ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಕೊರೋನಾದಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆದ್ರೆ, ಸಾರ್ವಜನಿಕರ ಭೇಟಿಗೆ ಅವಕಾಶ ಇಲ್ಲ..

ಬೆಂಗಳೂರು, (ಏ.24) : ಕೋವಿಡ್ ಪಾಸಿಟಿವ್ ಆಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೊರೋನಾ ಸೋಂಕಿನಿಂದ ಬೆಂಗಳೂರಿನ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದ ಕುಮಾರಸ್ವಾಮಿ ಇಂದು (ಶನಿವಾರ) ಡಿಸ್ಚಾರ್ಜ ಆಗಿದ್ದಾರೆ.

ಕೊರೋನಾ ಚಿಕಿತ್ಸೆ ಪಡೆಯುತ್ತಿರುವ ಎಚ್‌ಡಿಕೆ ಭೇಟಿ ಮಾಡಿದ ಡಾ. ಸುಧಾಕರ್

ಇನ್ನು ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಿಮ್ಮೆಲ್ಲರ ಪ್ರೀತಿ, ಅಕ್ಕರೆ, ಪ್ರಾರ್ಥನೆಯ ಫಲವಾಗಿ ನಾನು ಇಂದು ಕೊರೋನಾ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ಬಂದಿದ್ದೇನೆ. ನಿಮ್ಮೆಲ್ಲರ ಪ್ರೀತಿಯ ಕಾಳಜಿಗೆ ನನ್ನ ಪ್ರಣಾಮಗಳು ಎಂದಿದ್ದಾರೆ.

Scroll to load tweet…

ಇನ್ನೂ ಎರಡು ವಾರಗಳ ಕಾಲ ವೈದ್ಯರ ಸಲಹೆ ಮೇರೆಗೆ ಸಾರ್ವಜನಿಕರನ್ನು ಭೇಟಿ ಮಾಡಲು ಸಾಧ್ಯವಿಲ್ಲ. ದಯಮಾಡಿ ಸಹಕರಿಸಿ. ನಿಮ್ಮ ಪ್ರೀತಿಯ ಋಣಭಾರ ನನ್ನ ಮೇಲೆ ಸದಾ ಹೀಗೆ ಇರಲಿ ಎಂದು ಎಚ್ ಡಿಕೆ ಟ್ವೀಟ್ ಮಾಡಿದ್ದಾರೆ.