Asianet Suvarna News Asianet Suvarna News

ಲೋಕಸಭೆ ಚುನಾವಣೆಗೆ ಕುಮಾರಸ್ವಾಮಿ-ವಿಜಯೇಂದ್ರ ಜೋಡೆತ್ತು..!

ಉಭಯ ಪಕ್ಷಗಳ ಮೈತ್ರಿ ಬಗ್ಗೆ ಈಗಾಗಲೇ ದೆಹಲಿ ಮಟ್ಟದಲ್ಲಿ ತೀರ್ಮಾನ ಆಗಿದೆ. ಇನ್ನು ಕ್ಷೇತ್ರಗಳ ಹಂಚಿಕೆ ಆಗುವುದು ಬಾಕಿ ಉಳಿದಿದೆ. ಒಟ್ಟು 28 ಕ್ಷೇತ್ರಗಳ ಪೈಕಿ ಜೆಡಿಎಸ್‌ಗೆ ನಾಲ್ಕರಿಂದ ಐದು ಕ್ಷೇತ್ರಗಳನ್ನು ಬಿಟ್ಟು ಕೊಡುವ ಚರ್ಚೆ ನಡೆದಿದ್ದು, ಇದೀಗ ಕುಮಾರಸ್ವಾಮಿ ಮತ್ತು ವಿಜಯೇಂದ್ರ ಅವರು ಈ ವಿಷಯದಲ್ಲಿ ಮುಂದಾಳತ್ವ ತೆಗೆದುಕೊಳ್ಳಬೇಕಿದೆ.

HD Kumaraswamy BY Vijayendra Joint Campaign for Lok Sabha Elections 2024 in Karnataka grg
Author
First Published Nov 11, 2023, 11:43 AM IST | Last Updated Nov 11, 2023, 11:43 AM IST

ಬೆಂಗಳೂರು(ನ.11):  ಮುಂಬರುವ ಲೋಕಸಭಾ ಚುನಾವಣೆಗೆ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಪರಿಣಾಮ ಉಭಯ ಪಕ್ಷಗಳ ರಾಜ್ಯಾಧ್ಯಕ್ಷರಾದ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಬಿ.ವೈವಿಜಯೇಂದ್ರ ಅವರು ಜೋಡೆತ್ತುಗಳಂತೆ ರಾಜ್ಯಾದ್ಯಂತ ಸಂಚರಿಸಲಿದ್ದಾರೆ.

ಉಭಯ ಪಕ್ಷಗಳ ಮೈತ್ರಿ ಬಗ್ಗೆ ಈಗಾಗಲೇ ದೆಹಲಿ ಮಟ್ಟದಲ್ಲಿ ತೀರ್ಮಾನ ಆಗಿದೆ. ಇನ್ನು ಕ್ಷೇತ್ರಗಳ ಹಂಚಿಕೆ ಆಗುವುದು ಬಾಕಿ ಉಳಿದಿದೆ. ಒಟ್ಟು 28 ಕ್ಷೇತ್ರಗಳ ಪೈಕಿ ಜೆಡಿಎಸ್‌ಗೆ ನಾಲ್ಕರಿಂದ ಐದು ಕ್ಷೇತ್ರಗಳನ್ನು ಬಿಟ್ಟು ಕೊಡುವ ಚರ್ಚೆ ನಡೆದಿದ್ದು, ಇದೀಗ ಕುಮಾರಸ್ವಾಮಿ ಮತ್ತು ವಿಜಯೇಂದ್ರ ಅವರು ಈ ವಿಷಯದಲ್ಲಿ ಮುಂದಾಳತ್ವ ತೆಗೆದುಕೊಳ್ಳಬೇಕಿದೆ.

ಪುತ್ರ ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಪಟ್ಟ: ಬಿಜೆಪಿಯಲ್ಲಿ ಕೊನೆಗೂ ಮೇಲುಗೈ ಸಾಧಿಸಿದ ಯಡಿಯೂರಪ್ಪ..!

ದೆಹಲಿಯಲ್ಲಿ ಹೊಂದಾಣಿಕೆ ಮಾಡಿಕೊಂಡಷ್ಟು ಸುಲಭವಾಗಿ ರಾಜ್ಯದಲ್ಲಿ ಅಲ್ಲ ಎಂಬುದು ಎರಡೂ ಪಕ್ಷಗಳ ನಾಯಕರಿಗೆ ಗೊತ್ತಿದೆ. ಹೀಗಾಗಿ, ಸಾಕಷ್ಟು ಸಿದ್ಧತೆಯೊಂದಿಗೆ ಉಭಯ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರ ನಡುವೆ ಮುನಿಸು ಉಂಟಾಗದಂತೆ ಕ್ರಮ ಕೈಗೊಳ್ಳಬೇಕಾಗುತ್ತದೆ. ಜತೆಗೆ ಆಡಳಿತಾರೂಢ ಕಾಂಗ್ರೆಸ್ಸಿನ ಜೋಡೆತ್ತುಗಳಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಎದುರಿಸಿ ಪಕ್ಷ ಸಂಘಟನೆ ಮಾಡಲು ಪ್ರವಾಸ ಕೈಗೊಳ್ಳುತ್ತಾರೆ ಎನ್ನಲಾಗಿದೆ.

Latest Videos
Follow Us:
Download App:
  • android
  • ios