ಬಿಜೆಪಿ ಜೊತೆ ಜೆಡಿಎಸ್ ವಿಲೀನ: ಬಿಎಸ್‌ವೈ ಬೆನ್ನಲ್ಲೇ ಕುಮಾರಸ್ವಾಮಿಯಿಂದ ಸ್ಪಷ್ಟನೆ

ಬಿಜೆಪಿ ಜೊತೆ ಜೆಡಿಎಸ್ ವಿಲೀನವಾಗುತ್ತೆ ಎನ್ನುವ ಚರ್ಚೆ ರಾಜ್ಯ ರಾಜಕಾರಣದಲ್ಲಿ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಸ್ವತಃ ಕುಮಾರಸ್ವಾಮಿ ಅವರು ಇದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ.

HD Kumaraswamy clarifies on rumors about jds merging with bjp rbj

ಬೆಂಗಳೂರು, (ಡಿ.20): ರಾಜ್ಯದಲ್ಲಿ ಬಿಜೆಪಿ ಜೊತೆ ಜೆಡಿಎಸ್ ವಿಲೀನ ಎನ್ನುವ ಚರ್ಚೆ ಹುಟ್ಟುಹಾಕಿದೆ. ಇದರಿಂದ ಜೆಡಿಎಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಚರ್ಚೆ ನಡೆಸಿದ್ದಾರೆ. ಇನ್ನು ಕೆಲ ಕಾರ್ಯಕರ್ತರಲ್ಲಿ ಗೊಂದಲಗಳು ಹುಟ್ಟಿಗೊಂಡಿದ್ದು, ಈ ಬಗ್ಗೆ ಸ್ಪಷ್ಟನೆ ಕೊಡಿ ಕುಮಾರಣ್ಣ ಎನ್ನುತ್ತಿದ್ದಾರೆ.

ಇದರಿಂದ ಎಚ್ಚೆತ್ತ ಕುಮಾರಸ್ವಾಮಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಸ್ವಾಭಿಮಾನಿ ಕನ್ನಡಿಗರ ಪಕ್ಷ ಜೆಡಿಎಸ್ ಎಂದಿಗೂ ವಿಲೀನದ ಆಲೋಚನೆ ಮಾಡುವುದಿಲ್ಲ. ಜನರ ಗಟ್ಟಿ ಧ್ವನಿಯಾದ ಜೆಡಿಎಸ್‌ ಅಂತಹ ಅವಿವೇಕತನ ಪ್ರದರ್ಶನ ಮಾಡುವುದಿಲ್ಲ. ಅಗತ್ಯವಿದ್ದಾಗ ವಿಷಯಾಧಾರಿತವಾಗಿ ಮುಂದಿನ ದಿನಗಳಲ್ಲಿ ಬಿಜೆಪಿ ಜೊತೆ ವಿಶ್ವಾಸಪೂರ್ವಕವಾಗಿ ನಡೆಯಬಹುದಷ್ಟೆ. ವಿಲೀನದಂಥ ಕಪೋಲಕಲ್ಪಿತ ಸುದ್ದಿಗಳಿಗೆ ಯಾವುದೇ ಪ್ರಾಮುಖ್ಯತೆ ಇಲ್ಲ ಎಂದು ಹೇಳುವ ಮೂಲಕ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ಬಿಜೆಪಿಯೊಂದಿಗೆ ಜೆಡಿಎಸ್ ವಿಲೀನ ಬಗ್ಗೆ ಸ್ಪಷ್ಟನೆ ನೀಡಿದ ಸಿಎಂ ಯಡಿಯೂರಪ್ಪ

ರಾಜ್ಯದಲ್ಲಿ ಪ್ರಾದೇಶಿಕ ಪಕ್ಷವಾದಂತ ಜೆಡಿಎಸ್ ಬಿಜೆಪಿಯೊಂದಿಗೆ ವಿಲೀನವಾಗಲಿದೆ ಎಂಬುದಾಗಿ ಎದ್ದಿದ್ದಂತ ಊಹಾಪೋಹಗಳಿಗೆ ತೆರೆ ಎಳಿದಿರುವ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಸರಣಿ ಟ್ವಿಟ್ ನಲ್ಲಿ, ಜೆಡಿಎಸ್ ಬಿಜೆಪಿಯ 'ಬಿ ಟೀಂ' ಎಂದು ಟೀಕಿಸಿದ್ದ ಕಾಂಗ್ರೆಸ್ ಹೈಕಮಾಂಡ್ ನಮ್ಮ ಮನೆಬಾಗಿಲಿಗೆ ಬಂದು ಕಾಂಗ್ರೆಸ್ ಜೊತೆ ಸರ್ಕಾರ ರಚಿಸುವ ಆಹ್ವಾನ ನೀಡಿತ್ತು. ನಾವೇನಾದರೂ ಬಿಜೆಪಿಯ 'ಬಿ ಟೀಂ' ಆಗಿದ್ದರೆ, ಕಾಂಗ್ರೆಸ್‌ನೊಂದಿಗೆ ಸರ್ಕಾರವನ್ನೇ ಮಾಡುತ್ತಿರಲಿಲ್ಲ. ಅವರು ಹೇಳಿದಂತೆ ಒಳಒಪ್ಪಂದವೇನೂ ಇಲ್ಲ. ವಿಷಯಾಧಾರಿತ ಹೊಂದಾಣಿಕೆಯಷ್ಟೇ ಸಾಧ್ಯ ಎಂದಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಜೆಡಿಎಸ್ ಬಿಜೆಪಿಯ 'ಬಿ ಟೀಂ' ಎಂದು ಟೀಕಿಸಿದ್ದ ಕಾಂಗ್ರೆಸ್ ಹೈಕಮಾಂಡ್ ನಮ್ಮ ಮನೆಬಾಗಿಲಿಗೆ ಬಂದು ಕಾಂಗ್ರೆಸ್ ಜೊತೆ ಸರ್ಕಾರ ರಚಿಸುವ ಆಹ್ವಾನ ನೀಡಿತ್ತು. ನಾವೇನಾದರೂ ಬಿಜೆಪಿಯ 'ಬಿ ಟೀಂ' ಆಗಿದ್ದರೆ, ಕಾಂಗ್ರೆಸ್‌ನೊಂದಿಗೆ ಸರ್ಕಾರವನ್ನೇ ಮಾಡುತ್ತಿರಲಿಲ್ಲ. ಅವರು ಹೇಳಿದಂತೆ ಒಳಒಪ್ಪಂದವೇನೂ ಇಲ್ಲ. ವಿಷಯಾಧಾರಿತ ಹೊಂದಾಣಿಕೆಯಷ್ಟೇ ಸಾಧ್ಯ ಎಂದು ಹೇಳಿದರು.

ಈಗಾಗಲೇ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸ್ವತಃ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಮಾಧ್ಯಮ ಪ್ರಕಟಣೆ ಹೊರಡಿಸುವ ಮೂಲಕ ಸ್ಪಷ್ಟನೆ ಕೊಟ್ಟಿದ್ದನ್ನು ಇಲ್ಲಿ ಸ್ಮರಿಸಬಹುದು.

Latest Videos
Follow Us:
Download App:
  • android
  • ios