ಮೋದಿ ಪ್ರಮಾಣ ವಚನಕ್ಕೆ ಎಚ್‌ಡಿಕೆ ಕುಟುಂಬ ದಿಲ್ಲಿಗೆ: ಬಿಜೆಪಿಯಿಂದ ಕರೆ?
ಸತತ ಮೂರನೇ ಬಾರಿ ಪ್ರಧಾನಿ ಹುದ್ದೆ ಅಲಂಕರಿಸುತ್ತಿರುವ ನರೇಂದ್ರಮೋದಿ ಅವರ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗಿಯಾಗಲು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಕುಟುಂಬವು ದೆಹಲಿಗೆ ಪ್ರಯಾಣಿಸಿದೆ.
ಬೆಂಗಳೂರು (ಜೂ.09): ಸತತ ಮೂರನೇ ಬಾರಿ ಪ್ರಧಾನಿ ಹುದ್ದೆ ಅಲಂಕರಿಸುತ್ತಿರುವ ನರೇಂದ್ರಮೋದಿ ಅವರ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗಿಯಾಗಲು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಕುಟುಂಬವು ದೆಹಲಿಗೆ ಪ್ರಯಾಣಿಸಿದೆ. ಮೋದಿ ಸಚಿವ ಸಂಪುಟದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರಿಗೂ ಸಚಿವ ಸ್ಥಾನದ ಅವಕಾಶ ಸಿಗುವ ಸಾಧ್ಯತೆ ಇರುವ ಕಾರಣ ಅವರ ಪ್ರತಿಜ್ಞಾವಿಧಿ ಸ್ವೀಕಾರಕ್ಕೆ ಸಾಕ್ಷಿಯಾಗಲು ಕುಟುಂಬ ಸದಸ್ಯರು ದೆಹಲಿಗೆ ತೆರಳಿದ್ದಾರೆ.
ಕುಮಾರಸ್ವಾಮಿ ಅವರಿಗೆ ಕರೆ ಮಾಡಿ ದೆಹಲಿಗೆ ಬರುವಂತೆ ತಿಳಿಸಿರುವ ಹಿನ್ನೆಲೆಯಲ್ಲಿ ಹೋಗಿದ್ದಾರೆ ಎಂದು ಹೇಳಲಾಗಿದೆ. ಕುಮಾರಸ್ವಾಮಿ ಪತ್ನಿ ಅನಿತಾ, ಪುತ್ರ ನಿಖಿಲ್, ಸೊಸೆ ರೇವತಿ ಅವರು ದೆಹಲಿಗೆ ತೆರಳಿದರು. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮತ್ತು ಕುಮಾರಸ್ವಾಮಿ ಈಗಾಗಲೇ ದೆಹಲಿಯಲ್ಲಿಯೇ ವಾಸ್ತವ್ಯ ಹೂಡಿದ್ದಾರೆ.
ಪ್ರಜ್ವಲ್ ರೇವಣ್ಣಗೆ ಧ್ವನಿ ಪರೀಕ್ಷೆ: ಲೈಂಗಿಕ ವಿಡಿಯೋದಲ್ಲಿರುವ ಪುರುಷ ಧ್ವನಿ ಪತ್ತೆಹಚ್ಚಲು ಟೆಸ್ಟ್!
ವಾಲ್ಮೀಕಿ ಕೇಸ್ ಸಿಎಂಗೆ ಗೊತ್ತಿದ್ದೇ ನಡೆದಿದೆ: ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮ ಹಣವರ್ಗಾವಣೆ ಪ್ರಕರಣವು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಅವರಿಗೆ ಗೊತ್ತಿದ್ದೇ ನಡೆದಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರಕರಣದಲ್ಲಿ 80-85 ಕೋಟಿ ರು. ರವಾನೆ ಆಗಿರುವ ಮಾಹಿತಿ ಇದೆ. ರಾಜೀನಾಮೆ ನಿರ್ಧಾರ ಮೊದಲೇ ಆಗಬೇಕಿತ್ತು. ಇಷ್ಟೆಲ್ಲಾ ಕೇವಲ ಒಬ್ಬ ಸಚಿವರಿಂದ ಆಗಿರುವುದಲ್ಲ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಇಬ್ಬರೂ ಸೇರಿಯೇ ಮಾಡಿರುವುದು ಎಂದು ಕಿಡಿಕಾರಿದರು.
ರಾಜೀನಾಮೆ ಸಂಬಂಧ ಸಚಿವರಿಗೆ ನಾವು ಹೇಳಿಲ್ಲ ಎಂದು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹೇಳಿಕೆ ನೀಡಿದ್ದಾರೆ. ಇದು ಕೇವಲ ಡ್ರಾಮಾ ಮಾತ್ರ. ಸಚಿವರಿಗೆ ರಾಜೀನಾಮೆ ನೀಡಿ ಎನ್ನುವ ಧೈರ್ಯ ಇವರಿಗೆ ಇರಲಿಲ್ಲ. ಹಗರಣದಲ್ಲಿ ದೊಡ್ಡ ಮಟ್ಟದ ಕೈಗಳಿರುವುದೇ ಇದಕ್ಕೆ ಕಾರಣ. ಕಳೆದ ಮಾರ್ಚ್ ತಿಂಗಳಿನಲ್ಲಿಯೇ ಹಗರಣ ನಡೆದಿದ್ದು, ಇವರೆಲ್ಲರೂ ಸೇರಿ ಮುಚ್ಚಿಟ್ಟಿದ್ದಾರೆ. ಅಧಿಕಾರಿ ಸಾವಿನಿಂದ ಮತ್ತು ಮಾಧ್ಯಮಗಳ ಮೂಲಕ ಇದು ಹೊರ ಬಾರದಿದ್ದರೆ ಮುಚ್ಚಿ ಹಾಕುತ್ತಿದ್ದರು ಎಂದು ದೂರಿದರು.
ಘಟಾನುಘಟಿಗಳ ಕ್ಷೇತ್ರದಲ್ಲೇ ಕಾಂಗ್ರೆಸ್‌ಗೆ ಹಿನ್ನಡೆ: ಲೀಡ್ ಕೊಡಿಸದ ಸಚಿವರ ಮೇಲೆ ಕ್ರಮ ಆಗುತ್ತಾ?
ಹಗರಣ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಕೇವಲ ಒಂದು ಗಂಟೆಯಲ್ಲಿ ಹಣ ಬಿಡುಗಡೆಯಾಗಲು ಸಹಾಯ ಮಾಡಿದ್ದು ಯಾರು? ಅದೆಲ್ಲಾ ಹೊರಗೆ ಬರಬೇಕು. ತೆಲಂಗಾಣದ ಚುನಾವಣೆಗೆ ಹೋಗಿರುವ ಹಣ ಇದಾಗಿದೆ. ಹಗರಣದಲ್ಲಿ ಯಾರ, ಯಾರ ಪಾತ್ರ ಏನಿದೆ? ಎಲ್ಲವೂ ಹೊರಗೆ ಬರಬೇಕು. ವಾಲ್ಮೀಕಿ ನಿಗಮದ ಹಣ ತೆಲಂಗಾಣಕ್ಕೆ ಹೋಗಿದೆ ಎನ್ನುವುದು ತನಿಖೆ ಬಳಿಕ ಗೊತ್ತಾಗಲಿದೆ ಎಂದರು.