ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿ ತಮ್ಮ ಮುಂದಿನ ಪ್ಲಾನ್‌ ಏನು ಎಂಬುದನ್ನು ಮಾಧ್ಯಮದ ಮುಂದೆ ಹೇಳಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಟಾಂಗ್ ನೀಡಿದ್ದಾರೆ. 

ಬೆಂಗಳೂರು (ಅ.11): ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿ ತಮ್ಮ ಮುಂದಿನ ಪ್ಲಾನ್‌ ಏನು ಎಂಬುದನ್ನು ಮಾಧ್ಯಮದ ಮುಂದೆ ಹೇಳಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಟಾಂಗ್ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಶಿವಕುಮಾರ್ ಮತ್ತೆ ಶಾಶ್ವತವಾಗಿ ತಿಹಾರ್ ಜೈಲಿಗೆ ಹೋದರೂ ಅಚ್ಚರಿ ಇಲ್ಲ ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು. ಕುಮಾರಣ್ಣ ಹಿಂದೆ ಏನು ಮಾಡಿದ್ದರು, ಮುಂದೆ ಏನು ಮಾಡಲು ಹೊರಟಿದ್ದಾರೆ ಎಂಬುದನ್ನು ತಿಳಿಸಿದ್ದಾರೆ. ಕುಮಾರಸ್ವಾಮಿ ತಮ್ಮ ಪ್ಲಾನ್ ಏನಿದೆ, ಏನೆಲ್ಲಾ ಮಾಡಲು ಸಾಧ್ಯ ಎಂಬುದನ್ನು ಹೇಳಿದ್ದಾರೆ. 

ಈ ಹಿಂದೆ ಅವರು ಮುಖ್ಯಮಂತ್ರಿಯಾಗಿದ್ದಾಗ ತನ್ನ ತಂಗಿ, ತಮ್ಮ ಹಾಗೂ ಹೆಂಡತಿ ಮೇಲೆ ಕೇಸ್ ಹಾಕಿದ್ದನ್ನು ಈಗ ನೆನಪಿಸಿಕೊಂಡಿದ್ದಾರೆ. ಮುಂದೆ ಏನು ಮಾಡಬೇಕು ಅಂದುಕೊಂಡಿದ್ದಾರೋ ಅದನ್ನು ಹೇಳಿದ್ದಾರೆ. ಈ ವಿಚಾರವಾಗಿ ಮುಂದೆ ಮಾತನಾಡೋಣ ಎಂದು ಹೇಳಿದರು. ಮೈತ್ರಿ ಸರ್ಕಾರ ಬೀಳಲು ಡಿ.ಕೆ.ಶಿವಕುಮಾರ್ ಅವರೇ ಕಾರಣ, ಈ ಸರ್ಕಾರ ಶೀಘ್ರ ಉರುಳಿ ಹೋಗುತ್ತದೆ ಎಂಬ ಕುಮಾರಸ್ವಾಮಿ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಕುಮಾರಸ್ವಾಮಿ ಬಹಳ ದೊಡ್ಡವರು. ಅವರ ನುಡಿ ಮುತ್ತುಗಳು ಏನಿವೆ, ಅವರು ಏನು ಹೇಳಿದ್ದಾರೆ ಎಂದು ಸಂಪೂರ್ಣವಾಗಿ ಮಾಹಿತಿ ಪಡೆದು ಉತ್ತರಿಸುತ್ತೇನೆ ಎಂದರು.

ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸಲು ಬೈಕ್‌ ರ್‍ಯಾಲಿ: ಚಕ್ರವರ್ತಿ ಸೂಲಿಬೆಲೆ

ಎಚ್‌ಡಿಕೆಗೆ ಮಾನಸಿಕ ಸ್ಥಿಮಿತತೆ ಇಲ್ಲ: ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್‌ ಪಕ್ಷ ಮತ್ತು ಕಳೆದ ಲೋಕಸಭಾ ಚುನಾವಣೆಯಲ್ಲಿ ನಿಖಿಲ್‌ ಕುಮಾರಸ್ವಾಮಿ ಸೋಲಿನಿಂದ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು ಮಾನಸಿಕ ಸ್ಥಿಮಿತತೆ ಕಳೆದುಕೊಂಡು ಹತಾಶೆಯಿಂದ ಮಾತನಾಡುತ್ತಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಎಂ.ಎಸ್‌.ಚಿದಂಬರ್‌ ಆರೋಪಿಸಿದರು. ಅಧಿಕಾರ ಸಿಗುವ ಸಮಯದಲ್ಲಷ್ಟೇ ಡಿಕೆಶಿ ಇವರಿಗೆ ಜೋಡೆತ್ತುಗಳಂತೆ ಕಾಣುತ್ತಾರೆ. ಅಧಿಕಾರವಿಲ್ಲದಿರುವ ಸಮಯದಲ್ಲಿ ವಿರೋಧಿಯಂತೆ ಬಿಂಬಿಸುತ್ತಾರೆ. 

ತಾಯಿ ಕೈಮುಗಿತೀನಿ, ಬಡವರ ಕೆಲ್ಸ ಮಾಡಿಕೊಡಿ: ಸಚಿವ ಕೃಷ್ಣ ಭೈರೇಗೌಡ

ಉಪಮುಖ್ಯಮಂತ್ರಿಗಳಾಗಿ ಡಿ.ಕೆ.ಶಿವಕುಮಾರ್‌ ಮಾಡುವ ಒಳ್ಳೆಯ ಕೆಲಸಗಳನ್ನು ಸಹಿಸಿಕೊಳ್ಳಲಾಗದೆ ಬಿಜೆಪಿ ಜೊತೆಯಲ್ಲಿ ಅಪವಿತ್ರ ಮೈತ್ರಿ ಮಾಡಿಕೊಂಡು ಡಿ.ಕೆ.ಶಿವಕುಮಾರ್‌ ವಿರುದ್ಧ ಷಡ್ಯಂತ್ರ ರೂಪಿಸುತ್ತಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ. ಆಜ್ಯದ ಜನರ ಬೆಂಬಲದಿಂದ 136 ಶಾಸಕರಿಂದ ಸಂವಿಧಾನಬದ್ಧವಾಗಿ ರಚನೆಯಾಗಿರುವ ಸರ್ಕಾರವನ್ನು ಪಿತೂರಿಯಿಂದ ಅಸ್ಥಿರಗೊಳಿಸುವ ವ್ಯರ್ಥ ಪ್ರಯತ್ನ ಮಾಡುತ್ತಿದ್ದಾರೆ. ಎರಡು ಬಾರಿ ಮುಖ್ಯಮಂತ್ರಿಯಾಗಿರುವ ಅವರು ಘನತೆಗೆ ತಕ್ಕಂತೆ ಮಾತನಾಡಲಿ. ಅವರ ಮಾತಿನ ವೈಖರಿ ಇದೇ ರೀತಿ ಮುಂದುವರೆದರೆ ಜಿಲ್ಲಾದ್ಯಂತೆ ಎಚ್‌ಡಿಕೆ ವಿರುದ್ಧ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.