ* ಸಿದ್ದರಾಮಯ್ಯಗೆ ನಾಲ್ಕು ಪ್ರಶ್ನೆ ಕೇಳಿದ ಎಚ್‌ಡಿಕೆ* ಧೈರ್ಯವಿದ್ದರೆ ಉತ್ತರಿಸಿ, ವಿಷಯಾಂತರ ಬೇಡ ಎಂದು ಸವಾಲು

ಬೆಂಗಳೂರು, (ಏ.19): ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ (HD Kumaraswamy) ನಡುವಿನ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ.

ಇಂದು(ಮಂಗಳವಾರ) ಸಹ ಕುಮಾರಸ್ವಾಮಿ ಅವರು ಟ್ವಿಟ್ಟರ್ ಮೂಲಕ ಸಿದ್ದರಾಮಯ್ಯ ವಿರುದ್ಧ ಸಿಡಿದೆದ್ದಿದ್ದು,ಈಶ್ವರಪ್ಪ ಬಗ್ಗೆ ಮಾತನಾಡಿ, ಅಭ್ಯಂತರವಿಲ್ಲ. ಡಿವೈಎಸ್ಪಿ ಗಣಪತಿ ಬಗ್ಗೆಯೂ ಹೇಳಿ, ಬೇಜಾರಿಲ್ಲ. ಆದರೆ ಕಲ್ಲಪ್ಪ ಹಂಡೀಭಾಗ್ ಬಗ್ಗೆ ಮಾತನಾಡಿದರೆ ನಿಮ್ಮ ಜಾಣ ಮೌನವೇಕೆ? ಮಂಡ್ಯದಲ್ಲಿ ಜೆಡಿಎಸ್ ಬಗ್ಗೆ ಸುಳ್ಳು ಹೇಳಿದ್ದೀರಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಆಪರೇಷನ್ ಕಮಲವೆಂಬ ಅನೈತಿಕ ಕೂಸಿನ ಬೇನಾಮಿ ಅಪ್ಪ, ಪಾಪಕ್ಕೆ ಪಡೆದ ಫಲದ ಬಗ್ಗೆ ಪಲಾಯನವೇಕೆ ಸುಳ್ಳುರಾಮಯ್ಯ? ಎಂದು ಪ್ರಶ್ನಿಸಿದ್ದಾರೆ. ಹ್ಯೂಬ್ಲೆಟ್ ವಾಚ್ ಬಗ್ಗೆ ವಾಕರಿಕೆ ಬರುವಷ್ಟು ಹೇಸಿಗೆ ಕಥೆಗಳಿವೆ. ಈ ಎರಡೂ ಪ್ರಶ್ನೆಗಳಿಗೂ ಉತ್ತರಿಸುತ್ತಿಲ್ಲ, ಯಾಕಯ್ಯಾ? ಎಂದು ಟ್ವೀಟ್ ಮಾಡಿದ್ದಾರೆ.

ಈಶ್ವರಪ್ಪ ಬಂಧನ ಯಾಕೆ ಎಂದ ಎಚ್‌ಡಿಕೆ ವಿರುದ್ಧ ಸಿದ್ದರಾಮಯ್ಯ ಕೆಂಡಾಮಂಡಲ

Scroll to load tweet…

ಜೆಡಿಎಸ್ ಬಗ್ಗೆ ಸುಳ್ಳು ಹೇಳಿದ್ದೀರಿ, ನಾಚಿಕೆ ಆಗುವುದಿಲ್ಲವೇ? ಆಪರೇಷನ್ ಕಮಲದಿಂದ ನಿಮ್ಮ ಜೇಬು ಸೇರಿದ ಆಕರ್ಷಕ ಹಣದ ಅಸಲೀಯೆತ್ತು ನನಗೂ ಗೊತ್ತು. ಈಗ ಹೇಳಿ? ಉಂಡ ಮನೆಗೆ ಮೂರು ಬಗೆದ ನೈಜ ಕಳ್ಳ ಯಾರು? Mr.ಸುಳ್ಳುರಾಮಯ್ಯ, ದಿನಕ್ಕಿಷ್ಟು ಸುಳ್ಳು, ಕ್ಷಣಕ್ಕೊಂದು ಪೊಳ್ಳು. ನೀವು ರಾಜಕೀಯ ಊಸರವಳ್ಳಿ ಅಂತ ಕುಮಾರಸ್ವಾಮಿ ಗುಡುಗಿದ್ದಾರೆ.

ಸುಳ್ಳುರಾಮಯ್ಯ, ಈ ರಾಜ್ಯ ಕಂಡ ಅಪ್ರತಿಮ ಸುಳ್ಳುಗಾರ ನೀವು. ಆಶ್ರಯ ಕೊಟ್ಟ ಪಕ್ಷಕ್ಕೇ ಹಳ್ಳ ತೋಡುತ್ತಿರುವ ನೀವು ʼಬಿಜೆಪಿ ಬಾಲಂಗೋಚಿʼ & ʼಬಿಜೆಪಿಯ ಬೇನಾಮಿ ಆಸಾಮಿʼ ಎನ್ನುವುದು ಎಲ್ಲರಿಗೂ ಗೊತ್ತು ಎಂದು ವಾಗ್ದಾಳಿ ನಡೆಸಿದ್ದಾರೆ.

Scroll to load tweet…

ಈಶ್ವರಪ್ಪ ಬಗ್ಗೆ ಮಾತನಾಡಿ, ಅಭ್ಯಂತರವಿಲ್ಲ. ಡಿವೈಎಸ್ಪಿ ಗಣಪತಿ ಬಗ್ಗೆಯೂ ಹೇಳಿ, ಬೇಜಾರಿಲ್ಲ. ಆದರೆ ಕಲ್ಲಪ್ಪ ಹಂಡೀಭಾಗ್ ಬಗ್ಗೆ ಮಾತನಾಡಿದರೆ ನಿಮ್ಮ ಜಾಣ ಮೌನವೇಕೆ? ಮಂಡ್ಯದಲ್ಲಿ ಜೆಡಿಎಸ್ ಬಗ್ಗೆ ಸುಳ್ಳು ಹೇಳಿದ್ದೀರಿ. ನಾಚಿಕೆ ಆಗುವುದಿಲ್ಲವೇ ನಿಮಗೆ? ನಿಮ್ಮ 5 ವರ್ಷಗಳ ದುರಾಡಳಿತದಲ್ಲಿ ಆ ಜಿಲ್ಲೆಯೊಂದರಲ್ಲೇ 200 ರೈತರು ಆತ್ಮಹತ್ಯೆಗೆ ಶರಣಾದರು. ಮೈಶುಗರ್ ಕಾರ್ಖಾನೆ ಮುಚ್ಚಿಸಿ ಕಬ್ಬು ಬೆಳೆಗಾರರ ಮನೆ ಹಾಳು ಮಾಡಿದಿರಿ. ಮರೆತುಬಿಟ್ಟಿರಾ ಸುಳ್ಳುರಾಮಯ್ಯ? ಅಂತ ಸಿದ್ದರಾಮಯ್ಯಗೆ ಪ್ರಶ್ನಿಸಿದ್ದಾರೆ.

ನಾವು ಜಲಧಾರೆ ಮಾಡುತ್ತಿದ್ದೇವೆ, ನಿಜ. ನೀರಾವರಿ ಯೋಜನೆಗಳ ಬಗ್ಗೆ ನಮಗೆ ಸ್ಪಷ್ಟತೆ ಇದೆ. ಈ ರಾಜ್ಯಕ್ಕೆ ಹೆಚ್ ಡಿ ದೇವೇಗೌಡರು ಕೊಟ್ಟ ಕೊಡುಗೆ ಕಣ್ಮುಂದೆಯೇ ಇದೆ. 1962ರಿಂದ ಅವರು ನಡೆಸಿದ ಹೊರಾಟದ ಬಗ್ಗೆ ತಿಳಿದು ಮಾತನಾಡಿ. ಅರಿವುಗೆಟ್ಟ ಹೇಳಿಕೆ ಕೊಟ್ಟು ಅಪಹಾಸ್ಯಕ್ಕೆ ಗುರಿಯಾಗಬೇಡಿ ಎಂದು ಕಿಡಿಕಾರಿದ್ದಾರೆ.

ಕೊನೆಗೆ 4 ಪ್ರಶ್ನೆ!
1.ಆಪರೇಷನ್ ಕಮಲಕ್ಕೆ ಸಹಕರಿಸಿದ್ದಕ್ಕೆ ಸಿಕ್ಕ ಪ್ರತಿಫಲವೆಷ್ಟು?
2.ಆ ಪಾಪದ ಹಣವನ್ನು ಏನು ಮಾಡಿದಿರಿ?
3.ಹ್ಯೂಬ್ಲೆಟ್ ವಾಚಿನ ʼಸಿದ್ದರಹಸ್ಯʼವೇನು?
4.ಅರ್ಕಾವತಿ ರೀಡೂ ಬಗ್ಗೆ ಮೌನವೇಕೆ?

ಧೈರ್ಯವಿದ್ದರೆ ಉತ್ತರಿಸಿ, ವಿಷಯಾಂತರ ಬೇಡ ಎಂದು ಟ್ವೀಟ್ ಮೂಲಕ ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದ್ದಾರೆ.