ಜನತಾ ದರ್ಶನವನ್ನು ಜನಸ್ಪಂದನ ಎಂದ ಸಿಎಂ: ಕುಮಾರಸ್ವಾಮಿ ಅಭಿನಂದನೆ..!

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳನ್ನು ಬರಲು ಹೇಳಿ ನಾಡಿನ ಜನತೆಯ ಸಮಸ್ಯೆ ಆಲಿಸಿದ್ದಾರೆ. ಈಗಲಾದರೂ ಇವರಿಗೆ ರಾಜ್ಯದ ಜನತೆಯ ಗ್ರೌಂಡ್ ರಿಯಾಲಿಟಿ ಅರ್ಥವಾಗಿದೆ ಎಂದುಕೊಂಡಿದ್ದೇನೆ. ವಿವಿಧ ಸಮಸ್ಯೆಗಳು ಜನಸ್ಪಂದನದಲ್ಲಿ ಅರ್ಥವಾಗಿರಬಹುದು. ಒಬ್ಬ ಸಿಎಂ ಜನಸ್ಪಂದನೆ ಮಾಡುವುದನ್ನು ನಾನು ಅಭಿನಂದಿಸುತ್ತೇನೆ. ನಾನು ಎಲ್ಲವನ್ನೂ ಟೀಕಿಸುವುದಿಲ್ಲ ಎಂದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

HD Kumaraswamy Congratulations  to Siddaramaiah Janata Darshan is Called Janaspandan grg

ಮಡಿಕೇರಿ(ನ.29): ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ನಡೆಸಿದ ಜನತಾ ದರ್ಶನವನ್ನು ಜನಸ್ಪಂದನ ಎಂದಿದ್ದಾರೆ. ಸಿಎಂ ಅವರ ಜನ ಸ್ಪಂದನವನ್ನು ಅಭಿನಂದಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಮಡಿಕೇರಿ ತಾಲೂಕಿನ ಹಾಕತ್ತೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳನ್ನು ಬರಲು ಹೇಳಿ ನಾಡಿನ ಜನತೆಯ ಸಮಸ್ಯೆ ಆಲಿಸಿದ್ದಾರೆ. ಈಗಲಾದರೂ ಇವರಿಗೆ ರಾಜ್ಯದ ಜನತೆಯ ಗ್ರೌಂಡ್ ರಿಯಾಲಿಟಿ ಅರ್ಥವಾಗಿದೆ ಎಂದುಕೊಂಡಿದ್ದೇನೆ. ವಿವಿಧ ಸಮಸ್ಯೆಗಳು ಜನಸ್ಪಂದನದಲ್ಲಿ ಅರ್ಥವಾಗಿರಬಹುದು. ಒಬ್ಬ ಸಿಎಂ ಜನಸ್ಪಂದನೆ ಮಾಡುವುದನ್ನು ನಾನು ಅಭಿನಂದಿಸುತ್ತೇನೆ. ನಾನು ಎಲ್ಲವನ್ನೂ ಟೀಕಿಸುವುದಿಲ್ಲ ಎಂದರು.

ಯಾವ ಪ್ರಾಂತ್ಯದಲ್ಲಿ ನಾವು ಪ್ರಬಲ ಎನ್ನುವುದಕ್ಕಿಂತ 28 ಸ್ಥಾನಗಳಲ್ಲೂ ಗೆಲ್ಲುವುದೇ ನಮ್ಮ ಆದ್ಯತೆ: ಎಚ್‌ಡಿಕೆ

ಮುಂದಿನ ಮೂರು ತಿಂಗಳಲ್ಲಿ ಮತ್ತೆ ಜನಸ್ಪಂದನ ಮಾಡುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ. ಸಮಸ್ಯೆಗಳನ್ನು ಪರಿಹರಿಸಲು ಅಧಿಕಾರಿಗಳಿಗೆ 3 ತಿಂಗಳ ಗಡುವು ನೀಡಿದ್ದಾರೆ. ಈಗ ಅವರಿಗೆ ಅರ್ಥ ಆಗಿರಬಹುದು. ಅಧಿಕಾರಿಗಳು ಹೇಗೆ ಕೆಲಸ ಮಾಡುತ್ತಿದ್ದಾರೆ ಎಂದು. ನಾನು ಬೆಳಗ್ಗೆ 9 ರಿಂದ ರಾತ್ರಿ 1 ಗಂಟೆವರೆಗೆ ಜನಸ್ಪಂದನ ಮಾಡಿದ್ದೆ. ಅಂದು ಇದ್ದ ಸಮಸ್ಯೆಗಳು ಈಗಲೂ ಮುಂದುವರಿದಿವೆ ಎಂದು ವಿಶ್ಲೇಷಿಸಿದರು.

ಬಿಜೆಪಿ ಸರ್ಕಾರದಲ್ಲಿ ಕಂದಾಯ ಸಚಿವರಾಗಿದ್ದ ಆರ್. ಅಶೋಕ್ ಅವರು ಕೂಡ ಜನಸ್ಪಂದನ ಮಾಡಿದ್ದರು. ಜಿಲ್ಲಾಧಿಕಾರಿಗಳ ನಡಿಗೆ ಹಳ್ಳಿ ಕಡೆಗೆ ಅಂತ ಮಾಡಿದ್ದರು. ತಿಂಗಳಿಗೆ ಒಂದು ಗ್ರಾಮಕ್ಕೆ ಅವರು ಭೇಟಿ ನೀಡಿದ್ದರು. ಈಗ ಸಿಎಂ ಅವರು ಜನಸ್ಪಂದನ ಮಾಡಿದ್ದಾರೆ. ಅವರಿಗೆ ಮನವರಿಕೆ ಆಗಿರುವ ಕಷ್ಟಗಳನ್ನು ಸಿಎಂ ಆದಷ್ಟು ಬಗೆಹರಿಸಲಿ. ಆಗ ಅವು ಅರ್ಥಪೂರ್ಣ ಆಗುತ್ತವೆ ಎಂದು ಹೆಚ್‌ಡಿಕೆ ಹೇಳಿದರು.

ರಾಜ್ಯದಲ್ಲಿ ಬಿಜೆಪಿ ಜೆಡಿಸ್ 28 ಸ್ಥಾನ ಗೆಲ್ಲುವ ನಿಟ್ಟಿನಲ್ಲಿ ಶ್ರಮವಹಿಸಲಿದೆ ಎಂದರು. ಭ್ರೂಣ ಹತ್ಯೆ ವಿಚಾರ ಬಹಳ ಅಮಾನವೀಯ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದರು.
ಪಕ್ಷ ಸಂಘಟನೆಯಲ್ಲಿ ಸ್ವಲ್ಪ ಕೊರತೆ ಇದೆ. ನಮ್ಮ‌ಶಕ್ತಿ ಕಡಿಮೆ. ಆದ್ದರಿಂದ‌ ಜಿಲ್ಲೆಯಲ್ಲಿ ಕಾಂಗ್ರೆಸ್ ಗೆದ್ದಿದೆ. ಹಾಗಾಗಿ ಜಿಲ್ಲೆಯಲ್ಲಿ ಪಕ್ಷದ ಸಂಘಟನೆಯಾಗಬೇಕಿದೆ ಎಂದು ಕುಮಾರಸ್ವಾಮಿ ಅಭಿಪ್ರಾಯಪಟ್ಟರು.

ಲೋಕಸಭಾ ಚುನಾವಣೆ ಹಿನ್ನೆಲೆ ಪಕ್ಷ ಸಂಘಟನೆ ಮಾಡಬೇಕಾಗಿದೆ. ಮತ್ತೆ ಮೈತ್ರಿ ಸರ್ಕಾರ ಬರಬೇಕೆನ್ನುವ ಜನರ ನಿರೀಕ್ಷೆ ಇದೆ. ಕಾಂಗ್ರೆಸ್ ಸರ್ಕಾರದ ಬಗ್ಗೆ ಜನರಿಗೆ ಅಸಮಾಧಾನವಿದೆ. ಗ್ಯಾರೆಂಟಿಗಳ ವಿಚಾರದಲ್ಲಿ ಹಲವು ದೋಷಗಳಿವೆ ಎಂದರು.

ನಿಗಮ ಮಂಡಳಿ ಅಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನಮಾನ: ಹಣ ಯಾರು ಕಾಂಗ್ರೆಸ್ ಪಕ್ಷ ಕೊಡುತ್ತಾ?

ಸಂತ್ರಸ್ತರ ನಿರ್ಲಕ್ಷ್ಯ ಆರೋಪ: ಜಂಬೂರಿನಲ್ಲಿ ಇನ್ಫೋಸಿಸ್ ‌ಮನೆ ಹಸ್ತಾಂತರ ವಿಳಂಬದ ಬಗ್ಗೆ ಮಾತನಾಡಿದ ಅವರು, ನಮ್ಮ ಸರ್ಕಾರ ಗೆದ್ದಾಗ ಸಂತ್ರಸ್ತರಿಗೆ ಸಮರ್ಪಕ ಪರಿಹಾರ ನೀಡಿದ್ದೆವು. ನಂತರ ಬಂದ ಸರ್ಕಾರಗಳು ಸಂತ್ರಸ್ತರನ್ನು ನಿರ್ಲಕ್ಷ್ಯ ಮಾಡಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಾರ್ಯಕರ್ತರ ಸಭೆ ನಡೆಸಿ ಜೆಡಿಎಸ್ ಜಿಲ್ಲಾಧ್ಯಕ್ಷರ ನೇಮಕ ಕುರಿತು ಚರ್ಚೆ ನಡೆಯಿತು. ಸಭೆಯಲ್ಲಿ ಮಾಜಿ ಶಾಸಕ ಮಹಾದೇವ್, ಮಾಜಿ ಸಚಿವ ಸಾರಾ ಮಹೇಶ್ ಜಿಲ್ಲಾ ಜೆಡಿಎಸ್ ಮುಖಂಡ ಸಿ.ಎಲ್ ವಿಶ್ವ, ಮನ್ಸೂರ್ ಆಲಿ ಮತ್ತಿತರು ಪಾಲ್ಗೊಂಡಿದ್ದರು.

Latest Videos
Follow Us:
Download App:
  • android
  • ios