ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾಗ ಅವರ ಮಗನೇ ಸೋತಿಲ್ಲವೇ? ಮುಖ್ಯಮಂತ್ರಿ ಆಗಿದ್ದಾಗಲೇ ಮಗನನ್ನ ಗೆಲ್ಲಿಸಿಕೊಳ್ಳಲು ಆಗಲಿಲ್ಲ. ಈಗ ಹೇಗೆ ಗೆಲ್ಲೋಕೆ ಆಗುತ್ತದೆ? ಕುಮಾರಸ್ವಾಮಿ ಸೋಲುವುದಂತು ಗ್ಯಾರಂಟಿ. ಚುನಾವಣೆ ಸಂಬಂಧ ಸುಮಲತಾ ಜೊತೆ ಮಾತನಾಡಿಲ್ಲ. ನಮ್ಮ ಅಭ್ಯರ್ಥಿ ಸ್ಟ್ರಾಂಗ್ ಇದ್ದಾರೆ. ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿಯನ್ನು ನಾವು ಸೋಲಿಸುತ್ತೇವೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ 

ಮೈಸೂರು(ಮಾ.28): ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಂಡ್ಯದಲ್ಲಿ ಸೋಲುವುದು ಗ್ಯಾರಂಟಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯ ನುಡಿದರು. ಬುಧವಾರ ಸುದ್ದಿಗಾರರೊಡನೆ ಮಾತನಾಡಿದ ಅವರು, ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೊಸ ಮುಖವಾದರೆ, ಕುಮಾರಸ್ವಾಮಿಯೂ ಹೊಸ ಮುಖ ಅಲ್ಲವೇ? ನಮ್ಮ ಅಭ್ಯರ್ಥಿ ಮಂಡ್ಯದವರು. ಕುಮಾರಸ್ವಾಮಿ ಹಾಸನದವರಲ್ಲವೇ ಎಂದು ಪ್ರಶ್ನಿಸಿದರು.

Add Asianetnews Kannada as a Preferred SourcegooglePreferred

ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾಗ ಅವರ ಮಗನೇ ಸೋತಿಲ್ಲವೇ? ಮುಖ್ಯಮಂತ್ರಿ ಆಗಿದ್ದಾಗಲೇ ಮಗನನ್ನ ಗೆಲ್ಲಿಸಿಕೊಳ್ಳಲು ಆಗಲಿಲ್ಲ. ಈಗ ಹೇಗೆ ಗೆಲ್ಲೋಕೆ ಆಗುತ್ತದೆ? ಕುಮಾರಸ್ವಾಮಿ ಸೋಲುವುದಂತು ಗ್ಯಾರಂಟಿ. ಚುನಾವಣೆ ಸಂಬಂಧ ಸುಮಲತಾ ಜೊತೆ ಮಾತನಾಡಿಲ್ಲ. ನಮ್ಮ ಅಭ್ಯರ್ಥಿ ಸ್ಟ್ರಾಂಗ್ ಇದ್ದಾರೆ. ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿಯನ್ನು ನಾವು ಸೋಲಿಸುತ್ತೇವೆ ಎಂದರು.

ಲೋಕಸಭಾ ಚುನಾವಣೆ ಬಳಿಕ ಸಿದ್ದರಾಮಯ್ಯ ಇಳಿಯೋದು ಗ್ಯಾರಂಟಿ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕೊಟ್ಟ ಕಾರಣವೇನು? 

ಕೋಲಾರಕ್ಕೆ ಟಿಕೆಟ್ ಘೋಷಣೆಯಾಗಿಲ್ಲ

ಕೋಲಾರದಲ್ಲಿ ಅಸಮಾಧಾನ ಇರುವುದು ಸತ್ಯ. ದಲಿತರ ಎಡಗೈ ಬದಲು ಬಲಗೈ ಸಮುದಾಯಕ್ಕೆ ಟಿಕೆಟ್ ಕೊಡಬೇಕು ಎಂಬ ಒತ್ತಾಯ ಕೇಳಿ ಬಂದಿದೆ. ಈ ಬಗ್ಗೆ ನಾನು ಅವರ ಜೊತೆ ಮಾತನಾಡಿದ್ದೇನೆ. ಸಮಾಧಾನವಾಗಿ ಇರಿ ಅಂತ ಹೇಳಿದ್ದೇನೆ. ಏಕೆಂದರೆ ಕೋಲಾರಕ್ಕೆ ಇನ್ನೂ ಟಿಕೆಟ್ ಘೋಷಣೆ ಆಗಿಲ್ಲ. ಆದರೂ ಎಡಗೈ ಅವರಿಗೆ ಸಿಗುತ್ತೆ ಅಂತ ಭಯಪಟ್ಟಿದ್ದಾರೆ ಎಂದರು.